Weight loss Tips In Kannada : ನಮ್ಮ ಅಡುಗೆ ಮನೆಯಲ್ಲಿ ನಿತ್ಯ ಬಳಸುವ ಅನೇಕ ಮಸಾಲೆ ಪದಾರ್ಥಗಳಿವೆ. ಅವುಗಳಲ್ಲಿ ಕೆಲವು ಮಸಾಲೆಯನ್ನು ಪ್ರತಿ ನಿತ್ಯದ ಅಡುಗೆಯಲ್ಲಿ ಬಳಸುತ್ತೇವೆ. ಅಂಥಹ ಮಸಾಲೆಯಲ್ಲಿ ಒಂದು ಜೀರಿಗೆ. ಜೀರಿಗೆಯಲ್ಲಿ ಮೆಗ್ನೀಸಿಯಮ್, ಕಬ್ಬಿಣ, ಕ್ಯಾಲ್ಸಿಯಂ ಮತ್ತು ವಿಟಮಿನ್ ಬಿ ಉತ್ತಮ ಪ್ರಮಾಣದಲ್ಲಿ ಕಂಡುಬರುತ್ತದೆ. ಅಲ್ಲದೆ, ಜೀರಿಗೆ ಫೈಬರ್ ಮತ್ತು ಪೊಟ್ಯಾಸಿಯಮ್ನ ಉತ್ತಮ ಮೂಲವಾಗಿದೆ. ಜೀರಿಗೆ ಬೀಜಗಳನ್ನು ತಿನ್ನುವುದು ದೇಹದ ರೋಗ ನಿರೋಧಕ ಶಕ್ತಿಯನ್ನು ಕೂಡಾ ಹೆಚ್ಚಿಸುತ್ತದೆ. ಜೊತೆಗೆ ತೂಕ ನಷ್ಟಕ್ಕೆ ಇದು ಅತ್ಯಂತ ಸಹಕಾರಿಯಾಗಿದೆ.
ಈ ವಿಧಾನಗಳಲ್ಲಿ ಜೀರಿಗೆ ನೀರನ್ನು ಸೇವಿಸಿದರೆ ಬಹಳ ಬೇಗನೆ ತೂಕವನ್ನು ಕಳೆದುಕೊಳ್ಳಬಹುದು.
1. ತೂಕ ನಷ್ಟಕ್ಕೆ ಜೀರಿಗೆ ಮತ್ತು ಕರಿಬೇವಿನ ನೀರು :
ಜೀರಿಗೆ ಮತ್ತು ಕರಿಬೇವಿನ ಎಲೆಯ ನೀರು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ರಾತ್ರಿ ಒಂದು ಲೋಟ ನೀರಿಗೆ 1 ಚಮಚ ಜೀರಿಗೆ ಮತ್ತು 5-7 ಕರಿಬೇವಿನ ಎಲೆಗಳನ್ನು ಹಾಕಿಡಿ. ಬೆಳಿಗ್ಗೆ ಈ ನೀರನ್ನು ಫಿಲ್ಟರ್ ಮಾಡಿ ಕುಡಿಯಿರಿ.ಪ್ರತಿದಿನ ಈ ಪಾನೀಯವನ್ನು ಕುಡಿಯುವುದರಿಂದ ಚಯಾಪಚಯ ದರ ಹೆಚ್ಚಾಗುತ್ತದೆ. ಅಲ್ಲದೆ ಜೀರಿಗೆ ಮತ್ತು ಕರಿಬೇವಿನ ಎಲೆಗಳ ನೀರು BMI ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಇದನ್ನೂ ಓದಿ : ನೈಸರ್ಗಿಕವಾಗಿ ಮತ್ತು ಬುಡದಿಂದಲೇ ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸುತ್ತದೆ ಈ ವಸ್ತುಗಳು
2. ತೂಕ ನಷ್ಟಕ್ಕೆ ಜೀರಿಗೆ ಮತ್ತು ಕೊತ್ತಂಬರಿ ನೀರು :
ಜೀರಿಗೆ ಮತ್ತು ಕೊತ್ತಂಬರಿ ಎರಡೂ ತೂಕವನ್ನು ಕಡಿಮೆ ಮಾಡುತ್ತದೆ. ಇಲ್ಲಿ ಕೂಡಾ ಜೀರಿಗೆ ಮತ್ತು ಕೊತ್ತಂಬರಿ ಬೀಜಗಳನ್ನು ರಾತ್ರಿಯಿಡಿ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಈ ನೀರನ್ನು ಕುಡಿಯಬೇಕು. ಇದು ನಿಮ್ಮನ್ನು ದೀರ್ಘಕಾಲ ಹಸಿವಿನಿಂದ ದೂರವಿಟ್ಟು ತೂಕವನ್ನು ಕಡಿಮೆ ಮಾಡುತ್ತದೆ. ಜೀರಿಗೆ ಮತ್ತು ಕೊತ್ತಂಬರಿ ಬೀಜವನ್ನು ನೀರಿನಲ್ಲಿ ಕುದಿಸಿ ಕೂಡಾ ಆ ನೀರನ್ನು ಕುಡಿಯಬಹುದು.
3. ತೂಕ ನಷ್ಟಕ್ಕೆ ಜೀರಿಗೆ ಮತ್ತು ನಿಂಬೆ ನೀರು :
ಜೀರಿಗೆಯಂತೆ, ನಿಂಬೆ ಕೂಡಾ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ . 2 ಚಮಚ ಜೀರಿಗೆ ಬೀಜಗಳನ್ನು ಒಂದು ಲೋಟ ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ಈ ನೀರನ್ನು ಚೆನ್ನಾಗಿ ಕುದಿಸಿ. ನೀರನ್ನು ಸೋಸಿಕೊಂಡು ಆ ನೀರಿಗೆ ನಿಂಬೆ ರಸ ಬೆರೆಸಿ ಕುಡಿಯಿರಿ.ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿದರೆ ಕ್ರಮೇಣ ತೂಕ ಕಡಿಮೆಯಾಗಲು ಶುರುವಾಗುತ್ತದೆ.
ಇದನ್ನೂ ಓದಿ : Winter Fruits: ಚಳಿಗಾಲದಲ್ಲಿ ಆರೋಗ್ಯವಾಗಿರಲು ಸೇವಿಸಬೇಕಾದ ಹಣ್ಣುಗಳು ಯಾವುದು ಗೊತ್ತೇ?
4. ತೂಕ ನಷ್ಟಕ್ಕೆ ಜೀರಿಗೆ ಮತ್ತು ಚಕ್ಕೆ ನೀರು :
ಚಕ್ಕೆ ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ. ಜೀರಿಗೆ ಮತ್ತು ಚಕ್ಕೆಯನ್ನು ನೀರಿನಲ್ಲಿ ಹಾಕಿ ಕುದಿಸಿ ಆ ನೀರನ್ನು ಕುಡಿಯಬಹುದು. ಇದಕ್ಕಾಗಿ, ಒಂದು ಲೋಟ ನೀರಿನಲ್ಲಿ 1 ಚಮಚ ಜೀರಿಗೆ ಮತ್ತು ಚಕ್ಕೆ ತುಂಡುಗಳನ್ನು ಹಾಕಿ ರಾತ್ರಿಯಿಡೀ ನೆನೆಸಿಡಿ. ಬೆಳಿಗ್ಗೆ ಈ ನೀರನ್ನು ಕುದಿಸಿ ಕುಡಿಯಿರಿ. ಇದು ತೂಕವನ್ನು ಕಳೆದುಕೊಳ್ಳಲು ಬಹಳಷ್ಟು ಸಹಾಯ ಮಾಡುತ್ತದೆ.
(ಸೂಚನೆ: ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ.)ದು ಸಣ್ಣ ವಯಸ್ಸಿನಲ್ಲಿಯೇ ಕೂದಲು ಬಿಳಿಯಾಗುವುದನ್ನು ತಡೆಯುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.