‘ಘೋಸ್ಟ್’ ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣ: ಶಿವಣ್ಣ ಚಿತ್ರಕ್ಕೆ ಅದ್ಧೂರಿ ಸೆಟ್ ನಿರ್ಮಾಣ

ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸಲಾಗಿರುವ ಹದಿನೈದಕ್ಕೂ ಅಧಿಕ ಸೆಟ್ ಗಳಲ್ಲಿ 28 ದಿನಗಳ ಚಿತ್ರೀಕರಣ ನಡೆದಿದೆ. ಡಾ.ಶಿವರಾಜ್ ಕುಮಾರ್, ಜಯರಾಮ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್ ಮುಂತಾದ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

Written by - YASHODHA POOJARI | Edited by - Bhavishya Shetty | Last Updated : Nov 23, 2022, 08:10 AM IST
    • ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ "ಘೋಸ್ಟ್‌" ಚಿತ್ರ
    • ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ
    • ನಿರ್ದೇಶಕ ಶ್ರೀನಿ ಅವರು ಸಿನಿಮಾದ ಕಥೆ, ಚಿತ್ರಕಥೆ ಬರೆದಿದ್ದಾರೆ
‘ಘೋಸ್ಟ್’ ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣ: ಶಿವಣ್ಣ ಚಿತ್ರಕ್ಕೆ ಅದ್ಧೂರಿ ಸೆಟ್ ನಿರ್ಮಾಣ title=
Ghost

ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ  ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ "ಘೋಸ್ಟ್‌" ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.

ಇದನ್ನೂ ಓದಿ: Rashmika Mandanna : ರಶ್ಮಿಕಾ ಮಂದಣ್ಣ - ವಿಜಯ್‌ ದೇವರಕೊಂಡ ಮದುವೆಯಾಗಲಿದ್ದಾರಾ!?

ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸಲಾಗಿರುವ ಹದಿನೈದಕ್ಕೂ ಅಧಿಕ ಸೆಟ್ ಗಳಲ್ಲಿ 28 ದಿನಗಳ ಚಿತ್ರೀಕರಣ ನಡೆದಿದೆ. ಡಾ.ಶಿವರಾಜ್ ಕುಮಾರ್, ಜಯರಾಮ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್ ಮುಂತಾದ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಮೋಹನ್ ಬಿ ಕೆರೆ ಈ ಚಿತ್ರದ ಕಲಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ದ್ವಿತೀಯ ಹಂತದ ಚಿತ್ರೀಕರಣ ಡಿಸೆಂಬರ್ ನಲ್ಲಿ ಮೈಸೂರಿನಲ್ಲಿ ಆರಂಭವಾಗಲಿದೆ.

ನಿರ್ದೇಶಕ ಶ್ರೀನಿ ಅವರು ಸಿನಿಮಾದ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ "ಘೋಸ್ಟ್‌ " ಚಿತ್ರಕ್ಕಿದೆ. ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ.

ಇದನ್ನೂ ಓದಿ: Urfi Javed Video: ಗ್ಲಾಸ್‌ ಸ್ವಲ್ಪ ಸರಿದರೂ..! ಡ್ರೆಸ್ಸೇ ಇಲ್ಲದೆ ಇದೆಂಥಾ ಫ್ಯಾಷನ್?

ಶಿವರಾಜಕುಮಾರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News