ಪ್ರೇಕ್ಷಕರನ್ನು ಸೆಳೆಯಲು ಟಿಕೆಟ್‌ ದರ ಕಡಿತಗೊಳಿಸಿದ ʼಡೇರ್‌ ಡೆವಿಲ್‌ ಮುಸ್ತಾಫಾʼ ಚಿತ್ರತಂಡ..!

Dare Devil Mustafa : ಕನ್ನಡದ ಖ್ಯಾತ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಕಿರುಕತೆಯನ್ನು ಆಧರಿಸಿ ತೆರೆಗೆ ಬಂದ ಸಿನಿಮಾ ʼಡೇರ್‌ ಡೆವಿಲ್‌ ಮುಸ್ತಾಫಾʼ ಮೂರನೇ ವಾರವೂ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.   

Written by - Savita M B | Last Updated : Jun 6, 2023, 02:44 PM IST
  • ಮೂರನೇ ವಾರವೂ ಯಶಸ್ವಿ ಪ್ರದರ್ಶನ ಕಾಣುತ್ತಿರೋ ಸಿನಿಮಾ
  • ವಿದೇಶ್ದಲ್ಲೂ ಸದ್ದು ಮಾಡುತ್ತಿರುವ ಕನ್ನಡ ಸಿನಿಮಾ
  • ಎಲ್ಲರಿಗೂ ಕೈಗೆಟುಕುವ ದರದಲ್ಲಿ ಎಲ್ಲರ ನೆಚ್ಚಿನ ಸಿನಿಮಾದ ಟಿಕೆಟ್‌
ಪ್ರೇಕ್ಷಕರನ್ನು ಸೆಳೆಯಲು ಟಿಕೆಟ್‌ ದರ ಕಡಿತಗೊಳಿಸಿದ ʼಡೇರ್‌ ಡೆವಿಲ್‌ ಮುಸ್ತಾಫಾʼ ಚಿತ್ರತಂಡ..! title=

Poornachandra Tejaswi  : ಇದೇ ವೇಳೆ ʼಡೇರ್‌ ಡೆವಿಲ್‌ ಮುಸ್ತಾಫಾʼ ಸಿನಿಮಾ ತಂಡ ಮತ್ತಷ್ಟು ಪ್ರೇಕ್ಷಕರನ್ನು ಸೆಳೆಯಲು ಚಿಂತನೆ ನಡೆಸಿರುವ ಚಿತ್ರತಂಡ ಸಿನಿಮಾದ ಟಿಕೆಟ್‌ ದರವನ್ನು ಕಡಿಮೆಗೊಳಿಸಿದೆ. ಇದರಿಂದ ಸಿನಿಮಾವನ್ನು ವೀಕ್ಷಿಸಲು ಚಿತ್ರಮಂದಿರಗಳಿಗೆ ಸಾಕಷ್ಟು ಜನ ಬರುತ್ತಾರೆ ಎನ್ನುವುದ ಚಿತ್ರತಂಡದ ನಿರೀಕ್ಷೆ. 

ಈ ಟಿಕೆಟ್‌ ದರವನ್ನು ಕಡಿತಗೊಳಿಸಿರುವ ವಿಚಾರವಾಗಿ ಚಿತ್ರ ನಿರ್ದೇಶಕ ಶಶಾಂಕ್‌ ಸೋಗಾಲ್‌ ತಮ್ಮ ಟ್ವೀಟರ್‌ ಖಾತೆಯಲ್ಲಿ ವಿಶೇಷ ಪೋಸ್ಟರ್‌ವೊಂದನ್ನು ಹೊಂಚಿಕೊಂಡಿದ್ದಾರೆ. ʼಮೇ 6ರಿಂದ ಚಿತ್ರಮಂದಿರಗಳಲ್ಲಿ ಸಿನಿಮಾದ ಸಾಮಾನ್ಯ ಟಿಕಿಟ್‌ ದರ 50 ರೂಪಾಯಿ ಮತ್ತು ಬಾಲ್ಕನಿ ಟಿಕೆಟ್‌ ದರ 70 ರೂಪಾಯಿ ಆಗಲಿದೆ. ಮಲ್ಟಿಪ್ಲೆಕ್ಸ್‌ಗಳಲ್ಲಿ ಟಿಕೆಟ್ದರವನ್ನು 99 ರೂಪಾಯಿಗೆ ತಗ್ಗಿಸಲಾಗಿದೆ. ಎಲ್ಲರಿಗೂ ಕೈಗೆಟುಕುವ ದರದಲ್ಲಿ ಎಲ್ಲರ ನೆಚ್ಚಿನ ಸಿನಿಮಾದ ಟಿಕೆಟ್‌ ನೀಡಲಾಗುತ್ತಿದೆʼ ಎಂದಿದ್ದಾರೆ.

ಇದನ್ನೂ ಓದಿ-ತೆರೆಗೆ ಬರಲು ಸಜ್ಜಾದ ಮತ್ತೊಂದು ವಿವಾದಾತ್ಮಕ ಸಿನಿಮಾ ʼಅಜ್ಮೀರ್‌ 92ʼ; ಕಥೆ ಏನು?

ವಿದೇಶದಲ್ಲಿರುವ ಕನ್ನಡಿಗರು ಮತ್ತು ತೇಜಸ್ವಿ ಅವರ ಅಭಿಮಾನಿಗಳು ಈ ಚಿತ್ರವನ್ನು ಸಾಗರದಾಚೆಗೂ ಬಿಡುಗಡೆ ಮಾಡಿ ಎಂದು ಬೇಡಿಕೆಯಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಅಮೆರಿಕಾ, ಲಂಡನ್‌, ಅಬುದಾಬಿ, ಆಸ್ಟ್ರೇಲಿಯಾ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಈ ಡೇರ್‌ ಡೆವಿಲ್‌ ಮುಸ್ತಾಫಾ ಸಿನಿಮಾ ಸದ್ದು ಮಾಡುತ್ತಿದೆ.

ಈ ಇರಿಸು ಮುರಿಸಿನ ಕಥೆಯಲ್ಲಿ ಹಿರಿಯ ನಟ ಮಂಡ್ಯ ರಮೇಶ್‌ ಅಬಚೂರು ಕಾಲೇಜಿನ ಪ್ರಾಂಶುಪಾಲರ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನಾಗಭೂಷನ್‌ ಪೂರ್ಣಚಂದ್ರ ಮೈಸೂರು, ಸುಂದರ್‌ ವೀಣಾ ಮುಂತಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯುವ ಪ್ರತಿಭೆ ಶಿಶಿರ್‌ ಬೈಕಾಡಿ ಮುಸ್ತಫಾನ ಪಾತ್ರದಲ್ಲಿ ಎಲ್ಲರ ಮನಗೆದ್ದಿದ್ದು, ಆದಿತ್ಯ ಅಶ್ರೀ, ಅಭಯ್‌ ಮುಂತಾದ ಹಲವು ಕಲಾವಿದರ ಬಳಗವೇ ಚಿತ್ರತಂಡದಲ್ಲಿದೆ.

ನವನೀತ್‌ ಶ್ಯಾಮ್‌ ಅವರ ಹಿನ್ನೆಲೆ ಸಂಗೀತವನ್ನು ಹೊಂದಿರುವ ಈ ಸಿನಿಮಾಗೆ ತೇಜಸ್ವಿ ಅವರ ಅಭಿಮಾನಿಯಾದ ಡಾಲಿ ಧನಂಜಯ್‌ ಸಾತ್‌ ನೀಡಿದ್ದು, ಅವರ ಒಡೆತನದಲ್ಲಿರುವ ಡಾಲಿ ಫಿಕ್ಚರ್ಸ್‌ ಬ್ಯಾನರ್‌ನಡಿಯಲ್ಲಿ ಪ್ರಸ್ತುತಪಡಿಸಲಾಗಿದೆ. 

ಇದನ್ನೂ ಓದಿ- Sara Annaiah: ಸೀರೆಯುಟ್ಟು ರಾಯರ ಸನ್ನಿಧಿಯಲ್ಲಿ ನಟಿ ಸಾರಾ: ಇಲ್ಲಿವೆ ನೋಡಿ ಫೋಟೊಸ್..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News