ಮನೆ-ಮನಸ್ಸಿಗೆ ಸಿಹಿಹಂಚಲು ಶೀಘ್ರದಲ್ಲೇ ಬರ್ತಿದೆ ತೋತಾಪುರಿ-2

ಮೊದಲ ಭಾಗದ ಅಂತ್ಯದಲ್ಲಿ ಕಾಣಿಸಿಕೊಂಡು ಒಂದು ಸ್ಪೆಷಲ್ ಲುಕ್ ನೀಡಿದ್ದ ನಟ ಡಾಲಿ ಧನಂಜಯ್ ಈ ಚಿತ್ರದಲ್ಲಿ ಪೂರ್ಣಪ್ರಮಾಣದ ನಾಯಕನಾಗಿ ಹೊರಹೊಮ್ಮಿದ್ದಾರೆ. ಅವರ ಪಾತ್ರ ಚಿತ್ರದಲ್ಲಿ ತುಂಬಾ ವಿಶೇಷವಾಗಿ ಮೂಡಿಬಂದಿದೆ.

Written by - Bhavishya Shetty | Last Updated : Jul 4, 2023, 01:48 PM IST
    • ತೋತಾಪುರಿ ಭಾಗ-2 ನಿರ್ಮಾಣವಾಗಿದ್ದು, ಶೀಘ್ರದಲ್ಲೇ ತೆರೆ ಕಾಣಲು ಸಿದ್ದವಾಗುತ್ತಿದೆ.
    • ಒಂದು ಸ್ಪೆಷಲ್ ಲುಕ್ ನೀಡಿದ್ದ ನಟ ಡಾಲಿ ಧನಂಜಯ್ ಈ ಚಿತ್ರದಲ್ಲಿ ಪೂರ್ಣಪ್ರಮಾಣದ ನಾಯಕನಾಗಿ ಹೊರಹೊಮ್ಮಿದ್ದಾರೆ
    • ಡಾಲಿ ಧನಂಜಯ್ ಹಾಗೂ ಜಗ್ಗೇಶ್ ಅವರ ಕ್ಯಾರೆಕ್ಟರ್ ಹೇಗಿರುತ್ತೆ ಅನ್ನೋದರ ಝಲಕ್ ಇದೆ
ಮನೆ-ಮನಸ್ಸಿಗೆ ಸಿಹಿಹಂಚಲು ಶೀಘ್ರದಲ್ಲೇ ಬರ್ತಿದೆ ತೋತಾಪುರಿ-2 title=
Totapuri 2

ಜಗತ್ತೇ ಒಂದು ಮನೆ, ನಾವೆಲ್ಲ ಒಂದೇ ಸೂರಿನಡಿ ಬದುಕುತ್ತಿರುವವರು ಎನ್ನುವ ಭಾವೈಕ್ಯತೆಯ ಸಂದೇಶ ಸಾರುವ ಸ್ಟ್ರಾಂಗ್ ಕಂಟೆಂಟ್ ಒಳಗೊಂಡಿದ್ದ ತೋತಾಪುರಿ ಚಿತ್ರವು ಪ್ರೇಕ್ಷಕರಿಂದ, ವಿಮರ್ಶಕರಿಂದ ಅಪಾರ ಮೆಚ್ಚುಗೆ ಪಡೆದು ಯಶಸ್ವಿಯಾಗಿತ್ತು. ಆಗಲೇ ತೋತಾಪುರಿ‌ ಚಿತ್ರದ ಎರಡನೇ ಭಾಗವನ್ನು ಮಾಡುತ್ತಿರುವುದಾಗಿ ನಿರ್ದೇಶಕ ವಿಜಯಪ್ರಸಾದ್  ಸೂಚನೆ ನೀಡಿದ್ದರು. ಅದರಂತೆ ಈಗ ತೋತಾಪುರಿ ಭಾಗ-2 ನಿರ್ಮಾಣವಾಗಿದ್ದು, ಶೀಘ್ರದಲ್ಲೇ ತೆರೆ ಕಾಣಲು ಸಿದ್ದವಾಗುತ್ತಿದೆ.

ಇದನ್ನೂ ಓದಿ: ತೂಕ ಕಳೆದುಕೊಳ್ಳಬೇಕಾದರೆ ಗೋಧಿ ಹಿಟ್ಟು ಅಲ್ಲ ಈ ಹಿಟ್ಟಿನ ಚಪಾತಿ ಸೇವಿಸಿ !

ಮೊದಲ ಭಾಗದ ಅಂತ್ಯದಲ್ಲಿ ಕಾಣಿಸಿಕೊಂಡು ಒಂದು ಸ್ಪೆಷಲ್ ಲುಕ್ ನೀಡಿದ್ದ ನಟ ಡಾಲಿ ಧನಂಜಯ್ ಈ ಚಿತ್ರದಲ್ಲಿ ಪೂರ್ಣಪ್ರಮಾಣದ ನಾಯಕನಾಗಿ ಹೊರಹೊಮ್ಮಿದ್ದಾರೆ. ಅವರ ಪಾತ್ರ ಚಿತ್ರದಲ್ಲಿ ತುಂಬಾ ವಿಶೇಷವಾಗಿ ಮೂಡಿಬಂದಿದೆ. ಸೋಮವಾರ ಗುರುಪೂರ್ಣಿಮೆ. ಅದರಂಗವಾಗಿ ತೋತಾಪುರಿ-2 ಚಿತ್ರದ ಫಸ್ಟ್ ಲುಕ್ ನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಈ ಪೋಸ್ಟರ್ ನಲ್ಲಿ ನಾಯಕರಾದ ಡಾಲಿ ಧನಂಜಯ್ ಹಾಗೂ ಜಗ್ಗೇಶ್ ಅವರ ಕ್ಯಾರೆಕ್ಟರ್ ಹೇಗಿರುತ್ತೆ ಅನ್ನೋದರ ಝಲಕ್ ಇದೆ.

ಮೊದಲ ಭಾಗದಲ್ಲಿ ನವರಸ ನಾಯಕ ಜಗ್ಗೇಶ್, ಅದಿತಿ ಪ್ರಭುದೇವ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ವಿಜಯ ಪ್ರಸಾದ್ ಅವರ ನಿರ್ದೇಶನದ ಈ ಚಿತ್ರವನ್ನು ಶಿವಲಿಂಗ ಖ್ಯಾತಿಯ ನಿರ್ಮಾಪಕ ಕೆ.ಎ. ಸುರೇಶ್ ಅವರು ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದರು. ಈಗ ಚಿತ್ರತಂಡ ತೋತಾಪುರಿ-೨ ಪೋಸ್ಟರ್ ಬಿಡುಗಡೆ ಮಾಡಿದ್ದು, ಸದ್ಯದಲ್ಲೇ ಚಿತ್ರ ತೆರೆಗೆ ಬರುವ ಸೂಚನೆಯನ್ನು ನೀಡಿದೆ. ಸದ್ಯದಲ್ಲೇ ಚಿತ್ರದ ಟೀಸರ್, ಟ್ರೈಲರ್, ಸಾಂಗ್ ಬಿಡುಗಡೆಯ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ. ಅಲ್ಲದೆ ಸೆನ್ಸಾರ್ ಪ್ರಕ್ರಿಯೆ ಮುಗಿದ ಕೂಡಲೇ ರಿಲೀಸ್ ಡೇಟ್ ಕೂಡ ಅನೌನ್ಸ್ ಮಾಡಲಿದೆ.

 ತೋತಾಪುರಿ ಪಾರ್ಟ್-2 ಮೊದಲಿಗಿಂತ ಹೆಚ್ಚಿನ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಡಾಲಿ ಅಭಿಮಾನಿಗಳಿಗಂತೂ ಫುಲ್ ಮೀಲ್ಸ್ ಅನ್ನಬಹುದು. ಅಲ್ಲದೆ ಪೋಸ್ಟ್ ಪ್ರೊಡಕ್ಷನ್ ಹಂತದ ಸಣ್ಣಪುಟ್ಟ ಕೆಲಸಗಳು ನಡೆಯುತ್ತಿದ್ದು, ಸದ್ಯದಲ್ಲೇ ಫಸ್ಟ್ ಕಾಪಿ ಹೊರಬರಲಿದೆ. ನಂತರ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗುವುದು, ನಮ್ಮ ನಿರೀಕ್ಷೆಯಂತೆಯೇ ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಪ್ರೇಕ್ಷಕರಿಗೆ ಇಷ್ಟವಾಗುವ ಮನರಂಜನಾತ್ಮಕ ಕಂಟೆಂಟ್ ಚಿತ್ರದಲ್ಲಿದೆ. ಥೇಟರಿಗೆ ಬರುವ ಪ್ರೇಕ್ಷಕರಿಗೆ ಉತ್ತಮ ಮನರಂಜನೆಯ ಜೊತೆ ಕಾಮಿಡಿ ಪಂಚಿಂಗ್ ನೀಡಲಿದೆ” ಎಂದು ಚಿತ್ರದ ನಿರ್ಮಾಪಕ ಕೆ.ಎ.ಸುರೇಶ್ ಹೇಳಿದ್ದಾರೆ.

ಇದನ್ನೂ ಓದಿ: Expensive Cow: ಇದೇ ನೋಡಿ ವಿಶ್ವದ ಅತ್ಯಂತ ದುಬಾರಿ ಹಸು, ಬೆಲೆ ಕೇಳಿದ್ರೆ ಬೆಚ್ಚಿಬೀಳ್ತೀರಾ!

ಈ ಚಿತ್ರದಲ್ಲಿ ಡಾಲಿ ಧನಂಜಯ ಅಲ್ಲದೆ ಜಗ್ಗೇಶ್, ದತ್ತಣ್ಣ, ಸುಮನ ರಂಗನಾಥ್, ಅದಿತಿ ಪ್ರಭುದೇವ, ವೀಣಾ ಸುಂದರ್, ಹೇಮಾದತ್ ಹೀಗೆ ಮೊದಲ ಭಾಗದಲ್ಲಿದ್ದ ಬಹುತೇಕ ಪಾತ್ರಗಳು ಮುಂದುವರಿಯಲಿವೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News