ನವದೆಹಲಿ: ಇತ್ತೀಚಿನ ದಿನಗಳಲ್ಲಿ ಅತಿಯಾದ ವಾಯು ಮಾಲಿನ್ಯದಿಂದಾಗಿ ಉಸಿರಾಡಲು ಶುದ್ಧ ಗಾಳಿ ದೊರೆಯುವುದೇ ಕಷ್ಟವಾಗಿದೆ. ಹೀಗಾಗಿ ವಾಹನದಟ್ಟಣೆಯಿರುವ ರಾಷ್ಟ್ರ ರಾಜಧಾನಿ ದೆಹಲಿ, ಮುಂಬೈ, ಪುಣೆ, ಬೆಂಗಳೂರು ಮಹಾನಗರಗಳೂ ಸಹ ವಾಯುಮಾಲಿನ್ಯದಿಂದ ಹೊರತಾಗಿಲ್ಲ.
ವಾಯುಮಾಲಿನ್ಯದಿಂದಾಗಿ ಶ್ವಾಸಕೋಶ, ಅಸ್ತಮಾ, ಹೃದಯ ಸಂಬಂಧಿ ಸಮಸ್ಯೆಗಳು, ರಕ್ತ ಮತ್ತು ಮೆದುಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಕಾರಣವಾಗುವುದಲ್ಲದೆ ದೇಹದಲ್ಲಿನ ರೋಗನಿರೋಧಕ ಶಕ್ತಿಯನ್ನೂ ಕುಗ್ಗಿಸುತ್ತದೆ. ಹಾಗಾಗಿ ನಮ್ಮ ಆಹಾರ ಸೇವನೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವುದು ಅಗತ್ಯ.
* ಪ್ರತಿನಿತ್ಯ 40 ಮಿಲಿಗ್ರಾಂ ವಿಟಮಿನ್ ಸಿ ಸೇವನೆಯಿಂದ ಯಾವುದೇ ರೀತಿಯ ರೋಗಗಳಿಂದ ಶರೀರವನ್ನು ರಕ್ಷಿಸಿಕೊಳ್ಳಬಹುದು.
* ವಿಟಮಿನ್ ಸಿ ಹೆಚ್ಚಾಗಿರುವ ಕಿತ್ತಳೆ, ಸೌತೆಕಾಯಿ, ನಿಂಬೆ, ನೆಲ್ಲಿಕಾಯಿ ಮತ್ತು ಸೀಬೆಹಣ್ಣುಗಳನ್ನು ಹೆಚ್ಚಾಗಿ ಸೇವಿಸುವುದು ಅಗತ್ಯ.
* ಪ್ರತಿನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿ ನೀರಿಗೆ ನಿಂಬೆ ರಸ ಸೇವಿಸಿ ಕುಡಿಯುವುದು ಆರೋಗ್ಯಕ್ಕೆ ಉತ್ತಮ.
* ಹೃದಯ ಮತ್ತು ಮನಸ್ಸು ಉಲ್ಲಾಸಭಾರಿತವಾಗಿರಲು ಪ್ರತಿನಿತ್ಯ ವಿಟಮಿನ್ ಇ ಸಮೃದ್ಧವಾಗಿರುವ ಸೂರ್ಯಕಾಂತಿ ಬೀಜ, ಕಡಲೆಕಾಯಿ ಬೀಜ ಸೇವಿಸುವುದು ಒಳ್ಳೆಯದು. ಮೀನಿನಲ್ಲಿ ವಿಟಮಿನ್ ಇ ಅಂಶ ಹೆಚ್ಚಾಗಿರುವುದರಿಂದ ಅದೂ ಸಹ ಆರೋಗ್ಯ ವೃದ್ಧಿಗೆ ಸಹಕಾರಿ.
* ಪೊಟ್ಯಾಷಿಯಂ, ಕಾರ್ಬೋಹೈಡ್ರೇಟ್, ಅಪರ್ಯಾಪ್ತ ಕೊಬ್ಬು, ಫೈಬರ್, ಕ್ಯಾಲ್ಸಿಯಂ, ಮೆಗ್ನೀಷಿಯಂ, ವಿಟಮಿನ್ ಸಿ ಮತ್ತು ವಿಟಮಿನ್ ಎ ಅಂಶಗಳಿರುವ ಆಹಾರ ಸೇವಿಸುವುದರಿಂದ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ.