ವಿನಯ್ ‘ದಿ’ ಸಿನಿಮಾಗೆ ಸಿಂಪಲ್ ಸುನಿ ಸಾಥ್ : ಟೈಟಲ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಕೆ

ʼಕಡೆಮನೆʼ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ವಿನಯ್ ಹೊಸದೊಂದು ಸಿನಿಮಾ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ಚಿತ್ರಕ್ಕೆ ʼದಿʼ ಎಂದು ಟೈಟಲ್ ಇಡಲಾಗಿದೆ. ನಿರ್ದೇಶಕ ಸಿಂಪಲ್ ಸುನಿ ‘ದಿ’ ಟೈಟಲ್ ರಿವೀಲ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

Written by - YASHODHA POOJARI | Edited by - Krishna N K | Last Updated : Jan 9, 2023, 07:08 PM IST
  • ʼಕಡೆಮನೆʼ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಗುರುತಿಸಿಕೊಂಡಿರುವ ವಿನಯ್.
  • ʼದಿʼ ಎಂಬ ಇಂಟ್ರಸ್ಟಿಂಗ್‌ ಸಿನಿಮಾ ಮೂಲಕ ಕಂಬ್ಯಾಕ್ ಮಾಡಿದ ನಿರ್ದೇಶಕ.
  • ನಿರ್ದೇಶಕ ಸಿಂಪಲ್ ಸುನಿ ‘ದಿ’ ಟೈಟಲ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ವಿನಯ್ ‘ದಿ’ ಸಿನಿಮಾಗೆ ಸಿಂಪಲ್ ಸುನಿ ಸಾಥ್ : ಟೈಟಲ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಕೆ title=

The kannada film : ʼಕಡೆಮನೆʼ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ವಿನಯ್ ಹೊಸದೊಂದು ಸಿನಿಮಾ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ಚಿತ್ರಕ್ಕೆ ʼದಿʼ ಎಂದು ಟೈಟಲ್ ಇಡಲಾಗಿದೆ. ನಿರ್ದೇಶಕ ಸಿಂಪಲ್ ಸುನಿ ‘ದಿ’ ಟೈಟಲ್ ರಿವೀಲ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

‘ದಿ’ ವಿನಯ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಎರಡನೇ ಸಿನಿಮಾ. ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಸದ್ದಿಲದೇ ಸೆಟ್ಟೇರಿ ಚಿತ್ರೀಕರಣವನ್ನು ಕಂಪ್ಲೀಟ್ ಮಾಡಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇರುವ ಚಿತ್ರತಂಡ ಚಿತ್ರದ ಪ್ರಚಾರ ಕಾರ್ಯವನ್ನು ಆರಂಭಿಸಿದೆ. ಅದರ ಮೊದಲ ಭಾಗವಾಗಿ ಚಿತ್ರದ ವಿಭಿನ್ನ ಟೈಟಲ್ ನ್ನು ನಿರ್ದೇಶಕ ಸಿಂಪಲ್ ಸುನಿ ಮೂಲಕ ರಿವೀಲ್ ಮಾಡಿಸಿದೆ. ಟೈಟಲ್ ರಿವೀಲ್ ಮಾಡಿ ನಿರ್ದೇಶಕ ವಿನಯ್ ಹಾಗೂ ಇಡೀ ಚಿತ್ರತಂಡಕ್ಕೆ ಸಿಂಪಲ್ ಸುನಿ ಶುಭ ಕೋರಿದ್ದಾರೆ. ಸದ್ಯದಲ್ಲೇ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಚಿತ್ರದ ನಾಯಕ ನಾಯಕಿ ಯಾರೆಂಬುದನ್ನು ಚಿತ್ರತಂಡ ರಿವೀಲ್ ಮಾಡಲಿದೆ.

ಇದನ್ನೂ ಓದಿ:  Rachita Ram : ಗಣರಾಜ್ಯೋತ್ಸವ ಮರೆತುಬಿಡಿ ಎಂದ ರಚಿತಾಗೆ ಚಳಿ ಬಿಡಿಸಿದ ನೆಟ್ಟಿಗರು

ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ ಡಾಲರ್ ಸುತ್ತ ನಡೆಯುವ ಕಥಾಹಂದರ ಒಳಗೊಂಡಿದೆ. ಹರಿಣಿ, ಬಾಲ ರಾಜ್ವಾಡಿ, ನಾಗೇಂದ್ರ ಅರಸ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರು, ಶರಣ್, ಸುರೇಶ್ ಬಾಬು, ಗಣೇಶ್, ಕಲಾರತಿ ಮಹದೇವ್ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ. ಶೀಘ್ರದಲ್ಲೇ ಟ್ರೇಲರ್ ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಪೋಸ್ಟ್ ಪ್ರೊಡಕ್ಷನ್ ಕೊನೆ ಹಂತದಲ್ಲಿರುವ ಚಿತ್ರತಂಡ ಫೆಬ್ರವರಿ ಕೊನೆಯ ವಾರ ಸಿನಿಮಾ ತೆರೆಗೆ ತರುವ ತಯಾರಿಯಲ್ಲಿದೆ. 

‘ವಿಡಿಕೆ’ ಸಿನಿಮಾಸ್ ಬ್ಯಾನರ್ ನಡಿ ‘ವಿಡಿಕೆ’ ಗ್ರೂಪ್ 'ದಿ' ಚಿತ್ರವನ್ನು ನಿರ್ಮಾಣ ಮಾಡಿದೆ. ತುಮಕೂರು, ಮೈಸೂರು, ಮೂಡುಗೆರೆ, ಚಿಕ್ಕಮಗಳೂರು, ಹೊನ್ನಾವರ, ಉತ್ತರ ಕನ್ನಡ, ಬೆಂಗಳೂರು, ಕೇರಳದಲ್ಲಿ ‘ದಿ’ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ. ಆಲನ್ ಭರತ್ ಕ್ಯಾಮೆರಾ ವರ್ಕ್, ಯುಎಂ ಸ್ಟೀವನ್ ಸತೀಶ್ ಸಂಗೀತ ನಿರ್ದೇಶನ, ಕವಿರಾಜ್ ಹಾಗೂ ವಿನಯ್ ಸಾಹಿತ್ಯ, ಸಿದ್ದಾರ್ಥ ಸಂಕಲನ, ಚಂದ್ರು ಬಂಡೆ ಸಾಹಸ ನಿರ್ದೇಶನ ಚಿತ್ರಕ್ಕಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News