ಬೆಂಗಳೂರು : ಹೃದಯಾಘಾತಕ್ಕೆ ಸಂಬಂಧಿಸಿದ ಕೆಲವು ರೋಗಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬಾರದು. ಕಾಲುಗಳಲ್ಲಿ ಮಾತ್ರವಲ್ಲದೆ ಪಾದಗಳಲ್ಲಿಯೂ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ದೇಹದಲ್ಲಿನ ಯಾವುದೇ ಸಮಸ್ಯೆ ರಾತ್ರೋರಾತ್ರಿ ಸಂಭವಿಸುವುದಿಲ್ಲ. ದೇಹದ ಒಳಗೆ ಸ್ವಲ್ಪ ಮಟ್ಟಿನ ಬದಲಾವಣೆಯಾದರೂ ಅದರ ಪರಿಣಾಮ ಅಥವಾ ಲಕ್ಷಣಗಳು ದೇಹದ ಹೊರಗೆ ಕೂಡಾ ಕಾಣಿಸಿಕೊಳ್ಳುತ್ತದೆ. ಈ ಲಕ್ಷಣಗಳನ್ನು ಗುರುತಿಸಿಕೊಳ್ಳುವುದು ಬಹಳ ಮುಖ್ಯ.
ಹೃದಯ ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಹೃದಯ 24 ಗಂಟೆಯೂ ತನ್ನ ಕೆಲಸ ಮಾಡುತ್ತಿರುತ್ತದೆ. ದೇಹದ ಈ ಪ್ರಮುಖ ಭಾಗದಲ್ಲಿ ಸಮಸ್ಯೆ ಉಂಟಾದಾಗ, ಸಂಬಂಧಿತ ಲಕ್ಷಣಗಳು ಮೊದಲೇ ಕಾಣಿಸಿಕೊಳ್ಳುತ್ತವೆ. ಆದರೆ ಆ ಲಕ್ಷಣವನ್ನು ಗುರುತಿಸಿಕೊಳ್ಳುವುದರಲ್ಲಿ ನಾವು ವಿಫಲರಾಗುತ್ತೇವೆ.
ಇದನ್ನೂ ಓದಿ : ಹೊಟ್ಟೆಯ ಬೊಜ್ಜು ಒಂದೇ ವಾರದಲ್ಲಿ ಕಡಿಮೆಯಾಗಲು ಮನೆಯಲ್ಲಿಯೇ ಈ ಪಾನೀಯ ತಯಾರಿಸಿ ಸೇವಿಸಿ
ಕಳಪೆ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದಾಗಿ, ಹೃದಯಾಘಾತದಂತಹ ಸಮಸ್ಯೆಗಳ ಅಪಾಯ ಕೂಡಾ ಹೆಚ್ಚುತ್ತದೆ. ಈ ಅಪಾಯವನ್ನು ಕಡಿಮೆ ಮಾಡಲು, ಸರಿಯಾದ ಆಹಾರ ಮತ್ತು ಸರಿಯಾದ ಜೀವನಶೈಲಿಯನ್ನು ಅನುಸರಿಸುವುದು ಮಾತ್ರವಲ್ಲ, ಹೃದಯಾಘಾತದ ಮೊದಲು ದೇಹದಲ್ಲಿ ಹೆಚ್ಚಾಗಿ ಕಂಡುಬರುವ ರೋಗಲಕ್ಷಣಗಳ ಬಗ್ಗೆಯೂ ಗಮನ ಹರಿಸಬೇಕಾಗುತ್ತದೆ. ಈ ಲಕ್ಷಣಗಳ ಬಗ್ಗೆ ನಿಗಾವಹಿಸಿದರೆ ಹೃದಯ ಸಂಬಂಧಿ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಗುಣಪಡಿಸಬಹುದು.
ಹೃದಯಾಘಾತದ ಲಕ್ಷಣಗಳು ಎದೆ ಮಾತು ಎದೆಯ ಸುತ್ತಮುತ್ತಲೂ ಮಾತ್ರ ಕಾಣಿಸಿಕೊಳ್ಳುವುದಿಲ್ಲ. ನಿಮ್ಮ ಕಾಲುಗಳು ಮತ್ತು ಪಾದಗಳಲ್ಲಿ ಕೂಡಾ ಕಾಣಿಸಿಕೊಳ್ಳುತ್ತದೆ.
ಇದನ್ನೂ ಓದಿ : 10 ಸಾವಿರ ಹೆಜ್ಜೆಯೇ ಆಗಬೇಕೆಂದಿಲ್ಲ , ಉತ್ತಮ ಆರೋಗ್ಯಕ್ಕೆ ಇಷ್ಟೇ ಹೆಜ್ಜೆ ನಡೆದರೂ ಸಾಕು
ಪಾದಗಳ ಬಣ್ಣ ಬದಲಾಗುತ್ತದೆ :
ಹೃದಯವು ಸರಿಯಾಗಿ ಕಾರ್ಯನಿರ್ವಹಿಸದಿದ್ದಾಗ ದೇಹದ ಎಲ್ಲಾ ಭಾಗಗಳಿಗೆ ಸಾಕಷ್ಟು ರಕ್ತವನ್ನು ಪಂಪ್ ಮಾಡುವುದು ಸಾಧ್ಯವಾಗುವುದಿಲ್ಲ. ಇದರಿಂದಾಗಿ ಆಮ್ಲಜನಕಯುಕ್ತ ರಕ್ತದ ಕೊರತೆಯಿಂದಾಗಿ, ದೇಹದ ಚರ್ಮವು ನೀಲಿ ಬಣ್ಣಕ್ಕೆ ತಿರುಗಲು ಪ್ರಾರಂಭಿಸುತ್ತದೆ. ಇದು ಹೃದಯಾಘಾತ, ಹೃದಯ ವೈಫಲ್ಯ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಸಂಕೇತವಾಗಿದೆ.
ಕಾಲುಗಳಲ್ಲಿ ಊತ :
ಹೃದಯದಲ್ಲಿ ಸಮಸ್ಯೆ ಇದ್ದರೆ, ಪರಿಣಾಮಕಾರಿಯಾಗಿ ರಕ್ತವನ್ನು ಪಂಪ್ ಮಾಡುವ ಸಾಮರ್ಥ್ಯವು ದುರ್ಬಲಗೊಳ್ಳುತ್ತದೆ. ಕಾಲುಗಳಿಂದ ಹೃದಯಕ್ಕೆ ರಕ್ತ ಮರಳುವುಡು ವಿಳಂಬವಾಗುತ್ತದೆ. ಈ ಕಾರಣದಿಂದ ಕಾಳುಗಳಲ್ಲಿ ಊತ ಕಾಣಿಸಿಕೊಂಡರೆ ಅದನ್ನು ನಿರ್ಲಕ್ಷಿಸಬಾರದು.
ಇದನ್ನೂ ಓದಿ : ಕೆಟ್ಟ ಕೊಲೆಸ್ಟ್ರಾಲ್ ನಿವಾರಣೆಗೆ ಈ ಐದು ಬೇಳೆಗಳು ನಿಮ್ಮ ಆಹಾರದಲ್ಲಿರಲಿ!
ಪಾದಗಳಲ್ಲಿ ನೋವು :
ಪಾದಗಳಲ್ಲಿ ನೋವು ಕಾಣಿಸಿಕೊಳ್ಳುವುದು ಸಾಮಾನ್ಯ ಸಮಸ್ಯೆಯಾಗಿದ್ದರೂ, ಕೆಲವು ಅಪರೂಪದ ಸಂದರ್ಭಗಳಲ್ಲಿ ಇದು ಹೃದಯ ಸಂಬಂಧಿ ಕಾಯಿಲೆಯ ಲಕ್ಷಣವೂ ಆಗಿರಬಹುದು. ಆದರೆ, ಹೃದಯಾಘಾತದ ಮೊದಲು ಕಾಲು ನೋವು ಸಂಭವಿಸಬಹುದು. ಆದ್ದರಿಂದ ಹೃದಯ ಸಂಬಂಧಿ ರೋಗ ಇರುವವರು ಕಾಲು ನೋವಿನ ಸಮಸ್ಯೆಯನ್ನು ನಿರ್ಲಕ್ಷಿಸಬಾರದು.
ಕಾಲುಗಳಲ್ಲಿ ದೌರ್ಬಲ್ಯ :
ನಿಮ್ಮ ಕಾಲುಗಳು ದುರ್ಬಲವಾಗುತ್ತಿವೆ ಎನ್ನುವ ಭಾವ ನಿಮ್ಮಲ್ಲಿ ಬರುತ್ತಿದ್ದರೆ, ಅದು ಹೃದಯ ಸಂಬಂಧಿ ಸಮಸ್ಯೆಗಳ ಸಂಕೇತವೂ ಆಗಿರಬಹುದು. ರಕ್ತ ಸರಿಯಾಗಿ ಪಂಪ್ ಆಗದ ಕಾರಣ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಹೃದಯ ಸಂಬಂಧಿ ಸಮಸ್ಯೆಗಳಿರುವ ಜನರು ಕಾಲು ಮತ್ತು ಕಾಲುಗಳಲ್ಲಿನ ದೌರ್ಬಲ್ಯದಂತಹ ರೋಗಲಕ್ಷಣಗಳನ್ನು ನಿರ್ಲಕ್ಷಿಸಬಾರದು.
( ಸೂಚನೆ : ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.