ಬೇಸಿಗೆಯಲ್ಲಿ ಈ ಆರೋಗ್ಯ ಪ್ರಯೋಜನಗಳಿಗಾಗಿ ಸೇವಿಸಬೇಕು ಸಪೋಟ ಹಣ್ಣು !

Chikoo Benefits : ಬೇಸಿಗೆಯಲ್ಲಿ ಸಪೋಟಾ ಸೇವನೆಯಿಂದ  ಆರೋಗ್ಯಕ್ಕೆ ಅನೇಕ ರೀತಿಯ ಪ್ರಯೋಜನವಾಗುವುದು. ಇದು ನಿಮ್ಮ ಅನೇಕ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.

Written by - Ranjitha R K | Last Updated : Apr 25, 2024, 04:11 PM IST
  • ಬೇಸಿಗೆಯಲ್ಲಿ,ಮಾರುಕಟ್ಟೆಗೆ ಸಪೋಟ ಹಣ್ಣು ಹೇರಳವಾಗಿ ಬರುತ್ತದೆ.
  • ಇದರ ಸೇವನೆಯಿಂದ ದೇಹದ ಅನೇಕ ಸಮಸ್ಯೆಗಳು ನಿವಾರಣೆಯಾಗುತ್ತವೆ
  • ಸಪೋಟಾ ಸೇವನೆಯಿಂದ ಆರೋಗ್ಯಕ್ಕೆ ಅನೇಕ ರೀತಿಯ ಪ್ರಯೋಜನವಾಗುವುದು
ಬೇಸಿಗೆಯಲ್ಲಿ ಈ ಆರೋಗ್ಯ ಪ್ರಯೋಜನಗಳಿಗಾಗಿ ಸೇವಿಸಬೇಕು ಸಪೋಟ ಹಣ್ಣು ! title=

Chikoo Benefits : ಬೇಸಿಗೆಯಲ್ಲಿ,ಮಾರುಕಟ್ಟೆಗೆ ಸಪೋಟ ಹಣ್ಣು ಹೇರಳವಾಗಿ ಬರುತ್ತದೆ. ಇತ್ತೀಚಿನ ದಿನಗಳಲ್ಲಿ ಇದು ಮಾರುಕಟ್ಟೆಯಲ್ಲಿ ಅತ್ಯಂತ ಕಡಿಮೆ ಬೆಲೆಯಲ್ಲಿ ಲಭ್ಯವಿದೆ.ಇದರ ಸೇವನೆಯಿಂದ ದೇಹದ ಅನೇಕ ಸಮಸ್ಯೆಗಳು ನಿವಾರಣೆಯಾಗುತ್ತವೆ.ಸಪೋಟ ಕ್ಯಾಲ್ಸಿಯಂ, ಡಯೆಟರಿ ಫೈಬರ್, ವಿಟಮಿನ್ ಸಿ ನಂತಹ ಅನೇಕ ಅಗತ್ಯ ಪೋಷಕಾಂಶಗಳನ್ನು ಹೊಂದಿದೆ. ಇದು ನಿಮ್ಮ ಅನೇಕ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಬೇಸಿಗೆಯಲ್ಲಿ ಸಪೋಟಾ ಸೇವನೆಯಿಂದ  ಆರೋಗ್ಯಕ್ಕೆ ಅನೇಕ ರೀತಿಯ ಪ್ರಯೋಜನವಾಗುವುದು. 

ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ :
ಸಪೋಟಾ ಸೇವನೆಯಿಂದ ದುರ್ಬಲ ರೋಗನಿರೋಧಕ ಶಕ್ತಿಯನ್ನು ಹೆಚ್ಚಾಗುತ್ತದೆ. ಇದು ವಿಟಮಿನ್ ಸಿ ಯ ಉತ್ತಮ ಮೂಲವಾಗಿದೆ.ಇದರೊಂದಿಗೆ, ಇದು ಪಾಲಿಫಿನಾಲ್‌ಗಳಂತಹ ಉತ್ಕರ್ಷಣ ನಿರೋಧಕಗಳನ್ನು ಹೊಂದಿದೆ.ಇದು ನಿಮ್ಮ ದೇಹದ ದುರ್ಬಲ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. 

ಇದನ್ನೂ ಓದಿ : ತೂಕ ಕಳೆದುಕೊಳ್ಳಲು ಕಡಿಮೆ ತಿನ್ನಬೇಕು ಎಂದೇನಿಲ್ಲ !ಬೆಳಗಿನ ಉಪಹಾರದಲ್ಲಿ ಇದನ್ನು ಸೇವಿಸಿ ಸಾಕು !

 ಸದೃಢ ಮೂಳೆಗಳಿಗಾಗಿ :  
ಸಪೋಟಾ ಸೇವಿಸುವುದರಿಂದ ದೇಹಕ್ಕೆ ಕ್ಯಾಲ್ಸಿಯಂ, ರಂಜಕ ಮತ್ತು ಕಬ್ಬಿಣದಂತಹ ಸಾಕಷ್ಟು ಪೋಷಕಾಂಶಗಳು ಸಿಗುತ್ತವೆ.ಇದು ನಿಮ್ಮ ದುರ್ಬಲ ಮೂಳೆಗಳನ್ನು ಸದೃಢಗೊಳಿಸುತ್ತದೆ. ನಿಯಮಿತವಾಗಿ ಸಪೋಟಾವನ್ನು ಸೇವಿಸಿದರೆ, ಮೂಳೆಯ ಆರೋಗ್ಯ ಸುಧಾರಿಸುತ್ತದೆ.

ಜೀರ್ಣಕ್ರಿಯೆ ಸುಧಾರಿಸುತ್ತದೆ : 
ಸಪೋಟಾದಲ್ಲಿ ಉತ್ತಮ ಪ್ರಮಾಣದ ನಾರಿನಂಶವಿದೆ.ಇದರೊಂದಿಗೆ, ಇದು ಅನೇಕ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ. ಇದು ಕರುಳಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.ಕರುಳಿನ ತೊಂದರೆಗಳು ಮತ್ತು ಸೋಂಕುಗಳನ್ನು ಕಡಿಮೆ ಮಾಡುತ್ತದೆ. 

ಇದನ್ನೂ ಓದಿ : ಆರೋಗ್ಯ ಸಂಜೀವಿನಿ ಬಾಳೆ ಹೂವು: ಈ ಗಂಭೀರ ಕಾಯಿಲೆಗಳಿಂದ ನೀಡುತ್ತೆ ಪರ್ಮನೆಂಟ್ ಮುಕ್ತಿ

ಚರ್ಮದ ಸಮಸ್ಯೆಗಳು ಕಡಿಮೆಯಾಗುತ್ತವೆ : 
ಸಪೋಟಾ ಹಣ್ಣಿನಲ್ಲಿ ಅನೇಕ ವಿಧದ ವಿಟಮಿನ್‌ಗಳು, ಆಂಟಿಆಕ್ಸಿಡೆಂಟ್‌ಗಳು, ಖನಿಜಗಳು ಮತ್ತು ಆಹಾರದ ನಾರಿನಂಶ ಕಂಡು ಬರುತ್ತದೆ. ಇದರಿಂದಾಗಿ ಚರ್ಮದ ಹೊಳಪನ್ನು ಹೆಚ್ಚಿಸಬಹುದು.ಇದಲ್ಲದೆ, ಇದು ವಿಟಮಿನ್ ಇ ಯ ಉತ್ತಮ ಮೂಲವಾಗಿದೆ. ಸಪೋಟಾ ಸಾರವನ್ನು ಮುಖಕ್ಕೆ ಹಚ್ಚಿದರೆ ಮುಖದ ಕಾಂತಿ ಹೆಚ್ಚುತ್ತದೆ.

ಕ್ಯಾನ್ಸರ್ ಅಪಾಯಗಳನ್ನು ಕಡಿಮೆ ಮಾಡುತ್ತದೆ : 
ಸಪೋಟಾದಲ್ಲಿ ಉತ್ತಮ ಪ್ರಮಾಣದ ಆ್ಯಂಟಿಆಕ್ಸಿಡೆಂಟ್‌ಗಳಿವೆ. ಇದನ್ನು ಸೇವಿಸುವುದರಿಂದ ದೇಹಕ್ಕೆ ವಿಟಮಿನ್ ಎ ಮತ್ತು ವಿಟಮಿನ್ ಬಿ ಸಿಗುತ್ತದೆ.ಇದರ ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳು ನಿಮ್ಮ ದೇಹದಲ್ಲಿ ಕ್ಯಾನ್ಸರ್ ಕೋಶಗಳು ಬೆಳೆಯುವುದನ್ನು ತಡೆಯುತ್ತದೆ.

(ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಜ್ಞಾನವನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯರನ್ನು ಸಂಪರ್ಕಿಸಿ. Zee Kannada News ಇದನ್ನು ಖಚಿತಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News