Vijay Antony : ಕಾಲಿವುಡ್ ನಟ-ಸಂಗೀತ ಸಂಯೋಜಕ ವಿಜಯ್ ಆಂಟೋನಿ ಅವರ 16 ವರ್ಷದ ಮಗಳು ಸೆಪ್ಟೆಂಬರ್ 19 ರಂದು ಆತ್ಮಹತ್ಯೆಗೆ ಶರಣಾಗಿದ್ದಳು. ಇದೀಗ ಮಗಳ ಅಗಲಿಕೆ ಕುರಿತು ಮೊದಲ ಬಾರಿಗೆ ವಿಜಯ್ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.
ವಿಜಯ್ ಹಂಚಿಕೊಂಡಿರುವ ಪೋಸ್ಟ್ನಲ್ಲಿ “ಎಲ್ಲಾ ಸಹೃದಯರೇ, ನನ್ನ ಮಗಳು ಮೀರಾ ತುಂಬಾ ಧೈರ್ಯಶಾಲಿ. ಅವಳು ಈಗ ಜಾತಿ, ಧರ್ಮ, ಹಣ, ಅಸೂಯೆ, ನೋವು, ಬಡತನ ಮತ್ತು ಪ್ರತೀಕಾರವಿಲ್ಲದ ಉತ್ತಮ ಮತ್ತು ಶಾಂತಿಯುತ ಸ್ಥಳಕ್ಕೆ ಹೋಗಿದ್ದಾಳೆ. ಅವಳು ಇನ್ನೂ ನನ್ನೊಂದಿಗೆ ಮಾತನಾಡುತ್ತಿದ್ದಾಳೆ. ನಾನು ಅವಳೊಂದಿಗೆ ಸತ್ತೆ. ನಾನು ಈಗ ಅವಳೊಂದಿಗೆ ಸಮಯ ಕಳೆಯಲು ಪ್ರಾರಂಭಿಸಿದೆ. ನಾನು ಇನ್ನು ಮುಂದೆ ಮಾಡುವ ಯಾವುದೇ ಒಳ್ಳೆಯ ಕಾರ್ಯಗಳು ಅವಳಿಂದ ಪ್ರಾರಂಭವಾಗುತ್ತವೆ ಎಂದು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: ಇದೇ ಸೆಪ್ಟೆಂಬರ್ 28ಕ್ಕೆ ರಿಲೀಸ್ ಆಗಲಿದೆ ನವರಸ ನಾಯಕ ಜಗ್ಗೇಶ್ ಅಭಿನಯದ ತೋತಾಪುರಿ2
— vijayantony (@vijayantony) September 21, 2023
ಪೊಲೀಸರ ಪ್ರಕಾರ, 16 ವರ್ಷ ವಯಸ್ಸಿನ ಮೀರಾ ತೆನಾಂಪೇಟೆಯ ನಿವಾಸದಲ್ಲಿ ಮುಂಜಾನೆ 3 ಗಂಟೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆಕೆಯನ್ನು ನಗರದ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ವೈದ್ಯರು ಸತ್ತಿದ್ದಾಗಿ ಘೋಷಿಸಿದರು. ಮೀರಾ ಸಾವಿಗೆ ಚಿತ್ರರಂಗ ಸೇರಿದಂತೆ ವಿಜಯ್ ಅಭಿಮಾನಿಗಳು ಸಂತಾಪ ಸೂಚಿಸಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.