Toxic Shooting In Bengaluru: ಸ್ಯಾಂಡಲ್‌ವುಡ್ ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಶೂಟಿಂಗ್‌ಗೆ ಸಿದ್ದತೆಗಳು ನಡೀತಿವೆ. ಬೆಂಗಳೂರಿನ ಹೆಚ್‌ಎಂಟಿ ಫ್ಯಾಕ್ಟರಿ ಕಾಂಪೌಂಟ್ ಒಳ ಪ್ರದೇಶದಲ್ಲಿ ಎರಡು ಎಕರೆ ಭಾರೀ ದೊಡ್ಡ ಸೆಟ್ ನಿರ್ಮಾಣವಾಗುತ್ತಿದ್ದು, ನೂರಾರು ಕಾರ್ಮಿಕರು ಕೆಲಸದಲ್ಲಿ ತೊಡಗಿಸಿದ್ದಾರೆ. ಇದೇ ಏಪ್ರಿಲ್ 15ರ ನಂತರ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.
'ಟಾಕ್ಸಿಕ್' ಸಿನಿಮಾ 70ರ ದಶಕದ ಕಥೆಯನ್ನು ಹೇಳಲಾಗುತ್ತಿದೆ ಎನ್ನಲಾಗಿದ್ದು, ಅದಕ್ಕೆ ತಕ್ಕಂತೆ ಸೆಟ್‌ಗಳನ್ನು ರೆಡಿ ಮಾಡಿ ಶೂಟಿಂಗ್‌ಗೆ ಪ್ಲಾನ್ ಮಾಡಲಾಗುತ್ತಿದೆ. ಈ ಹಿಂದೆ ಚಿತ್ರದ ಶೂಟಿಂಗ್ ಗೋವಾ, ಶ್ರೀಲಂಕಾದಲ್ಲಿ ನಡೆಯುತ್ತದೆ ಎಂಬ ಮಾತು ಕೇಳಿಬಂದಿತ್ತು. ಆದರೆ ಸದ್ಯಕ್ಕೆ ಬೆಂಗಳೂರಿನಲ್ಲೇ ದೊಡ್ಡ ಕಟ್ಟಡಗಳು, ಎತ್ತರದ ಟವರ್‌ಗಳು, ಜೋಕರ್ ಆಡಿಟೋರಿಯಂ ಮಾದರಿಯಲ್ಲಿ ಸೆಟ್ ಸಜ್ಜಾಗುತ್ತಿದೆ. ಇದು 50 ವರ್ಷಗಳ ಹಿಂದಿನ ಯಾವುದೋ ನಗರವನ್ನು ನೆನಪಿಸುವಂತೆ ಇದೆ.
ಇದನ್ನೂ ಓದಿ: ಆಸ್ಪತ್ರೆಗೆ ದಾಖಲಾದ ನಟ ದರ್ಶನ್ ಕೈಗೆ ಶಸ್ತ್ರ ಚಿಕಿತ್ಸೆ..! ಬೇಗ ಗುಣಮುಖರಾಗಿ ಬಾಸ್ ಎಂದ ಫ್ಯಾನ್ಸ್
ಬೆಂಗಳೂರಿನಲ್ಲಿ ಟಾಕ್ಸಿಕ್ ಸಿನಿಮಾ ಶೂಟಿಂಗ್ ಬಗ್ಗೆ ಮಾತನಾಡಿರುವ ಚಿತ್ರತಂಡ "ಸೂಕ್ತ ಸೌಲಭ್ಯಗಳ ಕೊರತೆಯಿಂದಾಗಿ ಎಲ್ಲಾ ದೊಡ್ಡ ಚಿತ್ರಗಳು ರಾಜ್ಯದ ಹೊರಗೆ ಶೂಟಿಂಗ್ ನಡೆಯುತ್ತಿದ್ದು, ಈ ವಿಚಾರವನ್ನು ನಟ ಯಶ್ ಗಂಭೀರವಾಗಿ ಪರಿಗಣಿಸಿದ್ದರು. ನಾವು ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಅಡಿಯಲ್ಲಿ ಕರ್ನಾಟಕದಲ್ಲೇ ಚಿತ್ರೀಕರಣ ಆರಂಭಿಸಲು ಮುಂದಾಗಿದ್ದೇವೆ. ನಾವು ಈಗಾಗಲೇ ಬೃಹತ್ ಸೆಟ್‌ಗಳನ್ನು ನಿರ್ಮಿಸಿದ್ದೇವೆ, ಇಲ್ಲಿನ ಜನರು, ತಂತ್ರಜ್ಞರು ಮತ್ತು ಉದಯೋನ್ಮುಖ ಪ್ರತಿಭೆಗಳಿಗೆ ಉದ್ಯೋಗ ಅವಕಾಶ ಸೃಷ್ಟಿಸಿದ್ದೇವೆ. ನಾವು ಜಾಗತಿಕ ಸಾಮರ್ಥ್ಯದ ಸಿನಿಮಾ ನಿರ್ಮಿಸಲು ಶ್ರಮಿಸುತ್ತಿದ್ದೇವೆ" ಎಂದು ಹೇಳಿದ್ದಾರೆ.
ಟಾಕ್ಸಿಕ್ ಚಿತ್ರತಂಡ "ನಿರ್ಮಾಪಕರಾಗಿ ನಮಗೆ ಭಾರತದ ಬೇರೆ ಬೇರೆ ಲೊಕೇಶನ್‌ಗಳಲ್ಲಿ ಹಾಗೂ ವಿದೇಶಗಳಲ್ಲಿ ಚಿತ್ರೀಕರಣ ನಡೆಸುವ ಆಯ್ಕೆ ಇತ್ತು. ಈ ಚಿತ್ರಕ್ಕಾಗಿ ಬೇರೆ ಬೇರೆ ಇಂಡಸ್ಟ್ರಿ ಕಲಾವಿದರು, ತಂತ್ರಜ್ಞರು ಜೊತೆಗೆ ಅಂತರರಾಷ್ಟ್ರೀಯ ಪ್ರತಿಭೆಗಳೂ ಕೆಲಸ ಮಾಡುತ್ತಿದ್ದಾರೆ. ಬೇರೆ ಕಡೆ ಚಿತ್ರೀಕರಣ ಮಾಡುವುದು ಆರ್ಥಿಕವಾಗಿ ಉತ್ತಮ ಎನಿಸುತ್ತಿತ್ತು. ಆದರಿಂದ, ಯಶ್ ಮತ್ತು ಕೆವಿಎನ್ ಈ ನಿರ್ಧಾರಕ್ಕೆ ಬಂದಿದ್ದು, ನಾವು ಬೇರೆ ಕಡೆ ಚಿತ್ರೀಕರಣ ನಡೆಸುವ ಮುನ್ನ ನಮ್ಮ ರಾಜ್ಯ, ನಮ್ಮ ಜನರ ಸಾಮರ್ಥ್ಯ ಪ್ರದರ್ಶಿಸಲು ತೀರ್ಮಾನಿಸಿದ್ದೇವೆ" ಎಂದು ಮಾಹಿತಿ ಕೊಟ್ಟಿದ್ದಾರೆ.
ಇದನ್ನೂ ಓದಿ: 83ನೇ ವಯಸ್ಸಿನಲ್ಲಿ 29ರ ಪ್ರೇಯಸಿಯಿಂದ 4ನೇ ಮಗುವಿಗೆ ತಂದೆಯಾದ ಖ್ಯಾತ ನಟ!
ಸದ್ಯ ಟಾಕ್ಸಿಕ್' ಚಿತ್ರದ ಶೂಟಿಂಗ್ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ಬಹಿರಂಗವಾಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಒಂದೆಡೆ ಗೋವಾದಲ್ಲಿ ಚಿತ್ರದ ಪ್ರೀ ಪ್ರೊಡಕ್ಷನ್ ಕೆಲಸಗಳಲ್ಲಿ ಸಿನಿತಂಡ ಬ್ಯುಸಿಯಾಗಿದ್ದು, ಮತ್ತೊಂದೆಡೆ ಬೆಂಗಳೂರಿನಲ್ಲಿ ಸೆಟ್ ನಿರ್ಮಾಣ ಕೆಲಸಗಳು ನಡೆಯುತ್ತಿವೆ. ಈ ಸಿನಿಮಾ ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿದ್ದು, ಯಶ್ ಕೂಡ ಸಿನಿಮಾಗೆ ನಿರ್ಮಾಪಕರಾಗಿದ್ದಾರೆ. ಈ ಚಿತ್ರಕ್ಕೆ ನಿರ್ದೇಶಕಿ ಗೀತು ಮೋಹನ್ ದಾಸ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ