Benefits Of Jaggery: ಬಿಪಿಯಿಂದ ರಕ್ತಹೀನತೆಯವರೆಗೆ ಹಲವು ಸಮಸ್ಯೆಗಳ ನಿವಾರಣೆಗೆ ಬೆಲ್ಲವೇ ಮದ್ದು

Jaggery Benefits: ನಮ್ಮ ದೇಹಕ್ಕೆ ಬಹಳ ಮುಖ್ಯವಾದ ಅನೇಕ ಪೋಷಕಾಂಶಗಳು ಬೆಲ್ಲದಲ್ಲಿ ಕಂಡು ಬರುತ್ತದೆ. ಆದ್ದರಿಂದ ಬೆಲ್ಲವನ್ನು ಸೇವಿಸುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು. ಬೆಲ್ಲ ತಿನ್ನುವುದರಿಂದ ಆಗುವ ಲಾಭಗಳೇನು ಎಂದು ತಿಳಿಯೋಣ.

Written by - Yashaswini V | Last Updated : Oct 17, 2022, 07:23 AM IST
  • ಬೆಲ್ಲವು ಕ್ಯಾಲ್ಸಿಯಂ, ಕಬ್ಬಿಣ, ಫೋಲೇಟ್, ಮೆಗ್ನೀಸಿಯಮ್, ಸೆಲೆನಿಯಮ್, ರಂಜಕ, ಪೊಟ್ಯಾಸಿಯಮ್, ವಿಟಮಿನ್ ಬಿ 12 ಮತ್ತು ವಿಟಮಿನ್ ಬಿ 6 ನಂತಹ ಎಲ್ಲಾ ಅಗತ್ಯ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ.
  • ಪ್ರತಿದಿನ ಬೆಳಗ್ಗೆ ಉಗುರುಬೆಚ್ಚನೆಯ ನೀರಿನಲ್ಲಿ ಬೆಲ್ಲವನ್ನು ಬೆರೆಸಿ ಸೇವಿಸುವುದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಬಹುದು.
  • ಬೆಲ್ಲ ತಿನ್ನುವುದರಿಂದ ದೇಹಕ್ಕೆ ಆಗುವ ಲಾಭಗಳೇನು ಎಂದು ತಿಳಿಯೋಣ.
Benefits Of Jaggery:  ಬಿಪಿಯಿಂದ ರಕ್ತಹೀನತೆಯವರೆಗೆ ಹಲವು ಸಮಸ್ಯೆಗಳ ನಿವಾರಣೆಗೆ ಬೆಲ್ಲವೇ ಮದ್ದು title=
Jaggery Benefits

Benefits Of Jaggery: ಬೆಲ್ಲದ ಸೇವನೆಯು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಪ್ರತಿದಿನ ಬೆಳಗ್ಗೆ ಉಗುರುಬೆಚ್ಚನೆಯ ನೀರಿನಲ್ಲಿ ಬೆಲ್ಲವನ್ನು ಬೆರೆಸಿ ಸೇವಿಸುವುದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಬಹುದು. ಬೆಲ್ಲವು ಕ್ಯಾಲ್ಸಿಯಂ, ಕಬ್ಬಿಣ, ಫೋಲೇಟ್, ಮೆಗ್ನೀಸಿಯಮ್, ಸೆಲೆನಿಯಮ್, ರಂಜಕ, ಪೊಟ್ಯಾಸಿಯಮ್, ವಿಟಮಿನ್ ಬಿ 12 ಮತ್ತು ವಿಟಮಿನ್ ಬಿ 6 ನಂತಹ ಎಲ್ಲಾ ಅಗತ್ಯ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಬೆಲ್ಲ ತಿನ್ನುವುದರಿಂದ ದೇಹಕ್ಕೆ ಆಗುವ ಲಾಭಗಳೇನು ಎಂದು ತಿಳಿಯೋಣ.

ರಕ್ತಹೀನತೆ ನಿವಾರಿಸಲು ಬೆಲ್ಲ ಪ್ರಯೋಜನಕಾರಿ:
ದೇಹದಲ್ಲಿ ರಕ್ತದ ಕೊರತೆಯನ್ನು ರಕ್ತಹೀನತೆ ಎಂದು ಕರೆಯಲಾಗುತ್ತದೆ. ದೇಹದಲ್ಲಿ ಕಬ್ಬಿಣಾಂಶದ ಕೊರತೆಯಿದ್ದರೆ, ನಿತ್ಯ ಉಗುರುಬೆಚ್ಚನೆಯ ನೀರಿನಲ್ಲಿ ಬೆಲ್ಲವನ್ನು ಬೆರೆಸಿ ಸೇವಿಸುವುದು ತುಂಬಾ ಪ್ರಯೋಜನಕಾರಿಯಾಗಿದೆ. ಕಬ್ಬಿಣ ಮತ್ತು ಫೋಲೇಟ್ ಎರಡೂ ಬೆಲ್ಲದಲ್ಲಿ ಕಂಡುಬರುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಉಗುರುಬೆಚ್ಚನೆಯ ನೀರಿನೊಂದಿಗೆ ಬೆಲ್ಲವನ್ನು ಸೇವಿಸುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.

ಇದನ್ನೂ ಓದಿ- Benefits Of Green Peas: ಡಯಾಬಿಟಿಸ್, ಕೊಲೆಸ್ಟ್ರಾಲ್ ಕಾಯಿಲೆಗಳಿಗೆ ರಾಮಬಾಣ ಹಸಿರು ಬಟಾಣಿ

ಋತುಚಕ್ರದ ನೋವಿನಲ್ಲಿ ಪರಿಹಾರ:
ಮಹಿಳೆಯರಿಗೆ ಋತುಚಕ್ರದ ಸಮಯದಲ್ಲಿ ಹಲವು ಬಾರಿ ಅಸಹನೀಯ ನೋವು ಕಾಣಿಸಿಕೊಳ್ಳುತ್ತದೆ. ಋತುಚಕ್ರದ ಸಮಯದಲ್ಲಿ ಮಹಿಳೆಯರು ಉಗುರುಬೆಚ್ಚನೆಯ ನೀರಿನೊಂದಿಗೆ ಬೆಲ್ಲವನ್ನು ಸೇವಿಸುವುದರಿಂದ ತುಂಬಾ ಪ್ರಯೋಜನವನ್ನು ಪಡೆಯಬಹುದು. ಬೆಲ್ಲವನ್ನು ತಿನ್ನುವುದು ನೋವು ಮತ್ತು ಸೆಳೆತದಿಂದ ಉತ್ತಮ ಪರಿಹಾರವನ್ನು ನೀಡುತ್ತದೆ. ಇದಲ್ಲದೇ ಬೆಲ್ಲದ ಸೇವನೆಯಿಂದ ದೇಹದಿಂದ ದೌರ್ಬಲ್ಯ ದೂರವಾಗುತ್ತದೆ.

ಯುಟಿಐ ಸೋಂಕಿನಲ್ಲಿ ಪರಿಹಾರ:
ಮೂತ್ರನಾಳದ ಸೋಂಕಿನಿಂದ ಬಳಲುತ್ತಿರುವವರಿಗೆ ಬೆಲ್ಲದ ಸೇವನೆಯು ತುಂಬಾ ಪ್ರಯೋಜನಕಾರಿಯಾಗಿದೆ. ಇದನ್ನು ತಿನ್ನುವುದರಿಂದ ಮೂತ್ರಕೋಶದಲ್ಲಿ ಊತ ಕಡಿಮೆಯಾಗುತ್ತದೆ. ನೀವೂ ದೀರ್ಘಕಾಲದಿಂದ ಮೂತ್ರನಾಳದ ಸೋಂಕಿನ ಸಮಸ್ಯೆ ಅನುಭವಿಸುತ್ತಿದ್ದರೆ ಬೆಲ್ಲದ ಪರಿಹಾರವನ್ನು ಒಮ್ಮೆ ಟ್ರೈ ಮಾಡಿ ನೋಡಿ.

ಇದನ್ನೂ ಓದಿ- Peanuts Benefits : ಉತ್ತಮ ಆರೋಗ್ಯಕ್ಕೆ ತಪ್ಪದೆ ಸೇವಿಸಿ ಟೈಂ ಪಾಸ್ ಕಡಲೆಕಾಯಿ..!

ರಕ್ತದೊತ್ತಡವನ್ನು ಸಾಮಾನ್ಯಗೊಳಿಸಲು ಸಹಕಾರಿ:
ಬೆಲ್ಲವು ಪೊಟ್ಯಾಸಿಯಮ್ ಮತ್ತು ಸೋಡಿಯಂ ಅನ್ನು ಹೊಂದಿರುತ್ತದೆ, ಇದು ದೇಹದಲ್ಲಿ ಆಮ್ಲದ ಮಟ್ಟವನ್ನು ಕಾಪಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದಲ್ಲದೆ, ಇದು ರಕ್ತದೊತ್ತಡವನ್ನು ಸಾಮಾನ್ಯ ಸ್ಥಿತಿಯಲ್ಲಿಡಲು ಸಹಾಯ ಮಾಡುತ್ತದೆ. ಬಿಪಿ ಸಮಸ್ಯೆ ಇರುವವರಿಗೆ ಬೆಲ್ಲ ಸೇವನೆಯಿಂದ ತುಂಬಾ ಪ್ರಯೋಜನಗಳಿವೆ.

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ಸಲಹೆಯನ್ನು ಪಡೆಯಿರಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News