Ginger Water Benefits: ಪೋಷಕಾಂಶಗಳಿಂದ ಸಮೃದ್ಧವಾಗಿರುವ ಶುಂಠಿ ನೀರು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಶುಂಠಿಯನ್ನು ಅಡುಗೆಯ ರುಚಿ ಹೆಚ್ಚಿಸಲು ಬಳಸುವುದಲ್ಲದೆ, ಆಯುರ್ವೇದ ಮತ್ತು ಹೋಮಿಯೋಪತಿಯಲ್ಲಿ ಔಷಧಿಯಾಗಿ ಉಪಯೋಗಿಸಲಾಗುತ್ತದೆ.
ಶುಂಠಿಯು ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳ ಶಕ್ತಿ ಕೇಂದ್ರವಾಗಿದ್ದು ಚರ್ಮ, ಕೂದಲು ಸೇರಿದಂತೆ ಒಟ್ಟಾರೆ ಆರೋಗ್ಯಕ್ಕೆ ಉತ್ತಮವಾಗಿದೆ.
ಇದನ್ನೂ ಓದಿ: ಪಿರಿಯಡ್ಸ್ ವೇಳೆ ಈ ಪಾನೀಯ ಸೇವನೆ ಮಾಡಿದ್ರೆ ಸಾಕು: ಕಾಡುವ ಹೊಟ್ಟೆನೋವಿಗೆ ಚಿಟಿಕೆಯಲ್ಲಿ ಸಿಗುತ್ತೆ ರಿಲೀಫ್
ಚರ್ಮಕ್ಕೆ ಪ್ರಯೋಜನಕಾರಿ
ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ತೊಂದರೆಗೊಳಗಾಗುತ್ತಿದ್ದರೆ, ಶುಂಠಿ ನೀರು ನಿಮಗೆ ಬಹಳಷ್ಟು ಸಹಾಯ ಮಾಡುತ್ತದೆ. ಉತ್ಕರ್ಷಣ ನಿರೋಧಕ ಜಿಂಜರಾಲ್’ಗಳಲ್ಲಿ ಸಮೃದ್ಧವಾಗಿದ್ದು, ಸ್ವತಂತ್ರ ರಾಡಿಕಲ್ಗಳ ವಿರುದ್ಧ ಹೋರಾಡುತ್ತದೆ, ಅದೇ ರೀತಿ ಚರ್ಮವನ್ನು ಆರೋಗ್ಯಕರವಾಗಿ ಮತ್ತು ಸ್ವಚ್ಛವಾಗಿ ಮಾಡುತ್ತದೆ.
ಜೀರ್ಣಕಾರಿ ಸಮಸ್ಯೆ
ಶುಂಠಿ ನೀರು ವರದಾನಕ್ಕಿಂತ ಕಡಿಮೆಯಿಲ್ಲ. ದಿನಕ್ಕೆರಡು ಬಾರಿ ಶುಂಠಿ ನೀರನ್ನು ಕುಡಿಯುವುದರಿಂದ ಅಜೀರ್ಣ ಮತ್ತು ಮಲಬದ್ಧತೆ ನಿವಾರಣೆಯಾಗುತ್ತದೆ. ಆಸಿಡ್ ರಿಫ್ಲಕ್ಸ್, ವಾಕರಿಕೆ ಅಥವಾ ಹೊಟ್ಟೆಯಲ್ಲಿನ ಅತಿಯಾದ ಗ್ಯಾಸ್ ಸಮಸ್ಯೆಯನ್ನು ತೆಗೆದುಹಾಕುವಲ್ಲಿ ಇದು ಸಹಕಾರಿಯಾಗಿದೆ.
ಕೊಲೆಸ್ಟ್ರಾಲ್ ಕಡಿಮೆ:
ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಕೊಲೆಸ್ಟ್ರಾಲ್ ಸಮಸ್ಯೆಯಿಂದ ತೊಂದರೆಗೀಡಾಗಿದ್ದಾರೆ. ದೇಹದಲ್ಲಿ ಹೆಚ್ಚಿದ ಕೊಲೆಸ್ಟ್ರಾಲ್ ಹಲವಾರು ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಇದಕ್ಕೆ ಶುಂಠಿ ನೀರೊಂದೇ ಪರಿಹಾರ.
ಪೀರಿಯಡ್ಸ್ ಸೆಳೆತ:
ಇತ್ತೀಚಿನ ದಿನಗಳಲ್ಲಿ, PMS (ಪ್ರಿ ಮೆನ್ಸ್ಟ್ರುವಲ್ ಸಿಂಡ್ರೋಮ್) ನಿಂದ ಉಂಟಾಗುವ ಸಮಸ್ಯೆಗಳಿಂದ ಅನೇಕ ಮಹಿಳೆಯರು ತೊಂದರೆಗೊಳಗಾಗುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ಶುಂಠಿ ನೀರು ನಿಮಗೆ ತುಂಬಾ ಉಪಯುಕ್ತವಾಗಬಹುದು. 2018 ರ ತೈವಾನೀಸ್ ಜರ್ನಲ್ ಆಫ್ ಅಬ್ಸ್ಟೆಟ್ರಿಕ್ಸ್ ಅಂಡ್ ಗೈನೆಕಾಲಜಿಯಲ್ಲಿನ ಅಧ್ಯಯನವು ಶುಂಠಿಯು OTC ನೋವು ನಿವಾರಕಗಳಂತೆ ಪೀರಿಯಡ್ಸ್ ನೋವು ಮತ್ತು ಸೆಳೆತವನ್ನು ಕಡಿಮೆ ಮಾಡಲು ಪರಿಣಾಮಕಾರಿಯಾಗಿದೆ ಎಂದು ಕಂಡುಹಿಡಿದಿದೆ.
ತೂಕ ನಷ್ಟಕ್ಕೆ ಸಹಾಯಕ:
ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ ಶುಂಠಿ ನೀರನ್ನು ಕುಡಿಯಬಹುದು. ಶುಂಠಿ ನೀರನ್ನು ನಿಯಮಿತವಾಗಿ ಕುಡಿಯುವುದರಿಂದ ದೀರ್ಘಕಾಲದವರೆಗೆ ಹೊಟ್ಟೆ ತುಂಬಿದ ಅನುಭವ ಇರುತ್ತದೆ. ಹೀಗಾಗಿ ಹೆಚ್ಚು ಆಹಾರ ಸೇವನೆ ಮಾಡುವುದಿಲ್ಲ.
ಇದನ್ನೂ ಓದಿ: ದೇಹದ ಈ ಮೂರು ಭಾಗದಲ್ಲಿ ನೋವು ಕಾಣಿಸಿಕೊಂಡರೆ ಕೊಲೆಸ್ಟ್ರಾಲ್ ಹೆಚ್ಚಾಗಿದೆ ಎಂದರ್ಥ
ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಯಾವುದೇ ರೀತಿಯಲ್ಲಿ ಪರ್ಯಾಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.