ಗೋಪಿನಾಥ ಬೆಟ್ಟದಲ್ಲಿ ನೆರವೇರಿತು ಧರ್ಮ ಕೀರ್ತಿರಾಜ್ ಅಭಿನಯದ ನೂತನ ಚಿತ್ರದ ಮುಹೂರ್ತ

Dharma Keerthiraj: ಮಾಜಿ ಶಾಸಕರಾದ ಕೆ.ಪಿ.ಬಚ್ಚೇಗೌಡ ಅವರು ಆರಂಭ ಫಲಕ ತೋರಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಎಂ.ಮುನೇಗೌಡ ಕ್ಯಾಮೆರಾ ಚಾಲನೆ ಮಾಡಿದರು.                      

Written by - YASHODHA POOJARI | Last Updated : Jul 2, 2024, 08:45 PM IST
    • ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸುತ್ತಿರುವ "ಪ್ರೊಡಕ್ಷನ್ ನಂ ೧" ಚಿತ್ರ
    • ಆಕ್ಷನ್ ಡ್ರಾಮ ಜಾನರ್ ನ ಈ ಚಿತ್ರಕ್ಕೆ ನಿರ್ದೇಶಕ ರಮೇಶ್ ರಾಜ್ ಚಿತ್ರಕಥೆ
    • ವಂಟೂರು ಶ್ರೀನಿವಾಸ್ ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ
ಗೋಪಿನಾಥ ಬೆಟ್ಟದಲ್ಲಿ ನೆರವೇರಿತು ಧರ್ಮ ಕೀರ್ತಿರಾಜ್ ಅಭಿನಯದ ನೂತನ ಚಿತ್ರದ ಮುಹೂರ್ತ  title=
Sandalwood

ಲಿತನ್ಯ ಗೋಲ್ಡ್ ಲೀಫ್ ಮೀಡಿಯಾ ವೆಂಚರ್ಸ್ ಪ್ರೈ ಲಿ ಹಾಗೂ ಸಾರ್ಥಕ್ ಕ್ರಿಯೇಟರ್ಸ್ ಲಾಂಛನದಲ್ಲಿ ಜಿ.ಹೆಚ್.ಜನಾರ್ದನ್ ಹಾಗೂ ಸಿ.ಎಲ್ ಹರ್ಷವರ್ಧನ್ ನಿರ್ಮಿಸುತ್ತಿರುವ, ರಮೇಶ್ ರಾಜ್ ಅವರ ನಿರ್ದೇಶನದಲ್ಲಿ ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸುತ್ತಿರುವ "ಪ್ರೊಡಕ್ಷನ್ ನಂ ೧" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಚಿಕ್ಕಬಳ್ಳಾಪುರದ ಗೋಪಿನಾಥ ಬೆಟ್ಟದಲ್ಲಿರುವ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.

ಇದನ್ನೂ ಓದಿ: ರೋಹಿತ್ ಶರ್ಮಾ ವಿಕೆಟ್ ಕಬಳಿಸಿ ಮಿಂಚಿದ ದ.ಆಫ್ರಿಕಾದ ಕೇಶವ್ ಮಹಾರಾಜ್ ಹಿನ್ನೆಲೆ ಏನು ಗೊತ್ತಾ? ಈತ ಆಂಜನೇಯನ ಪರಮಭಕ್ತ!

ಮಾಜಿ ಶಾಸಕರಾದ ಕೆ.ಪಿ.ಬಚ್ಚೇಗೌಡ ಅವರು ಆರಂಭ ಫಲಕ ತೋರಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಎಂ.ಮುನೇಗೌಡ ಕ್ಯಾಮೆರಾ ಚಾಲನೆ ಮಾಡಿದರು.                      

ಆಕ್ಷನ್ ಡ್ರಾಮ ಜಾನರ್ ನ ಈ ಚಿತ್ರಕ್ಕೆ ನಿರ್ದೇಶಕ ರಮೇಶ್ ರಾಜ್ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. "ಗ್ಯಾಂಗ್ ಲೀಡರ್", " ತವರಿನ ಋಣ" ಚಿತ್ರಗಳನ್ನು ನಿರ್ದೇಶಿಸಿರುವ ರಮೇಶ್ ರಾಜ್ ಅವರಿಗೆ ಇದು ಮೂರನೇ ಚಿತ್ರ. ಈಶ್ವರಿ ಸುರೇಶ್ ಛಾಯಾಗ್ರಹಣ, ಶಶಿ ಸಂಕಲನ, ಬಿ.ವಿ.ರೆಡ್ಡಿ ಸಹ ನಿರ್ದೇಶನ ಹಾಗೂ ಮಂಜುನಾಥ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ. ವಂಟೂರು ಶ್ರೀನಿವಾಸ್ ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.     ‌       

ಇದನ್ನೂ ಓದಿ: ಇವು ಭಗವಾನ್ ಶ್ರೀಕೃಷ್ಣನ ಅತ್ಯಂತ ಮೆಚ್ಚಿನ ರಾಶಿಗಳು: ಬೇಡಿದ ತಕ್ಷಣ ಅನಂತ ಸಿರಿ ಸಂಪತ್ತಿನ್ನೇ ಧಾರೆ ಎರೆಯುತ್ತಾನೆ ದೇವಕಿಸುತ

ಧರ್ಮ ಕೀರ್ತಿರಾಜ್ ಅವರಿಗೆ ಪ್ರಿಯಾ ಹೆಗ್ಡೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ. ಮುಂದಿನ ವಾರದಿಂದ ಚಿತ್ರೀಕರಣ ಆರಂಭವಾಗುತ್ತಿದೆ. ಚಿಕ್ಕಬಳ್ಳಾಪುರ, ಬೆಂಗಳೂರು, ಮಡಿಕೇರಿ ಹಾಗೂ ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News