ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಪ್ರಭಾಕರ್ ಮಕ್ಕಳು; ವಿನೋದ್ ಪ್ರಭಾಕರ್ & ಸೌಂದರ್ಯ ಜಯಮಾಲಾ

Tiger Prabhakar's Sons: ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ..ಈ ಇಬ್ಬರು ಚಿತ್ರರಂಗದ ತಾರೆಯರು. ಎಲ್ಲದಕ್ಕಿಂತ ಹೆಚ್ಚಾಗಿ ಅಣ್ಣ-ತಂಗಿ..ಆದರೆ ಇಲ್ಲಿವರೆಯೂ ವಿನೋದ್ ಆಗಲಿ, ಸೌಂದರ್ಯ ಆಗಲಿ ಒಟ್ಟಿಗೆ ಕಾಣಿಸಿಕೊಂಡಿಲ್ಲ. ಅಭಿ ಮದುವೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡು ಅಪರೂಪದ ಕ್ಷಣಕ್ಕೆ ಸಾಕ್ಷಿಯಾದರು. 

Written by - Zee Kannada News Desk | Last Updated : Jun 11, 2023, 10:10 AM IST
  • ಅಭಿ ಮದುವೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ಮರಿ ಟೈಗರ್ ಮಕ್ಕಳು
  • ಬಾಲ್ಯದ ದಿನಗಳಿಗೆ ಜಾರಿದ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ
  • ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ ಭೇಟಿ
ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಪ್ರಭಾಕರ್ ಮಕ್ಕಳು; ವಿನೋದ್ ಪ್ರಭಾಕರ್ & ಸೌಂದರ್ಯ ಜಯಮಾಲಾ title=

ಬೆಂಗಳೂರು: ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ..ಈ ಇಬ್ಬರು ಚಿತ್ರರಂಗದ ತಾರೆಯರು. ಎಲ್ಲದಕ್ಕಿಂತ ಹೆಚ್ಚಾಗಿ ಅಣ್ಣ-ತಂಗಿ..ಆದರೆ ಇಲ್ಲಿವರೆಯೂ ವಿನೋದ್ ಆಗಲಿ..ಸೌಂದರ್ಯ ಆಗಲಿ ಒಟ್ಟಿಗೆ ಕಾಣಿಸಿಕೊಂಡಿಲ್ಲ..ಒಬ್ಬರನ್ನೊಬ್ಬರ ಭೇಟಿಯಾಗಿಲ್ಲ.

ಅಂತಹ ಸನ್ನಿವೇಶ ನಿರ್ಮಾಣವಾಗಿಲ್ಲ ಅಂತೇನಲ್ಲ..ಒಟ್ಟಿಗೆ ಆಡುತ್ತಾ ಬೆಳೆದ ಇವರಿಬ್ಬರು ಈ ಅಣ್ಣ ತಂಗಿ ಬದಲಾದ ಸನ್ನಿವೇಶದಲ್ಲಿ ದೂರ ಉಳಿದಿದ್ದೂ ಬಿಟ್ರೆ, ಅವರ ನಡುವೆ ಗಾಂಧಿನಗರ ಮಾತಾಡಿಕೊಳ್ಳುವ ರೀತಿ ಸಂಬಂಧವೇನು ಅಳಸಿಲ್ಲ. ವಿನೋದ್ ಹಾಗೂ ಸೌಂದರ್ಯ ಇಂದಿಗೂ..ಎಂದೆಂದಿಗೂ ಅಣ್ಣ ತಂಗಿಯೇ..ಆದ್ರೆ ಅವರಿಬ್ಬರನ್ನು ಅವರ ಅಕ್ಕ-ಪಕ್ಕದವರು ಭೇಟಿ ಮಾಡಲಾಗದಂತೆ ನೋಡಿಕೊಂಡಿದ್ದರು ಅನ್ನೋದೇ ವಿಪರ್ಯಾಸ..

ಇದನ್ನೂ ಓದಿ: CM Siddaramaiah: ಶ್ರೇಷ್ಠ ನಟ ಡಾ ರಾಜ್​ಕುಮಾರ್ ಆದ್ರೆ, ನೆಚ್ಚಿನ ನಟ ಪುನೀತ್ - ಸಿಎಂ ಸಿದ್ದರಾಮಯ್ಯ

ಆದ್ರೆ ಸಮಯ-ಸಂದರ್ಭ ಇದೆಲ್ಲಾ ಸಂಬಂಧಗಳನ್ನು ಮತ್ತೆ ಬೆಸೆಯುವಂತೆ ಮಾಡಿದೆ. ಮೊನ್ನೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಅದ್ಧೂರಿಯಾಗಿ ನಡೆದ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದಪ ಆರತಕ್ಷತೆಯಲ್ಲಿ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ ಮುಖಾಮುಖಿಯಾಗಿದ್ದಾರೆ. ಬಹಳ ವರ್ಷದ ಬಳಿಕ ತಂಗಿ ನೋಡಿದ ಖುಷಿ ವಿನೋದ್ ಅವರದ್ದು, ಅಣ್ಣನನ್ನೂ ನೋಡಿದ ಖುಷಿ ಸೌಂದರ್ಯಗೆ..ಭೇಟಿ ಕ್ಷಣದಲ್ಲಿ ಅಣ್ಣ ತಂಗಿ ಮತ್ತೆ ಬಾಲ್ಯದ ದಿನಗಳಿಗೆ ಜಾರಿದ್ದಾರೆ. ಬಾಲ್ಯದ ಆಟ-ತುಂಟಾಟ ನೆನಪುಕೊಂಡು ಒಂದಷ್ಟು ಸಮಯ ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ: CM Siddaramaiah: ಶ್ರೇಷ್ಠ ನಟ ಡಾ ರಾಜ್​ಕುಮಾರ್ ಆದ್ರೆ, ನೆಚ್ಚಿನ ನಟ ಪುನೀತ್ - ಸಿಎಂ ಸಿದ್ದರಾಮಯ್ಯ

ಅಣ್ಣನ ಪತ್ನಿ ನಿಶಾ ವಿನೋದ್ ಪ್ರಭಾಕರ್ ಜೊತೆಯಲ್ಲಿಯೂ ಸೌಂದರ್ಯ ಖುಷಿ ಖುಷಿಯಿಂದ ಕಾಲ ಕಳೆದು ಮೂವರು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಮರಿಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ ನಡುವೆ ಅಣ್ಣ ತಂಗಿಯ ಬಾಂಧವ್ಯವಿದೆ. ಅದು ಬಿಟ್ರೆ ಅವ್ರು ದೂರವಾಗಿದ್ದರೆ ,ಅವ್ರ ನಡುವೆ ಎಲ್ಲವೂ ಸರಿ ಇಲ್ಲ ಅನ್ನೋ ಮಾತುಗಳು ಸತ್ಯಕ್ಕೆ ದೂರವಾದುದ್ದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News