ಸೆನ್ಸಾರ್ ಪ್ರಕ್ರಿಯೆ ಮುಗಿಸಿದ 'ಪೆಪೆ' : ವಿನಯ್ ರಾಜ್ ಕುಮಾರ್ ಚಿತ್ರಕ್ಕೆ ʼAʼ ಸರ್ಟಿಫಿಕೇಟ್

Vijay Rajkumar Pepe movie : ಕ್ಲಾಸ್ ಸಿನಿಮಾಗಳ ಮೂಲಕ ಕನ್ನಡ ಸಿನಿಪ್ರೇಮಿಗಳನ್ನು ರಂಜಿಸಿದ್ದ ವಿನಯ್ ರಾಜ್ ಕುಮಾರ್ ಪೆಪೆಗಾಗಿ ಮಾಸ್ ಅವತಾರ ತಾಳಿದ್ದಾರೆ. ಬಹುನಿರೀಕ್ಷಿತ ಚಿತ್ರ ಪೆಪೆಗೆ ಎ ಸರ್ಟಿಫಿಕೇಟ್ ಸಿಕ್ಕಿದೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..  

Written by - Krishna N K | Last Updated : Jul 28, 2024, 06:41 PM IST
    • ವಿನಯ್ ರಾಜ್ ಕುಮಾರ್ ನಟಿಸಿರುವ ಬಹುನಿರೀಕ್ಷಿತ ಚಿತ್ರ ಪೆಪೆ.
    • ಟೈಟಲ್ ಹಾಗೂ ಟೀಸರ್ ನಿಂದಲೇ ಕುತೂಹಲ ಮೂಡಿಸಿದ ಚಿತ್ರ.
    • ಸೆನ್ಸಾರ್ ಮಂಡಳಿಯಿಂದ ಪೆಪೆಗೆ ಎ ಸರ್ಟಿಫಿಕೇಟ್ ಸಿಕ್ಕಿದೆ.
ಸೆನ್ಸಾರ್ ಪ್ರಕ್ರಿಯೆ ಮುಗಿಸಿದ 'ಪೆಪೆ' : ವಿನಯ್ ರಾಜ್ ಕುಮಾರ್ ಚಿತ್ರಕ್ಕೆ ʼAʼ ಸರ್ಟಿಫಿಕೇಟ್ title=
Vijay Rajkumar pepe movie

Pepe Kannada movie: ಒಂದು ಸರಳ ಪ್ರೇಮಕಥೆ ಅಭೂತಪೂರ್ವ ಯಶಸ್ಸಿನ ಬಳಿಕ ವಿನಯ್ ರಾಜ್ ಕುಮಾರ್ ನಟಿಸಿರುವ ಬಹುನಿರೀಕ್ಷಿತ ಚಿತ್ರ ಪೆಪೆ. ಟೈಟಲ್ ಹಾಗೂ ಟೀಸರ್ ನಿಂದಲೇ ಕುತೂಹಲ ಹೆಚ್ಚಿಸಿರುವ ಈ ಸಿನಿಮಾ ಈಗ ಸೆನ್ಸಾರ್ ಪಾಸಾಗಿದೆ. ಸೆನ್ಸಾರ್ ಮಂಡಳಿಯಿಂದ ಪೆಪೆಗೆ ಎ ಸರ್ಟಿಫಿಕೇಟ್ ಸಿಕ್ಕಿದ್ದು, ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚುವಂತೆ ಮಾಡಿದೆ. 

ಕ್ಲಾಸ್ ಸಿನಿಮಾಗಳ ಮೂಲಕ ಕನ್ನಡ ಸಿನಿಪ್ರೇಮಿಗಳನ್ನು ರಂಜಿಸಿದ್ದ ವಿನಯ್ ರಾಜ್ ಕುಮಾರ್ ಪೆಪೆಗಾಗಿ ಮಾಸ್ ಅವತಾರ ತಾಳಿದ್ದಾರೆ. ಯುವ ನಿರ್ದೇಶಕ ಶ್ರೀಲೇಶ್ ಎಸ್ ನಾಯರ್ ನಿರ್ದೇಶನದಲ್ಲಿ ವಿನಯ್ ರಗಡ್‌ ಲುಕ್‌ ಅಬ್ಬರಿಸಿದ್ದಾರೆ. ಹಳ್ಳಿ ಬ್ಯಾಕ್‌ಡ್ರಾಪ್‌ನಲ್ಲಿ ನಡೆಯುವ ಚಿತ್ರ ಇದಾಗಿದ್ದು, ಇದುವರೆಗೂ ಈ ರೀತಿಯ ಪಾತ್ರದಲ್ಲಿ ವಿನಯ್ ಕಾಣಿಸಿಕೊಂಡಿಲ್ಲ.

ಇದನ್ನೂ ಓದಿ:ಸೌತ್ ಸಿನಿಮಾಗಳಲ್ಲಿ ಬೋಲ್ಡ್ ಸೀನ್ ಇರುವುದಿಲ್ಲ.. ಅದಕ್ಕೆ ಬಾಲಿವುಡ್‌..! ನಟಿ ಲಕ್ಷ್ಮಿ ಹೇಳಿಕೆ ವೈರಲ್‌

ಈ ಚಿತ್ರದಲ್ಲಿ ನಾಯಕಿಯಾಗಿ ಕಾಜಲ್‌ ಕುಂದರ್‌ ನಟಿಸಿದ್ದು, ಮಯೂರ್‌ ಪಟೇಲ್‌, ಯಶ್‌ ಶೆಟ್ಟಿ, ಬಲ ರಾಜ್‌ವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್‌, ನವೀನ್‌ ಡಿ. ಪಡೀಲ್‌ರನ್ನು ಒಳಗೊಂಡ ತಾರಾಬಳಗವಿದೆ. ‘ಪೆಪೆ’ ಚಿತ್ರಕ್ಕೆ ಅಭಿಷೇಕ್‌ ಜಿ. ಕಾಸರಗೋಡು ಕ್ಯಾಮೆರಾ ವರ್ಕ್, ಪೂರ್ಣಚಂದ್ರ ತೇಜಸ್ವಿಯವರ ಸಂಗೀತ ನಿರ್ದೇಶನವಿದೆ. 

ಡಾ. ರವಿವರ್ಮ, ಚೇತನ್‌ ಡಿಸೋಜಾ, ಡಿಫ್ರೆಂಟ್‌ ಡ್ಯಾನಿ, ನರಸಿಂಹ ಅವರ ತಂಡ ಚಿತ್ರದ ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡಿದೆ. ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರಗಳಲ್ಲಿ‘ಪೆಪೆ’ ಸಿನಿಮಾವನ್ನು ಸೆರೆಹಿಡಿಯಲಾಗಿದೆ. ಉದಯ್‌ ಸಿನಿ ವೆಂಚರ್‌, ದೀಪ ಫಿಲ್ಮ್ಸ್ ಬ್ಯಾನರ್‌ನಡಿ ಉದಯ್ ಶಂಕರ್.ಎಸ್ ಹಾಗೂ ಕೋಲಾರದ ಬಿ.ಎಮ್.ಶ್ರೀರಾಮ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News