ಕುತೂಹಲ ಮೂಡಿಸಿದೆ "ನಸಾಬ್" ಚಿತ್ರದ ಟ್ರೇಲರ್

ನನ್ನ‌ ಮೇಲೆ‌ ನಂಬಿಕೆಯಿಟ್ಟು  ಜವಾಬ್ದಾರಿ ನೀಡಿದ ನನ್ನ ತಂದೆ ಕಿಶೋರ್ ಕುಮಾರ್ ನಾಯ್ಕ್ ಅವರಿಗೆ ಹಾಗೂ ಸಮಾರಂಭಕ್ಕೆ ಆಗಮಿಸಿರುವ ಗಣ್ಯರಿಗೆ ಧನ್ಯವಾದ. ಇದು ನನ್ಮ ಮೊದಲ ಚಿತ್ರ. ನಟನೆಗೆ ಸಹಕಾರ ನೀಡಿದ ಹಿರಿಯ ಕಲಾವಿದರು ಹಾಗೂ ತಂತ್ರಜ್ಞರನ್ನು ಈ ಸಮಯದಲ್ಲಿ ನೆನೆಯುತ್ತೇನೆ.‌ ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ಹಾಗೂ ನಾಯಕ ಕೀರ್ತಿ ಕುಮಾರ್ ನಾಯ್ಕ್.

Written by - YASHODHA POOJARI | Edited by - Manjunath N | Last Updated : Jun 17, 2024, 12:31 PM IST
  • ನನ್ನ‌ ಮೇಲೆ‌ ನಂಬಿಕೆಯಿಟ್ಟು ಜವಾಬ್ದಾರಿ ನೀಡಿದ ನನ್ನ ತಂದೆ ಕಿಶೋರ್ ಕುಮಾರ್ ನಾಯ್ಕ್ ಅವರಿಗೆ ಹಾಗೂ ಸಮಾರಂಭಕ್ಕೆ ಆಗಮಿಸಿರುವ ಗಣ್ಯರಿಗೆ ಧನ್ಯವಾದ.
  • ಇದು ನನ್ಮ ಮೊದಲ ಚಿತ್ರ. ನಟನೆಗೆ ಸಹಕಾರ ನೀಡಿದ ಹಿರಿಯ ಕಲಾವಿದರು ಹಾಗೂ ತಂತ್ರಜ್ಞರನ್ನು ಈ ಸಮಯದಲ್ಲಿ ನೆನೆಯುತ್ತೇನೆ.‌
  • ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ಹಾಗೂ ನಾಯಕ ಕೀರ್ತಿ ಕುಮಾರ್ ನಾಯ್ಕ್.
ಕುತೂಹಲ ಮೂಡಿಸಿದೆ "ನಸಾಬ್" ಚಿತ್ರದ ಟ್ರೇಲರ್  title=

ಕನ್ನಡದಲ್ಲಿ ಒಳ್ಳೆಯ ಕಂಟೆಂಟ್ ಚಿತ್ರಗಳು ಹೆಚ್ಚು ಬರುತ್ತಿದೆ. ಅಂತಹುದೇ ಉತ್ತಮ‌ ಕಂಟೆಂಟ್ ಹೊಂದಿರುವ "ನಸಾಬ್" ಕನ್ನಡ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ಅದ್ದೂರಿಯಾಗಿ ನಡೆಯಿತು. ಟ್ರೇಲರ್ ಹಾಗೂ ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಂಜಾರ ಶಕ್ತಿಪೀಠದ ಶ್ರೀ ಕುಮಾರ ಮಹಾರಾಜರು, ಮಾಜಿ ಉಪ ಸಭಾಪತಿ ರುದ್ರಪ್ಪ ಎಂ ಲಮ್ಮಾಣಿ, ಐ ಎ ಎಸ್ ಅಧಿಕಾರಿ ಜಗದೀಶ್ ಜಿ, ಮಾಜಿ ಶಾಸಕ ಪಿ.ರಾಜೀವ್, ಡಾ||ಶೋಭ ಜಿ , ಶೋಭಾ ಟಿ.ಆರ್ , ಹರೀಶ್ ಮುಂತಾದವರು ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಇದನ್ನೂ ಓದಿ : ಬೆಳೆ ವಿಮೆ ನೊಂದಾಯಿಸಿಕೊಳ್ಳುವಂತೆ ರೈತರಿಗೆ ಎನ್.ಚಲುವರಾಯಸ್ವಾಮಿ ಕರೆ

ಇದು ನನ್ನ ಜೀವನದ ‌ಕಥೆ ಎಂದು ಮಾತಮಾಡಿದ ಕಿಶೋರ್ ಕುಮಾರ್ ನಾಯ್ಕ್, ನಮ್ಮ ತಂದೆ ತಾಯಿಗೆ ಹದಿನಾಲ್ಕು ಜನ ಮಕ್ಕಳು. ಬಡತನ ಬೇರೆ. ಅಂತಹ ಬಡ ಕುಟುಂಬದಲ್ಲಿ ಹುಟ್ಟಿದ ಬಂಜಾರ ಸಮುದಾಯದ ಹುಡುಗನೊಬ್ಬ ಚೆನ್ನಾಗಿ ಓದಿ ವಿದ್ಯಾವಂತನಾಗಿ ಉನ್ನತ ಹುದ್ದೆಯನ್ನು ಅಲಂಕರಿಸುತ್ತಾನೆ‌.‌ ಇದೇ ಚಿತ್ರದ ಕಥಾಹಂದರ. ನಾನು, ನನ್ನ ಜೀವನದ ಕಥೆಯನ್ನು "ನಸಾಬ್" ಎಂದು ಪುಸ್ತಕ ರೂಪದಲ್ಲಿ ಹೊರ ತಂದೆ. ಇದನ್ನು ಓದಿದ್ದ ಮಿತ್ರ ಹರೀಶ್, ಈ ಕೃತಿಯನ್ನು ಸಿನಿಮಾ‌ ಮಾಡೋಣ ಎಂದರು. ಈ ಸಿನಿಮಾ‌ ಆಗಲು ಹರೀಶ್ ಅವರೆ ಮುಖ್ಯ ಕಾರಣ.  ನನ್ನ ಮಗ ಕೀರ್ತಿ ಕುಮಾರ್ ನಾಯ್ಕ್ ಈ ಚಿತ್ರವನ್ನು ನಿರ್ದೇಶಿಸುವುದರೊಂದಿಗೆ ನಾಯಕನಾಗೂ ಅಭಿನಯಿಸಿದ್ದಾರೆ.  ಶೆಫಾಲಿ ಸಿಂಗ್ ಸೋನಿ ಈ ಚಿತ್ರದ ನಾಯಕಿ.‌ ಬಿ.ಜಯಶ್ರೀ,‌ ಪದ್ಮಾ ವಾಸಂತಿ, ವಿಜಯ ಕಾಶಿ,‌ ತಬಲ ನಾಣಿ, ನಾಗೇಂದ್ರ ಅರಸ್, ಶೋಭ್ ರಾಜ್, ಪ್ರಕಾಶ್, ಹನುಮಂತೇ ಗೌಡ ಮುಂತಾದವರು ಚಿತ್ರದಲ್ಲಿದ್ದಾರೆ. "ನಸಾಬ್" ಎಂದರೆ ಲಮ್ಮಾಣಿ ಭಾಷೆಯಲ್ಲಿ ನ್ಯಾಯ ಎಂದು ಅರ್ಥ. ಇಂದು ಸಾಕಷ್ಟು ಗಣ್ಯರು ಹಾಗೂ ನಮ್ಮ ಊರಿನವರು ಆಗಮಿಸಿ ನಮ್ಮ ಚಿತ್ರಕ್ಕೆ ಶುಭ ಕೋರಿದ್ದೀರಿ. ನಿಮಗೆ ಅನಂತ ಧನ್ಯವಾದಗಳು. ಸದ್ಯದಲ್ಲೇ ಚಿತ್ರವನ್ನು ಬಿಡುಗಡೆ ಮಾಡುತ್ತೇವೆ ಎಂದರು.

ಇದನ್ನೂ ಓದಿ : ನಿವೃತ್ತ ಪೋಲಿಸ್ ಅಧೀಕ್ಷಕರ ಸಮಸ್ಯೆಗೆ ಪರಿಹಾರ ಒದಗಿಸಿದ ಗ್ರಾಹಕರ ಆಯೋಗ

ನನ್ನ‌ ಮೇಲೆ‌ ನಂಬಿಕೆಯಿಟ್ಟು  ಜವಾಬ್ದಾರಿ ನೀಡಿದ ನನ್ನ ತಂದೆ ಕಿಶೋರ್ ಕುಮಾರ್ ನಾಯ್ಕ್ ಅವರಿಗೆ ಹಾಗೂ ಸಮಾರಂಭಕ್ಕೆ ಆಗಮಿಸಿರುವ ಗಣ್ಯರಿಗೆ ಧನ್ಯವಾದ. ಇದು ನನ್ಮ ಮೊದಲ ಚಿತ್ರ. ನಟನೆಗೆ ಸಹಕಾರ ನೀಡಿದ ಹಿರಿಯ ಕಲಾವಿದರು ಹಾಗೂ ತಂತ್ರಜ್ಞರನ್ನು ಈ ಸಮಯದಲ್ಲಿ ನೆನೆಯುತ್ತೇನೆ.‌ ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ಹಾಗೂ ನಾಯಕ ಕೀರ್ತಿ ಕುಮಾರ್ ನಾಯ್ಕ್.

ನಾಯಕಿ ಶೆಫಾಲಿ ಸಿಂಗ್ ಸೋನಿ, ನಟರಾದ ವಿಜಯ ಕಾಶಿ, ತಬಲನಾಣಿ, ನಾಗೇಂದ್ರ ಅರಸ್,‌ ಪ್ರಕಾಶ್ ಮುಂತಾದವರು "ನಸಾಬ್" ಚಿತ್ರದ ತಮ್ಮ ಪಾತ್ರಗಳ ಕುರಿತು ಮಾಹಿತಿ ನೀಡಿದರು. ಕೀರ್ತಿ ಕ್ರಿಯೇಷನ್ಸ್ ಲಾಂಛನದಲ್ಲಿ ಸುಜಾತ ಕಿಶೋರ್ ನಾಯ್ಕ್ ಈ ಚಿತ್ರವನ್ನು ನಿರ್ಮಾಣ‌ ಮಾಡಿದ್ದಾರೆ. ರಾಗಂ ಸಂಗೀತ ಸಂಯೋಜಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News