Diabetes Control Tips: ಈ ಎಲೆಯ ಪುಡಿಯನ್ನು 1 ಚಮಚ ತಿನ್ನಿ, ಶುಗರ್‌ ಕ್ಷಣಾರ್ಧದಲ್ಲಿ ಕಂಟ್ರೋಲ್‌ಗೆ ಬರುತ್ತೆ.!

Diabetes Control In 8 Days: ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷಿಸಿಕೊಳ್ಳಬೇಕು. ಮಧುಮೇಹ ಉಲ್ಬಣಗೊಳ್ಳಲು ಮುಖ್ಯ ಕಾರಣ ರಕ್ತದಲ್ಲಿನ ಸಕ್ಕರೆಯ ಪ್ರಮಾಣ ಹೆಚ್ಚಾಗುವುದು ಎನ್ನುತ್ತಾರೆ ಆರೋಗ್ಯ ತಜ್ಞರು. ಹಾಗಾಗಿ ಇದನ್ನು ನಿಯಂತ್ರಿಸಬೇಕು.

Written by - Chetana Devarmani | Last Updated : Feb 4, 2023, 07:33 AM IST
  • ಮಧುಮೇಹಿಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷಿಸಿಕೊಳ್ಳಬೇಕು
  • ಮಧುಮೇಹ ಉಲ್ಬಣಗೊಳ್ಳಲು ಮುಖ್ಯ ಕಾರಣ ರಕ್ತದಲ್ಲಿನ ಸಕ್ಕರೆಯ ಪ್ರಮಾಣ
  • ಇವುಗಳ ಸೇವನೆಯಿಂದ‌ ಸುಲಭವಾಗಿ ನಿಯಂತ್ರಣಕ್ಕೆ ಬರುತ್ತದೆ ಶುಗರ್‌ ಲೆವಲ್
Diabetes Control Tips: ಈ ಎಲೆಯ ಪುಡಿಯನ್ನು 1 ಚಮಚ ತಿನ್ನಿ, ಶುಗರ್‌ ಕ್ಷಣಾರ್ಧದಲ್ಲಿ ಕಂಟ್ರೋಲ್‌ಗೆ ಬರುತ್ತೆ.! title=
Diabetes Control In 8 Days

Diabetes Control In 8 Days: ಪ್ರಸ್ತುತ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆಧುನಿಕ ಜೀವನಶೈಲಿಯನ್ನು ಅನುಸರಿಸಿ ಅನೇಕ ಜನರು ಮಧುಮೇಹದಂತಹ ಗಂಭೀರ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಆದರೆ, ಮಧುಮೇಹದ ತೊಂದರೆಗಳಿಗೆ ದೇಹದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾಗುವುದೇ ಮುಖ್ಯ ಕಾರಣ ಎನ್ನುತ್ತಾರೆ ಆರೋಗ್ಯ ತಜ್ಞರು. ಆದ್ದರಿಂದ ಮಧುಮೇಹ ಮತ್ತು ಮಧುಮೇಹದ ಲಕ್ಷಣಗಳಿಂದ ಬಳಲುತ್ತಿರುವವರು ಹಲವಾರು ಮುನ್ನೆಚ್ಚರಿಕೆಗಳನ್ನು ಅನುಸರಿಸಬೇಕು. ಅದರಲ್ಲೂ ತಾವು ಸೇವಿಸುವ ಆಹಾರದ ಬಗ್ಗೆ ವಿಶೇಷ ಗಮನ ಹರಿಸಬೇಕಾಗುತ್ತದೆ. ಇಲ್ಲದಿದ್ದರೆ ಗಂಭೀರ ಆರೋಗ್ಯ ಸಮಸ್ಯೆಗಳ ಜತೆಗೆ ಮಧುಮೇಹವೂ ಮಾರಣಾಂತಿಕವಾಗುವ ಸಾಧ್ಯತೆಗಳಿವೆ.

ಮಧುಮೇಹವನ್ನು ನಿಯಂತ್ರಿಸಲು ರಾಸಾಯನಿಕಗಳನ್ನು ಒಳಗೊಂಡಿರುವ ಉತ್ಪನ್ನಗಳನ್ನು ಸೇವಿಸುವುದರ ಹೊರತಾಗಿ, ಆಯುರ್ವೇದ ತಜ್ಞರು ಸೂಚಿಸುವ ಅನೇಕ ಗಿಡಮೂಲಿಕೆಗಳನ್ನು ಸೇವಿಸಬೇಕು. ಇವುಗಳ ಸೇವನೆಯಿಂದ ರಕ್ತದಲ್ಲಿನ ಸಕ್ಕರೆ ಅಂಶವು ಸುಲಭವಾಗಿ ನಿಯಂತ್ರಣಕ್ಕೆ ಬರುತ್ತದೆ. ಇದಲ್ಲದೆ, ಆರೋಗ್ಯ ಸಮಸ್ಯೆಗಳು ಸಹ ಸುಲಭವಾಗಿ ಕಡಿಮೆಯಾಗುತ್ತವೆ.

ಇದನ್ನೂ ಓದಿ : Cumin Seeds: ಆರೋಗ್ಯಕ್ಕೆ ಮಾತ್ರವಲ್ಲ ತ್ವಚೆಯ ಸೌಂದರ್ಯಕ್ಕೂ ಪ್ರಯೋಜನಕಾರಿ ಜೀರಿಗೆ

ಮಧುಮೇಹ ನಿಯಂತ್ರಣಕ್ಕೆ ಈ ಎಲೆಗಳು ಅವಶ್ಯಕ :

ಬೇವಿನ ಎಲೆಗಳು: ಬೇವಿನ ಎಲೆಗಳು ಫ್ಲೇವನಾಯ್ಡ್‌ಗಳು ಮತ್ತು ಆಂಟಿವೈರಲ್ ಸಂಯುಕ್ತಗಳಲ್ಲಿ ಸಮೃದ್ಧವಾಗಿವೆ. ಆದ್ದರಿಂದ ಇವುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಆದ್ದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಬೇವಿನ ಎಲೆಗಳನ್ನು ಒಣಗಿಸಬೇಕು. ನಂತರ ಅವುಗಳನ್ನು ಮಿಕ್ಸಿಂಗ್ ಜಾರ್‌ಗೆ ಹಾಕಿ ಪುಡಿ ಮಾಡಿ. ಈ ಪುಡಿಯನ್ನು ಪ್ರತಿದಿನ ಒಂದು ಚಮಚ ತೆಗೆದುಕೊಳ್ಳಬೇಕು. ಇದರ ಗುಣಲಕ್ಷಣಗಳು ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ.

ಮಾವಿನ ಎಲೆಗಳು: ಮಾವಿನ ಎಲೆಗಳೂ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ ಆಯುರ್ವೇದ ತಜ್ಞರು. ಈ ಎಲೆಗಳು ಮಧುಮೇಹವನ್ನು ನಿಯಂತ್ರಿಸಲು ಸಹ ಸಹಾಯ ಮಾಡುತ್ತದೆ ಎಂದು ತಜ್ಞರು ಸೂಚಿಸುತ್ತಾರೆ. ಆದರೆ ಇದಕ್ಕೆ 10 ರಿಂದ 15 ಮಾವಿನ ಎಲೆಗಳನ್ನು ತೆಗೆದುಕೊಳ್ಳಬೇಕು. ಅವನ್ನು ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ನಂತರ ಸೋಸಿ ಹಗಲು ಹೊತ್ತಲ್ಲಿ ಕುಡಿಯಿರಿ.

ಇದನ್ನೂ ಓದಿ : ಈ ಒಂದು ಹಸಿರು ಸೊಪ್ಪು ಸೇವಿಸಿದರೆ ಸಾಕು ನಿಯಂತ್ರಣದಲ್ಲಿರುವುದು ಬ್ಲಡ್ ಶುಗರ್

ಮೆಂತ್ಯ ಸೊಪ್ಪು : ಮೆಂತ್ಯವನ್ನು ಆಯುರ್ವೇದದಲ್ಲಿ ಔಷಧಿ ಎಂದು ಪರಿಗಣಿಸಲಾಗಿದೆ. ಅದಕ್ಕಾಗಿಯೇ ಮಧುಮೇಹಿಗಳು ಪ್ರತಿದಿನ ಮೆಂತ್ಯ ಸೊಪ್ಪನ್ನು ಸೇವಿಸುವಂತೆ ಆಯುರ್ವೇದ ತಜ್ಞರು ಶಿಫಾರಸು ಮಾಡುತ್ತಾರೆ. ಇದಕ್ಕಾಗಿ ಮೆಂತ್ಯ ಸೊಪ್ಪನ್ನು ಪಲ್ಯ ಅಥವಾ ಸಲಾಡ್ ರೂಪದಲ್ಲಿ ದಿನನಿತ್ಯ ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿರುತ್ತದೆ.

ಕರಿಬೇವು: ಕರಿಬೇವಿನ ಎಲೆಗಳಲ್ಲಿ ಮಧುಮೇಹ ವಿರೋಧಿ ಗುಣಗಳು ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತವೆ. ಆದ್ದರಿಂದ ಮಧುಮೇಹದಿಂದ ಬಳಲುತ್ತಿರುವವರು ಈ ಎಲೆಗಳನ್ನು ದಿನನಿತ್ಯದ ಆಹಾರದಲ್ಲಿ ಸೇವಿಸುವುದರಿಂದ ಉತ್ತಮ ಫಲಿತಾಂಶವನ್ನು ಪಡೆಯುತ್ತಾರೆ. ಇದು ಕಣ್ಣುಗಳಿಗೂ ಪರಿಣಾಮಕಾರಿ.

(ಗಮನಿಸಿ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು, ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ತೆಗೆದುಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE KANNADA NEWS ಅದನ್ನು ಪರಿಶೀಲಿಸಿಲ್ಲ.)

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News