ಪೋಷಕಾಂಶಗಳ ನಿಧಿ ಹಸಿ ಶುಂಠಿ: ನಿತ್ಯ ಬೆಳಗ್ಗೆ ಒಂದು ತುಂಡು ತಿಂದರೆ ಸಿಗುವುದು ಇಷ್ಟೆಲ್ಲಾ ಅದ್ಭುತ ಪ್ರಯೋಜನ

Ginger Benefits: ವಿಟಮಿನ್ ಸಿ, ಮೆಗ್ನೀಸಿಯಮ್ ಮತ್ತು ಇತರ ಖನಿಜಗಳಲ್ಲಿ ಸಮೃದ್ಧವಾಗಿದ್ದು, ಆಹಾರದಲ್ಲಿ ಸೇರಿಸುವ ಮೂಲಕ ಅನೇಕ ರೋಗಗಳಿಂದ ಮುಕ್ತಿ ಪಡೆಯಬಹುದು.

Written by - Bhavishya Shetty | Last Updated : Apr 28, 2024, 02:37 PM IST
    • ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಶುಂಠಿ ಪಾನೀಯ
    • ಶುಂಠಿಯಲ್ಲಿ ಉರಿಯೂತ ನಿವಾರಕ, ಆ್ಯಂಟಿ ಆಕ್ಸಿಡೆಂಟ್ ಗುಣಗಳಿವೆ
    • ಆಹಾರದಲ್ಲಿ ಸೇರಿಸುವ ಮೂಲಕ ಅನೇಕ ರೋಗಗಳಿಂದ ಮುಕ್ತಿ ಪಡೆಯಬಹುದು
ಪೋಷಕಾಂಶಗಳ ನಿಧಿ ಹಸಿ ಶುಂಠಿ: ನಿತ್ಯ ಬೆಳಗ್ಗೆ ಒಂದು ತುಂಡು ತಿಂದರೆ ಸಿಗುವುದು ಇಷ್ಟೆಲ್ಲಾ ಅದ್ಭುತ ಪ್ರಯೋಜನ title=
Ginger

Ginger Benefits: ಶುಂಠಿಯು ಪೋಷಕಾಂಶಗಳ ನಿಧಿಯಾಗಿದೆ. ಇದು ರುಚಿಕರ ಹಾಗೂ ಆರೋಗ್ಯ ಪೂರ್ಣ. ಆಯುರ್ವೇದದಲ್ಲಿ ಇದನ್ನು ಔಷಧ ತಯಾರಿಸಲು ಮತ್ತು ಮಸಾಲೆಯಾಗಿಯೂ ಬಳಸಲಾಗುತ್ತದೆ. ಇದು ವಿಟಮಿನ್ ಸಿ, ಮೆಗ್ನೀಸಿಯಮ್ ಮತ್ತು ಇತರ ಖನಿಜಗಳಲ್ಲಿ ಸಮೃದ್ಧವಾಗಿದ್ದು, ಆಹಾರದಲ್ಲಿ ಸೇರಿಸುವ ಮೂಲಕ ಅನೇಕ ರೋಗಗಳಿಂದ ಮುಕ್ತಿ ಪಡೆಯಬಹುದು.

ಶುಂಠಿ ಚಹಾವು ದೇಹದ ಅನೇಕ ಸಮಸ್ಯೆಗಳಿಂದ ಪರಿಹಾರವನ್ನು ನೀಡುವಲ್ಲಿ ಪರಿಣಾಮಕಾರಿಯಾಗಿದೆ.

ಇದನ್ನೂ ಓದಿ: Job Alert: UPSCಯಿಂದ 506 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿ

ಪ್ರತಿರಕ್ಷಣಾ ವ್ಯವಸ್ಥೆ: ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಶುಂಠಿ ಪಾನೀಯಗಳನ್ನು ಕುಡಿಯಬಹುದು, ಇದು ನಿಮ್ಮ ಆಯಾಸವನ್ನು ತ್ವರಿತವಾಗಿ ನಿವಾರಿಸುತ್ತದೆ. ಶುಂಠಿಯು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಸೋಂಕು ನಿವಾರಣೆಗೆ ನೆರವಾಗುವುದಲ್ಲದೆ, ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು, ಇದು ಉತ್ತಮ.

ಜೀರ್ಣಕ್ರಿಯೆ: ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಶುಂಠಿ. ಅಜೀರ್ಣ, ಮಲಬದ್ಧತೆ, ಊತ ಇತ್ಯಾದಿ ಸಮಸ್ಯೆಗಳಿಂದ ನೀವು ತೊಂದರೆಗೊಳಗಾಗಿದ್ದರೆ, ಶುಂಠಿಯು ನಿಮಗೆ ತುಂಬಾ ಪ್ರಯೋಜನಕಾರಿ. ಇದು ಜೀರ್ಣಕ್ರಿಯೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

ತೂಕ ಕಡಿಮೆ: ಶುಂಠಿಯಲ್ಲಿ ಉರಿಯೂತ ನಿವಾರಕ, ಆ್ಯಂಟಿ ಆಕ್ಸಿಡೆಂಟ್ ಗುಣಗಳಿವೆ. ಇದು ತೂಕವನ್ನು ಕಳೆದುಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ. ಇದರಲ್ಲಿರುವ ಗುಣಲಕ್ಷಣಗಳು ಜೀರ್ಣಕಾರಿ ಕಿಣ್ವಗಳ ಉತ್ಪಾದನೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ,

ರಕ್ತ ಪರಿಚಲನೆ: ಶುಂಠಿಯಲ್ಲಿ ಜೀವಸತ್ವಗಳು, ಖನಿಜಗಳು ಮತ್ತು ಅಮೈನೋ ಆಮ್ಲಗಳು ಸಾಕಷ್ಟು ಪ್ರಮಾಣದಲ್ಲಿ ಕಂಡುಬರುತ್ತವೆ. ಇವು ಹೃದಯ ಸಂಬಂಧಿ ಸಮಸ್ಯೆಗಳ ಸಾಧ್ಯತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಶುಂಠಿಯು ಅಪಧಮನಿಗಳಲ್ಲಿ ಕೊಬ್ಬು ಸಂಗ್ರಹವಾಗುವುದನ್ನು ತಡೆಯುತ್ತದೆ,

ಇದನ್ನೂ ಓದಿ: Gold And Silver Price: ಭಾರತದಲ್ಲಿ ಚಿನ್ನಾಭರಣದ ಬೆಲೆ ಕುಸಿತ: ಯದ್ವತದ್ವ ಏರಿದ ಬೆಳ್ಳಿಯ ದರ!

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಯಾವುದೇ ರೀತಿಯಲ್ಲಿ ಪರ್ಯಾಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News