ಬೆಲ್ಲದ ಚಹಾ ಸೇವನೆಯಿಂದ ಆರೋಗ್ಯಕ್ಕಿದೆ ಅದ್ಭುತ ಪ್ರಯೋಜನಗಳು

ಮೊದಲೆಲ್ಲಾ ಮಕ್ಕಳಿಗೆ ಶೀತ, ನೆಗಡಿ, ಕೆಮ್ಮು ಕಾಣಿಸಿಕೊಂಡರೆ ಮೊದಲು ಸ್ವಲ್ಪ ಬೆಲ್ಲವನ್ನು ನೀಡುತ್ತಿದ್ದರು. ಇದಲ್ಲದೆ, ಟೀ, ಕಾಫಿಗೂ ಕೂಡ ಸಕ್ಕರೆ ಬದಲಿಗೆ ಬೆಲ್ಲ ಬಳಸುತ್ತಿದ್ದರು. ಇದಕ್ಕೆ ಮುಖ್ಯ ಕಾರಣ ಅದರಲ್ಲಿರುವ ಔಷಧೀಯ ಗುಣಗಳು.

Written by - Yashaswini V | Last Updated : Feb 23, 2023, 10:38 AM IST
  • ಬೆಲ್ಲದಲ್ಲಿರುವ ಜೀವಸತ್ವಗಳು ಮತ್ತು ಖನಿಜಗಳು ಎಲ್ಲಾ ರೀತಿಯಲ್ಲೂ ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತವೆ.
  • ಬೆಲ್ಲದ ಚಹಾ ಸೇವನೆಯು ಜೀರ್ಣಕ್ರಿಯೆಯನ್ನು ಆರೋಗ್ಯಕರವಾಗಿರಿಸುತ್ತದೆ.
  • ಇದರಿಂದ ಉದರ ಸಂಬಂಧಿತ ಹಲವು ಸಮಸ್ಯೆಗಳಿಂದಲೂ ದೂರ ಉಳಿಯಬಹುದು.
ಬೆಲ್ಲದ ಚಹಾ ಸೇವನೆಯಿಂದ ಆರೋಗ್ಯಕ್ಕಿದೆ ಅದ್ಭುತ ಪ್ರಯೋಜನಗಳು  title=
Jaggery Tea Benefits

ಬೆಂಗಳೂರು: ನಮ್ಮ ಸುತ್ತಮುತ್ತಲೂ ನಾವು ಹಲವು ಚಹಾ ಪ್ರಿಯರನ್ನು ಕಾಣುತ್ತೇವೆ. ಚಹಾ ಇಲ್ಲದೆ, ನಮ್ಮ ತಲೆಯೇ ಓಡುವುದಿಲ್ಲ ಎಂದು ಹೇಳುವವರೂ ಇದ್ದಾರೆ. ಆದರೆ, ಸಕ್ಕರೆ ಮಿಶ್ರಿತ ಚಹಾ ಸೇವನೆಯು ಆರೋಗ್ಯಕ್ಕೆ ಅಪಾಯಕಾರಿ. ಇದು, ಬೊಜ್ಜು, ಮಧುಮೇಹದಂತಹ ಅಪಾಯವನ್ನು ಹೆಚ್ಚಿಸುತ್ತದೆ. ಹಾಗಂತ, ಬೆಳಿಗ್ಗೆಯಿಂದ ಸಂಜೆವರೆಗೆ ಚಹಾ ಬಿಟ್ಟಿರುವುದನ್ನು ಊಹಿಸಿಕೊಳ್ಳಲೂ ಕೂಡ ಸಾಧ್ಯವಿಲ್ಲ. ಇದನ್ನು ತಪ್ಪಿಸಲು ನೀವು ಚಹಾದಲ್ಲಿ ಸಕ್ಕರೆ ಬದಲಿಗೆ ಬೆಲ್ಲವನ್ನು ಮಿಕ್ಸ್ ಮಾಡಿ ಸೇವಿಸಬಹುದು. 

ಆರೋಗ್ಯ ತಜ್ಞರ ಪ್ರಕಾರ, ಬೆಲ್ಲದ ಚಹಾ ರುಚಿಕರ ಮಾತ್ರವಲ್ಲ, ಆರೋಗ್ಯಕ್ಕೂ ಕೂಡ ತುಂಬಾ ಪ್ರಯೋಜನಕಾರಿ ಆಗಿದೆ. ಬೆಲ್ಲದ ಚಹಾ ಸೇವನೆಯಿಂದ ಆರೋಗ್ಯಕ್ಕೆ ಅದ್ಭುತ ಪ್ರಯೋಜನಗಳು ಲಭ್ಯವಾಗಲಿವೆ ಎಂದು ಹೇಳಲಾಗುತ್ತದೆ. ಹಾಗಿದ್ದರೆ, ಬೆಲ್ಲದ ಚಹಾ ಸೇವನೆಯಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳು ಲಭ್ಯವಾಗಲಿವೆ ಎಂದು ತಿಳಿಯಿರಿ.

ಬೆಲ್ಲದ ಚಹಾ ಸೇವನೆಯಿಂದ ಆರೋಗ್ಯಕ್ಕಿದೆ ಅದ್ಭುತ ಪ್ರಯೋಜನಗಳು:
ತೂಕ ಇಳಿಕೆ:

ತೂಕ ಇಳಿಕೆ ಪ್ರಕ್ರಿಯೆಯಲ್ಲಿ ಹಲವರು ಚಹಾ ಸೇವನೆಯನ್ನು ಬಿಡುತ್ತಾರೆ. ಆದರೆ, ನೀವು ಸಕ್ಕರೆ ಬದಲಿಗೆ ಬೆಲ್ಲದ ಚಹಾ ಸೇವಿಸಿದರೆ ದೇಹದ ಕ್ಯಾಲೋರಿಗಳು ಕಡಿಮೆಯಾಗುತ್ತವೆ. ಇದರಿಂದ ತೂಕ ಇಳಿಕೆಗೂ ಸಹಾಯಕವಾಗುತ್ತದೆ.

ಇದನ್ನೂ ಓದಿ- ಉಪ್ಪಿನಿಂದ ಮಾತ್ರವಲ್ಲ ಈ ಆಹಾರಗಳಿಂದಲೂ ಹೆಚ್ಚಾಗುತ್ತೆ ರಕ್ತದೊತ್ತಡ

ಜೀರ್ಣಕ್ರಿಯೆ:
ಬೆಲ್ಲದಲ್ಲಿರುವ ಜೀವಸತ್ವಗಳು ಮತ್ತು ಖನಿಜಗಳು ಎಲ್ಲಾ ರೀತಿಯಲ್ಲೂ ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತವೆ. ಬೆಲ್ಲದ ಚಹಾ ಸೇವನೆಯು  ಜೀರ್ಣಕ್ರಿಯೆಯನ್ನು ಆರೋಗ್ಯಕರವಾಗಿರಿಸುತ್ತದೆ. ಇದರಿಂದ ಉದರ ಸಂಬಂಧಿತ ಹಲವು ಸಮಸ್ಯೆಗಳಿಂದಲೂ ದೂರ ಉಳಿಯಬಹುದು. 

ಇದನ್ನೂ ಓದಿ- ಮಧುಮೇಹ ಮತ್ತು ಕೊಲೆಸ್ಟ್ರಾಲ್‌ನಿಂದ ಮುಕ್ತಿ ಪಡೆಯಲು ಸಹಕಾರಿ ಈ 4 ಎಲೆಗಳು 

ರಕ್ತಹೀನತೆ ಸಮಸ್ಯೆಗೆ ಪರಿಹಾರ:
ಹಲವರಿಗೆ ನಾನಾ ರೀತಿಯ ಕಾರಣಗಳಿಂದಾಗಿ ರಕ್ತಹೀನತೆ ಸಮಸ್ಯೆ ಕಾಡುತ್ತದೆ. ಇದನ್ನು ತಪ್ಪಿಸಲು ಹಾಲು-ಬೆಲ್ಲ, ಇಲ್ಲವೇ ಬೆಲ್ಲದ ಟೀ ಅತ್ಯುತ್ತಮ ಪರಿಹಾರವಾಗಿದೆ. ಬೆಲ್ಲದಲ್ಲಿ ಕಬ್ಬಿಣಾಂಶ ಇರುವುದರಿಂದ ಬೆಲ್ಲದ ಟೀ ಸೇವನೆಯಿಂದ ರಕ್ತಹೀನತೆ ಸಮಸ್ಯೆಗೆ ಪರಿಹಾರ ಪಡೆಯಬಹುದು ಎಂದು ಹೇಳಲಾಗುತ್ತದೆ.

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News