ಈ ಹಣ್ಣು ಮಧುಮೇಹ ರೋಗಿಗಳಿಗೆ ರಾಮಬಾಣ, ನಿಯಂತ್ರಣದಲ್ಲಿಡುತ್ತದೆ ರಕ್ತದಲ್ಲಿನ ಸಕ್ಕರೆ ಪ್ರಮಾಣ

Benefits of Guava in Diabetes : ವೈದ್ಯರ ಪ್ರಕಾರ, ಮಧುಮೇಹ ರೋಗಿಗಳು ಸಿಹಿ ಪ್ರಮಾಣವು ತುಂಬಾ ಕಡಿಮೆ ಇರುವ ಆಹಾರ ಸೇವನೆಯತ್ತ ಗಮನ ಹರಿಸಬೇಕು. ಮಾತ್ರವಲ್ಲ ಮಧುಮೇಹ ನಿಯಂತ್ರಿಸಬಲ್ಲ ಹಣ್ಣು ತರಕಾರಿಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು.

Written by - Ranjitha R K | Last Updated : Oct 14, 2022, 02:58 PM IST
  • ಈ ರೋಗ ಬಂತೆಂದರೆ, ಮನುಷ್ಯನ ದೇಹವನ್ನು ಕುಗ್ಗಿಸಿ ಬಿಡುತ್ತದೆ.
  • ಸೇವಿಸುವ ಆಹಾರ, ಪಾನೀಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ
  • ಹಣ್ಣಿನ ಮೂಲಕ ಮಧುಮೇಹ ರೋಗವನ್ನು ನಿಯಂತ್ರಣಕ್ಕೆ ತರಬಹುದು
ಈ ಹಣ್ಣು ಮಧುಮೇಹ ರೋಗಿಗಳಿಗೆ ರಾಮಬಾಣ, ನಿಯಂತ್ರಣದಲ್ಲಿಡುತ್ತದೆ ರಕ್ತದಲ್ಲಿನ ಸಕ್ಕರೆ ಪ್ರಮಾಣ  title=
How to Control Diabetes by Eating Guava

Benefits of Guava in Diabetes : ಆರೋಗ್ಯಕರವಲ್ಲದ ಆಹಾರಗಳ ಸೇವನೆ ಮತ್ತು ದೈಹಿಕ ವ್ಯಾಯಾಮವನ್ನು ಮಾಡದೇ ಇರುವ ಕಾರಣ, ಇತ್ತೀಚಿನ ದಿನಗಳಲ್ಲಿ ಮಧುಮೇಹ ರೋಗ ದೇಹದಲ್ಲಿ ವೇಗವಾಗಿ ಹರಡುತ್ತಿದೆ.  ನಾಲ್ಕರ ಲ್ಲಿ ಒಬ್ಬ ವ್ಯಕ್ತಿ ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಒಮ್ಮೆ ಈ ರೋಗ ಬಂತೆಂದರೆ, ಮನುಷ್ಯನ ದೇಹವನ್ನು ಕುಗ್ಗಿಸಿ ಬಿಡುತ್ತದೆ. ಈ ಕಾರಣದಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಣಕ್ಕೆ ತರುವ ಪ್ರಯತ್ನ ಮಾಡುತ್ತಲೇ ಇರಬೇಕಾಗುತ್ತದೆ. ಸೇವಿಸುವ  ಆಹಾರ, ಪಾನೀಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಈ ಒಂದು ಹಣ್ಣಿನ ಮೂಲಕ ಮಧುಮೇಹ ರೋಗವನ್ನು ನಿಯಂತ್ರಣಕ್ಕೆ ತರಬಹುದು. 

ಪೇರಳೆ ಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಕಂಡುಬರುತ್ತವೆ :
ವೈದ್ಯರ ಪ್ರಕಾರ, ಮಧುಮೇಹ ರೋಗಿಗಳು ಸಿಹಿ ಪ್ರಮಾಣವು ತುಂಬಾ ಕಡಿಮೆ ಇರುವ ಆಹಾರ ಸೇವನೆಯತ್ತ ಗಮನ ಹರಿಸಬೇಕು. ಮಾತ್ರವಲ್ಲ ಮಧುಮೇಹ ನಿಯಂತ್ರಿಸಬಲ್ಲ ಹಣ್ಣು ತರಕಾರಿಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಪೇರಳೆ ಹಣ್ಣು  ಮಧುಮೇಹ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ.  ಈ ಹಣ್ಣಿನಲ್ಲಿ ವಿಟಮಿನ್-ಎ, ವಿಟಮಿನ್-ಬಿ, ವಿಟಮಿನ್-ಸಿ ಮತ್ತು ರಂಜಕ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತದೆ. ಇದು ಇನ್ಸುಲಿನ್ ಉತ್ಪಾದನೆಗೆ ಸಹಾಯ ಮಾಡುವ ಮೂಲಕ ಮಧುಮೇಹವನ್ನು ನಿಯಂತ್ರಿಸುತ್ತದೆ. 

ಇದನ್ನೂ ಓದಿ ಬ್ಲಡ್ ಶುಗರ್ ನಿಯಂತ್ರಣದಲ್ಲಿ ಇಲ್ಲವಾದರೆ ಎದುರಾಗುವುದು ಈ ಸಮಸ್ಯೆಗಳು. !

ಗ್ಲೂಕೋಸ್ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ :
ಪೇರಳೆ  ಹಣ್ಣಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಫೈಬರ್ ಕಂಡುಬರುತ್ತದೆ. ಈ ಫೈಬರ್ ದೇಹದಲ್ಲಿನ ಗ್ಲೂಕೋಸ್ ಮಟ್ಟವನ್ನು ಸಮತೋಲನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪೇರಳೆಯಲ್ಲಿ ಗ್ಲೈಸೆಮಿಕ್ ಸೂಚ್ಯಂಕವು ತುಂಬಾ ಕಡಿಮೆಯಾಗಿರುತ್ತದೆ. ಈ ಕಾರಣದಿಂದಾಗಿ ಅದರ ಸೇವನೆಯು ಮಧುಮೇಹ ರೋಗಿಗಳಿಗೆ ಬಹಳ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. 

ಪೇರಳೆ ಎಲೆಗಳಿಂದ ಮಾಡಿದ ಚಹಾ  : 
ಪೇರಳೆ ಹಣ್ಣು ಮಾತ್ರವಲ್ಲ, ಇದರ ಎಲೆಗಳು ಕೂಡಾ ಮಧುಮೇಹ ರೋಗ ನಿವಾರಣೆಗೆ ಸಹಾಯ ಮಾಡುತ್ತದೆ. ಮಧುಮೇಹವನ್ನು ನಿಯಂತ್ರಿಸಲು ಪೇರಳೆ ಎಲೆಗಳಿಂದ ತಯಾರಿಸಿದ ಚಹಾವನ್ನು ಸೇವಿಸಬಹುದು. ಈ ಚಹಾವನ್ನು ಕುಡಿಯುವುದರಿಂದ,  ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ.

ಇದನ್ನೂ ಓದಿ :  ಲಿವರ್ ಆರೋಗ್ಯಕ್ಕಾಗಿ ಸೇವಿಸಿ ಈ ಆಹಾರ.! ಉದರದ ಸಮಸ್ಯೆಗಳಿಗೆ ಸಿಗುವುದು ಪರಿಹಾರ

 

( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ವೈದ್ಯಕೀಯ ಸಲಹೆಯನ್ನು ಪಡೆಯಿರಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News