"ಟ್ರೆಂಡಿಂಗಲ್ ಬರ್ಬೇಕಂದ್ರೆ ಏನ್ ಮಾಡ್ಬೇಕು"… ಈ ಹಾಡಿನ ಮೂಲಕ ಸಲಹೆ ಕೊಟ್ಟ ‘ಸೂತ್ರಧಾರಿ’

Sutradhari Movie: ಚಂದನ್ ಶೆಟ್ಟಿ ಈ ಹಾಡಿಗೆ ಸಂಗೀತ ನೀಡಿ, ಹಾಡಿದ್ದಾರೆ. ಮೋಹನ್ ಮಾಸ್ಟರ್ ನೃತ್ಯ ನಿರ್ದೇಶಿಸಿರುವ ಈ ಹಾಡಿಗೆ ಚಂದನ್ ಶೆಟ್ಟಿ ಹಾಗೂ ಅಪೂರ್ವ ಹೆಜ್ಜೆ ಹಾಕಿದ್ದಾರೆ.

Written by - Zee Kannada News Desk | Edited by - Bhavishya Shetty | Last Updated : Aug 28, 2023, 12:22 PM IST
    • ‘ಡ್ಯಾಶ್’ ಸಾಂಗ್ ಈಗಾಗಲೇ ಹದಿನೇಳು ಮಿಲಿಯನ್ ವೀಕ್ಷಣೆಯಾಗಿ ಜನರ ಮನ ಗೆದ್ದಿದೆ
    • ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಒಂದು ಮಿಲಿಯನ್ ವೀಕ್ಷಣೆಯಾಗಿದೆ
    • ಈ ಹಾಡಿನ ಬಗ್ಗೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು
"ಟ್ರೆಂಡಿಂಗಲ್ ಬರ್ಬೇಕಂದ್ರೆ ಏನ್ ಮಾಡ್ಬೇಕು"… ಈ ಹಾಡಿನ ಮೂಲಕ ಸಲಹೆ ಕೊಟ್ಟ ‘ಸೂತ್ರಧಾರಿ’ title=
Sutradhari Movie

Sutradhari Movie: ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ‘ಸೂತ್ರಧಾರಿ’ ಚಿತ್ರದ  ‘ಡ್ಯಾಶ್’ ಸಾಂಗ್ ಈಗಾಗಲೇ ಹದಿನೇಳು ಮಿಲಿಯನ್ ವೀಕ್ಷಣೆಯಾಗಿ ಜನರ ಮನ ಗೆದ್ದಿದೆ. ಈಗ ‘ಸೂತ್ರಧಾರಿ’ ಚಿತ್ರಕ್ಕಾಗಿ ವಿಜಯ್ ಈಶ್ವರ್ ಬರೆದಿರುವ ‘ಟ್ರೆಂಡಿಂಗಲ್ ಬರ್ಬೇಕಂದ್ರೆ ಏನ್ ಮಾಡ್ಬೇಕು’ ಎಂಬ ಹಾಡು ಇತ್ತೀಚೆಗೆ A2 music ಮೂಲಕ ಬಿಡುಗಡೆಯಾಗಿದೆ‌.

ಇದನ್ನೂ ಓದಿ: Yo-Yo Testನಲ್ಲಿ ಫೇಲ್: ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಆಯ್ಕೆಯಾಗಿದ್ದ ಟೀಂ ಇಂಡಿಯಾದ 5 ಆಟಗಾರರು ಔಟ್!

ಚಂದನ್ ಶೆಟ್ಟಿ ಈ ಹಾಡಿಗೆ ಸಂಗೀತ ನೀಡಿ, ಹಾಡಿದ್ದಾರೆ. ಮೋಹನ್ ಮಾಸ್ಟರ್ ನೃತ್ಯ ನಿರ್ದೇಶಿಸಿರುವ ಈ ಹಾಡಿಗೆ ಚಂದನ್ ಶೆಟ್ಟಿ ಹಾಗೂ ಅಪೂರ್ವ ಹೆಜ್ಜೆ ಹಾಕಿದ್ದಾರೆ. ಈ ಹಾಡಿನ ಬಗ್ಗೆ ಹಾಡು ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

“ಕಳೆದ ಡಿಸೆಂಬರ್ ನಲ್ಲಿ ಬಿಡುಗಡೆಯಾದ ನಮ್ಮ ಚಿತ್ರದ "ಡ್ಯಾಶ್" ಸಾಂಗ್ ಭರ್ಜರಿ ಯಶಸ್ಸು ಕಂಡಿದೆ. ಈಗ ಈ ಹಾಡು ಬಿಡುಗಡೆಯಾಗಿದೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಒಂದು ಮಿಲಿಯನ್ ವೀಕ್ಷಣೆಯಾಗಿದೆ. ಇಂತಹ ಜನಪ್ರಿಯ ಹಾಡು ಬರೆದುಕೊಟ್ಟ ವಿಜಯ್ ಈಶ್ವರ್ ಅವರಿಗೆ, ಸಂಗೀತ ನೀಡಿ, ಹಾಡಿ, ಅಭಿನಯಿಸಿರುವ ಚಂದನ್ ಶೆಟ್ಟಿ ಸೇರಿದಂತೆ ಇಡೀ ತಂಡಕ್ಕೆ ಧನ್ಯವಾದ ತಿಳಿಸುತ್ತೇನೆ. ಇನ್ನೊಂದು ಹಾಡು ಮುಗಿದರೆ, ಚಿತ್ರೀಕರಣ ಮುಕ್ತಾಯವಾಗುತ್ತದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುತ್ತೇನೆ” ಎಂದು ನಿರ್ಮಾಪಕ ನವರಸನ್ ತಿಳಿಸಿದರು‌.

‘ಸೂತ್ರಧಾರಿ’ ಸಿನಿಮಾದ ‘ಡ್ಯಾಶ್’ ಹಾಡು ಭರ್ಜರಿ ಹಿಟ್ ಆಗಿರುವ ಹಿನ್ನೆಲೆಯಲ್ಲಿ ಅದನ್ನು ಮೀರಿಸುವ ಮತ್ತೊಂದು ಹಾಡು ಕೊಡುವ ಜವಾಬ್ದಾರಿ ನನ್ನಗಿತ್ತು. ಈಗ ವಿಜಯ್ ಈಶ್ವರ್ ಬರೆದಿರುವ "ಏನ್ ಮಾಡ್ಬೇಕು" ಹಾಡನ್ನು ಬಿಡುಗಡೆ ಮಾಡಿದ್ದೇವೆ. ಈ ಹಾಡು ಕೂಡ ಎಲ್ಲರ ಮನ ಗೆಲ್ಲುತ್ತದೆ ಎಂದಿದ್ದಾರೆ ಚಿತ್ರದ ನಾಯಕ, ಸಂಗೀತ ನಿರ್ದೇಶಕ ಹಾಗೂ ಗಾಯಕ ಚಂದನ್ ಶೆಟ್ಟಿ.

ಸೂತ್ರಧಾರಿ ಬಗ್ಗೆ ಸಂಪೂರ್ಣ ವಿವರವನ್ನು ನಿರ್ದೇಶಕ ಕಿರಣ್ ಕುಮಾರ್ ನೀಡಿದರು. ನಾಯಕಿ ಅಪೂರ್ವ, ನಟ ಪ್ರಶಾಂತ್ ನಟನ, ಗಿರೀಶ್, ಗಣೇಶ್ ನಾರಾಯಣ್ ಮುಂತಾದವರು ತಮ್ಮ ಪಾತ್ರದ ಕುರಿತು ಮಾತನಾಡಿದರು.

ಇದನ್ನೂ ಓದಿ: ವಿವಾದ ಸೃಷ್ಟಿಸಿದ ವೈರಲ್‌ ವಿಡಿಯೋ..ಶಿಕ್ಷಕರ ಆದೇಶದಂತೆ ಅನ್ಯ‌‌ ಕೋಮಿನ ವಿದ್ಯಾರ್ಥಿಯ ಕಪಾಳಕ್ಕೆ ಬಾರಿಸಿದ ವಿದ್ಯಾರ್ಥಿಗಳು!

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೇದಿತಾ ಚಂದನ್ ಶೆಟ್ಟಿ, ನಿರ್ಮಾಪಕರಾದ ಸಂಜಯ್ ಗೌಡ, ಚೇತನ್ ಗೌಡ, ರಾಜೇಶ್, ಗೋವಿಂದರಾಜು ಹಾಗೂ ನಿರ್ದೇಶಕ ಮಹೇಶ್ ಕುಮಾರ್ ‘ಸೂತ್ರಧಾರಿ’ ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News