ಗಣೇಶ ಹಬ್ಬಕ್ಕೆ ಸ್ಯಾಂಡಲ್ ವುಡ್ ಗೆ 'ಟಾಮಿ' ಎಂಟ್ರಿ

ಈ ನಡುವೆ ಹೊಸಬರ ಹೊಸ ಸಿನಿಮಾ ಗಮನ ಸೆಳೆಯುತ್ತಿದೆ. ಹೌದು ಗಣೇಶ ಹಬ್ಬದ ಪ್ರಯುಕ್ತ ಹೊಸ ಸಿನಿಮಾ ತಂಡ 'ಟಾಮಿ' ಎನ್ನುವ ಚಿತ್ರವನ್ನು ಅನೌನ್ಸ್ ಮಾಡಿದ್ದಾರೆ.

Written by - Chetana Devarmani | Last Updated : Sep 7, 2024, 03:38 PM IST
  • ದೇಶದ ಜನತೆಗೆ ಗೌರಿ-ಗಣೇಶ ಹಬ್ಬದ ಸಂಭ್ರಮ.
  • 'ಟಾಮಿ' ಶ್ವಾನ ಪ್ರಿಯರಿಗೆ ಈ ಹೆಸರು ಮತ್ತಷ್ಟು ಆಪ್ತ.
  • ಣೇಶ ಹಬ್ಬದ ಪ್ರಯುಕ್ತ ಹೊಸ ಸಿನಿಮಾ ಅನೌನ್ಸ್
ಗಣೇಶ ಹಬ್ಬಕ್ಕೆ ಸ್ಯಾಂಡಲ್ ವುಡ್ ಗೆ  'ಟಾಮಿ' ಎಂಟ್ರಿ title=

ದೇಶದ ಜನತೆಗೆ ಗೌರಿ-ಗಣೇಶ ಹಬ್ಬದ ಸಂಭ್ರಮ. ಸಿನಿಮಾ ಮಂದಿಗೆ ಹಬ್ಬಗಳು ಮತ್ತಷ್ಟು ವಿಶೇಷ. ಹಬ್ಬ ಸಂಭ್ರಮಿಸುವ ಜೊತೆಗೆ ಹೊಸ ಸಿನಿಮಾ ಅನೌನ್ಸ್ ಮಾಡುವುದು, ಸಿನಿಮಾದ ಬಗ್ಗೆ ಅಪ್ಡೇಟ್ ನೀಡುವುದು ವಿಚಾರಗಳನ್ನು ಅಭಿಮಾನಿಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಗೌರಿ ಗಣೇಶ ಹಬ್ಬಕ್ಕೂ ಕೂಡ ಸಾಕಷ್ಟು ಹೊಸ ಸಿನಿಮಾಗಳು ಅನೌನ್ಸ್ ಆಗಿದೆ. ಈ ನಡುವೆ ಹೊಸಬರ ಹೊಸ ಸಿನಿಮಾ ಗಮನ ಸೆಳೆಯುತ್ತಿದೆ. ಹೌದು ಗಣೇಶ ಹಬ್ಬದ ಪ್ರಯುಕ್ತ ಹೊಸ ಸಿನಿಮಾ ತಂಡ 'ಟಾಮಿ' ಎನ್ನುವ ಚಿತ್ರವನ್ನು ಅನೌನ್ಸ್ ಮಾಡಿದ್ದಾರೆ. ಸಂಪೂರ್ಣ ಹೊಸಬರೇ ಸೇರಿಕೊಂಡು ಮಾಡುತ್ತಿರುವ ಸಿನಿಮಾ ಎನ್ನುವುದೆ ವಿಶೇಷ. 

'ಟಾಮಿ' ಶ್ವಾನ ಪ್ರಿಯರಿಗೆ ಈ ಹೆಸರು ಮತ್ತಷ್ಟು ಆಪ್ತ. ಈ ಚಿತ್ರಕ್ಕೆ ಆಶು ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶನದ ಜೊತೆಗೆ ನಾಯಕನಾಗಿಯೂ ಮಿಂಚುತ್ತಿದ್ದಾರೆ. ಮೊದಲ ಬಾರಿಗೆ ನಿರ್ದೇಶನದ ಕ್ಯಾಪ್ ತೊಡುವ ಜೊತೆಗೆ ಫಸ್ಟ್ ಟೈಮ್ ತೆರೆ ಮೇಲೆ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. 

ಇದನ್ನೂ ಓದಿ: 82 ಅಡಿ ಸಮುದ್ರದಾಳದಲ್ಲಿ 'ಅಮ್ಮು' ಟೈಟಲ್ ಅನಾವರಣ: ಹೊಸ ಪ್ರಯತ್ನಕ್ಕೆ ಮುನ್ನುಡಿ ಬರೆದ ಚಿತ್ರತಂಡ

ನಿರ್ದೇಶಕ ನಾಯಕ ಆಶು ಅವರಿಗೆ ಚೊಚ್ಚಲ ಸಿನಿಮಾ ಅಂದ ಮಾತ್ರಕ್ಕೆ ಚಿತ್ರರಂಗವೇನು ಹೊಸದೇನಲ್ಲ. ಕಳೆದ ಏಳೆಂಟು ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಅನೇಕ ಸಿನಿಮಾಗಳಿಗೆ ಅದರಲ್ಲೂ ಕಿಚ್ಚ ಸುದೀಪ್ ನಟನೆಯ ಚಿತ್ರಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ ಆಶು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ 'ಮುಕುಂದ ಮುರಾರಿ', ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಸುದೀಪ್ ನಟನೆಯ 'ಅಂಬಿ ನಿಂಗೆ ವಯಸ್ಸಾಯ್ತೊ', ಕೋಟಿಗೊಬ್ಬ-3 ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ ಆಶು.

ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ನಾಯಕ ಆಶು, ಜೊತೆಯಲ್ಲಿ ನಾಯಿ ಹಾಗೂ ಆರ್ ಎಕ್ಸ್ ಬೈಕ್ ನೋಡಬಹುದು. ಪೋಸ್ಟರ್ ನೋಡುತ್ತಿದ್ದರೆ ನಾಯಕ ನಾಯಿ ಪ್ರೇಮಿ ಜೊತೆಗೆ ಆರ್ ಎಕ್ಸ್ ಬೈಕ್ ನ ಲವರ್ ಕೂಡ ಆಗಿರುತ್ತಾನೆ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ.

ಟಾಮಿ ಸಿನಿಮಾದಲ್ಲಿ ಬಹುತೇಕ ಹೊಸಬರು‌. ಎಲಿಪಾಸ್ ಇಂಡಿಯಾ ಎಂಟರ್ಟೈನ್ಮೆಂಟ್ ಬ್ಯಾನರ್ ಅಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಚಿತ್ರಕ್ಕೆ ಸಚಿನ್ ಶ್ಯಾಮ್ ಸುಂದರ್ ಹಾಗೂ ಅನೇಕ ಸ್ನೇಹಿತರು ಸೇರಿ ಬಂಡವಾಳ ಹೂಡುತ್ತಿದ್ದಾರೆ. ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾ ಖ್ಯಾತಿಯ ಸಂಗೀತ ನಿರ್ದೇಶಕ ಪ್ರದ್ಯುತನ್ 'ಟಾಮಿ' ಸಿನಿಮಾಗೂ ಸಂಗೀತ ನೀಡುತ್ತಿದ್ದಾರೆ.

ಇದನ್ನೂ ಓದಿ: ತಂದೆಯೇ ನನ್ನ ಮೈ ಮೇಲೆ ಬರ್ತಿದ್ದ.. ಅಪ್ಪನಿಂದಲೇ ದೌರ್ಜನ್ಯಕ್ಕೊಳಗಾದ ಈಕೆ ಇಂದು ದಕ್ಷಿಣ ಸಿನಿರಂಗದ ಖ್ಯಾತ ನಟಿ..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News