ನಿರ್ದೇಶಕ ಸಿಂಪಲ್ ಸುನಿ ಮುಂದಿನ ಚಿತ್ರಕ್ಕೆ ವಿನಯ್ ರಾಜ್ ಕುಮಾರ್ ನಾಯಕ

ಸಿಂಪಲ್ ಸುನಿ ಮುಂದಿನ ಚಿತ್ರ ರೋಮ್ಯಾಂಟಿಕ್ ಸಬ್ಜೆಕ್ಟ್ ಒಳಗೊಂಡಿದ್ದು, ಈ ಚಿತ್ರದಲ್ಲಿ ನಾಯಕ ನಟನಾಗಿ ವಿನಯ್ ರಾಜ್ ಕುಮಾರ್ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಸಿಂಪಲ್ ಸುನಿ ಹಾಗೂ ವಿನಯ್ ರಾಜ್ ಕುಮಾರ್ ಒಟ್ಟಿಗೆ ಕೆಲಸ ಮಾಡುತ್ತಿದ್ದು, ಇಬ್ಬರ ಕಾಂಬಿನೇಶನ್ ನಿರೀಕ್ಷೆ ಮೂಡಿಸಿದೆ. 

Written by - Zee Kannada News Desk | Last Updated : Jan 5, 2023, 10:29 AM IST
  • ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಸಿಂಪಲ್ ಸುನಿ ಸದ್ಯದಲ್ಲೇ ಚಿತ್ರದ ಟೈಟಲ್, ತಾರಾಬಳಗ ಎಲ್ಲದರ ಬಗ್ಗೆ ಅಧೀಕೃತ ಮಾಹಿತಿ ಹಂಚಿಕೊಳ್ಳೋದಾಗಿ ತಿಳಿಸಿದ್ದಾರೆ.
  • ವಿನಯ್ ರಾಜ್ ಕುಮಾರ್ ಅಭಿನಯದ ‘ಪೆಪೆ’, ‘ಗ್ರಾಮಾಯಣ’, ‘ಅದೊಂದಿತ್ತು ಕಾಲ’ ಸಿನಿಮಾಗಳು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿವೆ
  • ಈ ಬಾರಿ ದೊಡ್ಮನೆ ಅಭಿಮಾನಿಗಳಿಗೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಉಡುಗೊರೆ ನೀಡೋಕೆ ವಿನಯ್ ರಾಜ್ ಕುಮಾರ್ ಕೂಡ ರೆಡಿಯಾಗಿದ್ದಾರೆ.
ನಿರ್ದೇಶಕ ಸಿಂಪಲ್ ಸುನಿ ಮುಂದಿನ ಚಿತ್ರಕ್ಕೆ ವಿನಯ್ ರಾಜ್ ಕುಮಾರ್ ನಾಯಕ title=
Vinay Rajkumar

‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ನಿರ್ದೇಶಕ ಸಿಂಪಲ್ ಸುನಿ ಹೊಸದೊಂದು ಚಿತ್ರಕ್ಕೆ ಆಕ್ಷನ್ ಕಟ್ ಹೇಳಲು ತಯಾರಿ ನಡೆಸುತ್ತಿದ್ದಾರೆ. ವಿಶೇಷ ಅಂದ್ರೆ ಈ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ ದೊಡ್ಮನೆ ಹುಡುಗ ವಿನಯ್ ರಾಜ್ ಕುಮಾರ್ ಗೆ ಸಿಂಪಲ್ ಸುನಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. 

ಸಿಂಪಲ್ ಸುನಿ ಮುಂದಿನ ಚಿತ್ರ ರೋಮ್ಯಾಂಟಿಕ್ ಸಬ್ಜೆಕ್ಟ್ ಒಳಗೊಂಡಿದ್ದು, ಈ ಚಿತ್ರದಲ್ಲಿ ನಾಯಕ ನಟನಾಗಿ ವಿನಯ್ ರಾಜ್ ಕುಮಾರ್ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಸಿಂಪಲ್ ಸುನಿ ಹಾಗೂ ವಿನಯ್ ರಾಜ್ ಕುಮಾರ್ ಒಟ್ಟಿಗೆ ಕೆಲಸ ಮಾಡುತ್ತಿದ್ದು, ಇಬ್ಬರ ಕಾಂಬಿನೇಶನ್ ನಿರೀಕ್ಷೆ ಮೂಡಿಸಿದೆ. ಚಿತ್ರಕ್ಕೆ ಪ್ರಸನ್ನ ಕಥೆ ಬರೆದಿದ್ದು, ಚಿತ್ರಕಥೆ, ಸಂಭಾಷಣೆ ಬರೆದು ಸಿಂಪಲ್ ಸುನಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. 

ಇದನ್ನೂ ಓದಿ- ಸೀಕ್ರೆಟ್ ಡೇಟಿಂಗ್ ನಲ್ಲಿ ರಶ್ಮಿಕಾ - ವಿಜಯ್ .! ಕತೆ ಹೇಳುತ್ತಿದೆ ಈ ಫೋಟೋ

ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಸಿಂಪಲ್ ಸುನಿ ಸದ್ಯದಲ್ಲೇ ಚಿತ್ರದ ಟೈಟಲ್, ತಾರಾಬಳಗ ಎಲ್ಲದರ ಬಗ್ಗೆ ಅಧೀಕೃತ ಮಾಹಿತಿ ಹಂಚಿಕೊಳ್ಳೋದಾಗಿ ತಿಳಿಸಿದ್ದಾರೆ. ವಿನಯ್ ರಾಜ್ ಕುಮಾರ್ ಅಭಿನಯದ ‘ಪೆಪೆ’, ‘ಗ್ರಾಮಾಯಣ’, ‘ಅದೊಂದಿತ್ತು ಕಾಲ’ ಸಿನಿಮಾಗಳು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಈ ಬಾರಿ ದೊಡ್ಮನೆ ಅಭಿಮಾನಿಗಳಿಗೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಉಡುಗೊರೆ ನೀಡೋಕೆ ವಿನಯ್ ರಾಜ್ ಕುಮಾರ್ ಕೂಡ ರೆಡಿಯಾಗಿದ್ದಾರೆ.

ಇದನ್ನೂ ಓದಿ- Ira Khan: ಲವರ್ ಜೊತೆ ಹೊಸ ಹಾಟ್ ವಿಡಿಯೋ ಹಂಚಿಕೊಂಡ ಅಮಿರ್ ಖಾನ್ ಪುತ್ರಿ!
 
ಅಂದಹಾಗೆ ಸಿಂಪಲ್ ಸುನಿ, ವಿನಯ್ ರಾಜ್ ಕುಮಾರ್ ಕಾಂಬಿನೇಶನ್ ಮೊದಲ ಚಿತ್ರಕ್ಕೆ ಮೈಸೂರು ರಮೇಶ್ ಬಂಡವಾಳ ಹೂಡುತ್ತಿದ್ದು, ವೀರ್ ಸಮರ್ಥ್ ಸಂಗೀತ ನಿರ್ದೇಶನ, ಸಭಾ ಛಾಯಾಗ್ರಾಹಣವಿರಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News