ಬೆಂಗಳೂರು : ಕ್ಯಾಲ್ಸಿಯಂ ದೇಹಕ್ಕೆ ಬಹಳ ಮುಖ್ಯ. ವಯಸ್ಸಾಗುತ್ತಿದ್ದಂತೆ ಮಹಿಳೆಯರ ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ಕಾಣಿಸಿಕೊಳ್ಳುತ್ತದೆ. ದೇಹದಲ್ಲಿ ಕಾಣಿಸಿಕೊಳ್ಳುವ ಕ್ಯಾಲ್ಸಿಯಂ ಕೊರತೆಯಿಂದಾಗಿ, ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕ್ಯಾಲ್ಸಿಯಂ ಕೊರತೆಯನ್ನು ನೀಗಿಸಲು ಹಾಲು, ಮೊಸರು, ಚೀಸ್ ಮತ್ತು ತರಕಾರಿಗಳನ್ನು ಸೇರಿಸಬೇಕು ಎಂದು ಸಲಹೆ ನೀಡಲಾಗುತ್ತದೆ. ಸರಿಯಾದ ಪ್ರಮಾಣದ ಕ್ಯಾಲ್ಸಿಯಂ ಸೇವನೆಯು ಸ್ನಾಯುಗಳನ್ನು ಬಲಪಡಿಸುತ್ತದೆ. ಮಹಿಳೆಯರ ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ಎದುರಾದರೆ ದೇಹ ಅನೇಕ ರೀತಿಯ ಸೂಚನೆಗಳನ್ನು ನೀಡುತ್ತದೆ.
ಮಹಿಳೆಯರಲ್ಲಿ ಈ ಲಕ್ಷಣಗಳು ಕಂಡುಬಂದರೆ ಕ್ಯಾಲ್ಸಿಯಂ ಕೊರತೆ ಎಂದರ್ಥ :
ದುರ್ಬಲ ಮೂಳೆಗಳು :
ದೇಹದಲ್ಲಿ ಕ್ಯಾಲ್ಸಿಯಂ ಕೊರತೆಯಿಂದ ಮೂಳೆಗಳು ದುರ್ಬಲಗೊಂಡು ಅವುಗಳಲ್ಲಿ ಒಂದು ರೀತಿಯ ಶಬ್ದ ಬರಲು ಆರಂಭವಾಗುತ್ತದೆ. ಕ್ಯಾಲ್ಸಿಯಂ ಮೂಳೆಗಳನ್ನು ಬಲಗೊಳಿಸುವ ಕೆಲಸ ಮಾಡುತ್ತದೆ. ನಿಮ್ಮ ದೇಹದಲ್ಲಿ ಕ್ಯಾಲ್ಸಿಯಂ ಕೊರತೆಯಿದ್ದರೆ ಮೂಳೆಗಳು ದುರ್ಬಲಗೊಳ್ಳಲು ಪ್ರಾರಂಭಿಸುತ್ತವೆ. ಕುಳಿತುಕೊಳ್ಳಲು ಮತ್ತು ಕುಳಿತಲ್ಲಿಂದ ಏಳಲು ಕಷ್ಟಪಡಬೇಕಾಗುತ್ತದೆ. ಹೀಗಾದಾಗ ತಕ್ಷಣ ವೈದ್ಯರನ್ನು ಸಂಪರ್ಕಿಸಿ.
ಇದನ್ನೂ ಓದಿ : ಬಾಯಲ್ಲಿ ಹುಣ್ಣು ಉಂಟಾಗಲೂ ಇವೇ ಪ್ರಮುಖ ಕಾರಣಗಳು
ದುರ್ಬಲ ಉಗುರುಗಳು :
30ರ ನಂತರ ಮಹಿಳೆಯರಲ್ಲಿ ಕ್ಯಾಲ್ಸಿಯಂ ಕೊರತೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಅವರ ಉಗುರುಗಳು ದುರ್ಬಲವಾಗಬಹುದು. ಉಗುರುಗಳು ದುರ್ಬಲವಾದಾಗ ಅದು ಬೇಗನೆ ಮುರಿಯುತ್ತದೆ. ಅಷ್ಟೇ ಅಲ್ಲ, ಕ್ಯಾಲ್ಸಿಯಂ ಕೊರತೆಯಿಂದ ಉಗುರುಗಳ ಬಣ್ಣವೂ ಬದಲಾಗತೊಡಗುತ್ತದೆ.
ಹಲ್ಲುಗಳಲ್ಲಿ ನೋವು :
ಮಹಿಳೆಯರ ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ಕಾಣಿಸಿಕೊಂಡಾಗ ಹಲ್ಲುಗಳಲ್ಲಿ ನೋವು ಕಂಡು ಬರುತ್ತದೆ. ದೇಹದಲ್ಲಿ ಕ್ಯಾಲ್ಸಿಯಂ ಕೊರತೆಯಾದಾಗ ಪದೇ ಪದೇ ಹಲ್ಲು ನೋವು ಕಾಣಿಸಿಕೊಳ್ಳುತ್ತದೆ. ಹಾಗಾಗಿ ಹಲ್ಲು ನೋವು ಕಾಣಿಸಿಕೊಂಡರೆ ಅದನ್ನು ನಿರ್ಲಕ್ಷಿಸಬೇಡಿ. ಏಕೆಂದರೆ ಇದು ಕದೇಹದಲ್ಲಿ ಕ್ಯಾಲ್ಸಿಯಂ ಕೊರತೆಯ ಲಕ್ಷಣವೂ ಹೌದು.
ಇದನ್ನೂ ಓದಿ : ಮಾರಣಾಂತಿಕ ಕಾಯಿಲೆಗೆ ಕಾರಣವಾಗಬಹುದಾದ 'ಒತ್ತಡ' ನಿರ್ವಹಣೆಗೆ ಇಲ್ಲಿವೆ ಮನೆಮದ್ದು
( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.