ಗಾನ ಮಾಂತ್ರಿಕ, ಕರಾವಳಿಯ ಸುಪ್ರಸಿದ್ಧ ಯಕ್ಷಗಾನ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರರ ಇನ್ನಿಲ್ಲ

Subrahmanya Dhareshwar Death News: ಗಾನ ಮಾಂತ್ರಿಕ, ಕರಾವಳಿ ಭಾಗದ ಸುಪ್ರಸಿದ್ಧ ಯಕ್ಷಗಾನ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶರಾಗಿದ್ದಾರೆ. 

Written by - Chetana Devarmani | Last Updated : Apr 25, 2024, 11:24 AM IST
  • ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ
  • ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ
  • ಕರಾವಳಿ ಭಾಗದ ಸುಪ್ರಸಿದ್ಧ ಯಕ್ಷಗಾನ ಭಾಗವತರು
ಗಾನ ಮಾಂತ್ರಿಕ, ಕರಾವಳಿಯ ಸುಪ್ರಸಿದ್ಧ ಯಕ್ಷಗಾನ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರರ ಇನ್ನಿಲ್ಲ title=

Subrahmanya Dhareshwar Death News: ಗಾನ ಮಾಂತ್ರಿಕ, ಕರಾವಳಿ ಭಾಗದ ಸುಪ್ರಸಿದ್ಧ ಯಕ್ಷಗಾನ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶರಾಗಿದ್ದಾರೆ. ಸುಬ್ರಹ್ಮಣ್ಯ ಧಾರೇಶ್ವರ ಯಕ್ಷಗಾನದ ಬಡಗುತಿಟ್ಟಿನ ಶ್ರೇಷ್ಠ ಹಾಗೂ ಪ್ರಸಿದ್ಧ ಭಾಗವತರಾಗಿದ್ದರು. ಕರಾವಳಿ ಕೋಗಿಲೆ ಎಂದೇ ಸುಬ್ರಹ್ಮಣ್ಯ ಧಾರೇಶ್ವರ ಖ್ಯಾತರಾಗಿದ್ದರು. 67ನೇ ವಯಸ್ಸಿನಲ್ಲಿ ಬೆಂಗಳೂರಿನ ಮನೆಯಲ್ಲಿ ಏಪ್ರಿಲ್‌ 25 ರಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. 

ಯಕ್ಷ ರಂಗದ ತಜ್ಞ ಭಾಗವತರೆಂದೇ ಸುಬ್ರಹ್ಮಣ್ಯ ಧಾರೇಶ್ವರ ಗುರುತಿಸಲ್ಪಟ್ಟಿದ್ದರು. ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಇದನ್ನೂ ಓದಿ: ಸನಾತನ ಹಿಂದೂ ಧರ್ಮದ ಉಳಿವಿಗೆ ಮತ್ತೆ ಮೋದಿ ಬೆಂಬಲಿಸಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕರೆ 

ಸುಬ್ರಹ್ಮಣ್ಯ ಧಾರೇಶ್ವರ ಅವರು ಕೋಟ ‘ಅಮೃತೇಶ್ವರಿ ಮೇಳ’ ಶ್ರೀ ಪೆರ್ಡೂರು ಮೇಳದಲ್ಲಿ ಭಾಗವತರಾಗಿದ್ದರು. ಹೊಸರಾಗಗಳನ್ನು ಹೊಸ ತಾಂತ್ರಿಕತೆಯನ್ನು ಯಕ್ಷಗಾನದಲ್ಲಿ ಬಳಸಿ ಯಶಸ್ವಿಯಾಗಿದ್ದರು. ಸುಮಾರು 400 ಕ್ಕಿಂತಲೂ ಅಧಿಕ ಯಕ್ಷಗಾನದ ಆಡಿಯೋ ಕ್ಯಾಸೆಟ್ ಗಳನ್ನು ರಿಲೀಸ್‌ ಮಾಡಿದ್ದಾರೆ.

ಗಾನ ಮಾಂತ್ರಿಕ, ಕರಾವಳಿ ಭಾಗದ ಸುಪ್ರಸಿದ್ಧ ಯಕ್ಷಗಾನ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರರ ನಿಧನದ ಸುದ್ದಿ ನೋವುಂಟು ಮಾಡಿದೆ. ಸುದೀರ್ಘ 45 ವರ್ಷಗಳ ಕಾಲ ತಮ್ಮ ಕಂಠಸಿರಿಯ ಮೂಲಕ ಕಲಾರಸಿಕರನ್ನು ರಂಜಿಸಿದ್ದ ಧಾರೇಶ್ವರರು ಪ್ರಯೋಗಶೀಲ ಭಾಗವತಿಕೆಗೆ ಹೆಸರುವಾಸಿಯಾದವರು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಕರುಣಿಸಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

ಇದನ್ನೂ ಓದಿ: ನನ್ನ ಜೀವ, ನನ್ನ ದೇಹ ಇರುವುದೇ ನಮ್ಮ ಜನರಿಗಾಗಿ : ಡಿಸಿಎಂ ಡಿ.ಕೆ. ಶಿವಕುಮಾರ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News