Healthy Bathing Tips: ಬೇಸಿಗೆ ಕಾಲ ಆರಂಭವಾಗಿದೆ. ಈ ಋತುವಿನಲ್ಲಿ ತ್ವಚೆಯ ತಾಜಾತನವನ್ನು ಕಾಪಾಡಿಕೊಳ್ಳುವುದು ಯಾವುದೇ ಸವಾಲಿಗಿಂತ ಕಡಿಮೆಯಿಲ್ಲ. ನಿತ್ಯ ಸ್ನಾನ ಮಾಡಿದರೂ, ಚರ್ಮದ ಆರೋಗ್ಯದ ಬಗ್ಗೆ ಎಷ್ಟೇ ಕಾಳಜಿವಹಿಸಿದರೂ ಹಲವು ಬಾರಿ ಚರ್ಮದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆರೋಗ್ಯ ತಜ್ಞರ ಪ್ರಕಾರ, ನೀವು ಅರಿಶಿನ ನೀರಿನಿಂದ ಸ್ನಾನ ಮಾಡಿದರೆ, ಅದು ಚರ್ಮದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.
ಚರ್ಮಕ್ಕೆ ಅರಿಶಿನ ನೀರಿನ ಪ್ರಯೋಜನಗಳು:
ಅಡುಗೆಮನೆಯಲ್ಲಿ ಅರಿಶಿನವನ್ನು ಮಸಾಲೆಯಾಗಿ ಬಳಸಲಾಗುತ್ತದೆ. ಅದೇ ಸಮಯದಲ್ಲಿ, ಅರಿಶಿನ ಸೇವನೆಯಿಂದ ಆರೋಗ್ಯಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳು ಸಹ ದೂರವಾಗುತ್ತವೆ. ಇದಲ್ಲದೇ ಸೌಂದರ್ಯವನ್ನು ಕಾಪಾಡಿಕೊಳ್ಳಲು ಸಹ ಕೆಲವರು ಅರಿಶಿನವನ್ನು ಬಳಸುತ್ತಾರೆ. ಆದರೆ ಅರಿಶಿನ ನೀರು ತ್ವಚೆಯನ್ನು (Turmeric Water For Skin) ಹಲವು ಸಮಸ್ಯೆಗಳಿಂದ ದೂರವಿಡುತ್ತದೆ ಎಂಬುದು ನಿಮಗೆ ತಿಳಿದಿದೆಯೇ. ಅರಿಶಿನದ ನೀರಿನಿಂದ ಸ್ನಾನ ಮಾಡುವುದರಿಂದ ತ್ವಚೆಯ ಸಮಸ್ಯೆಗಳೂ ನಿವಾರಣೆಯಾಗುತ್ತವೆ. ಹಾಗಿದ್ದರೆ, ಅರಿಶಿನ ನೀರಿನಿಂದ ಸ್ನಾನ ಮಾಡುವುದರಿಂದ ಆಗುವ ಆರೋಗ್ಯಕಾರಿ ಲಾಭಗಳೇನು ಎಂಬುದನ್ನು ತಿಳಿಯೋಣ...
ಇದನ್ನೂ ಓದಿ- Skin Care Tips: ತ್ವಚೆಯ ಈ ಸಮಸ್ಯೆಗಳಿಗೆ ಪರಿಹಾರ ನೀಡುತ್ತೆ ನಿಂಬೆಹಣ್ಣು
ಅರಿಶಿನ ನೀರಿನಿಂದ ಸ್ನಾನ ಮಾಡುವುದರಿಂದ ಸಿಗುವ 3 ಪ್ರಮುಖ ಪ್ರಯೋಜನಗಳು :
1. ಸೋರಿಯಾಸಿಸ್ ಸಮಸ್ಯೆಯಿಂದ ಬಳಲುತ್ತಿರುವವರು ಅರಿಶಿನ ನೀರಿನಿಂದ (Turmeric Water) ಸ್ನಾನ ಮಾಡುವುದರಿಂದ ಈ ಸಮಸ್ಯೆಯನ್ನು ಹೋಗಲಾಡಿಸಬಹುದು. ಆಂಟಿ-ಆಕ್ಸಿಡೆಂಟ್ ಮತ್ತು ಉರಿಯೂತದ ಗುಣಲಕ್ಷಣಗಳು ಅರಿಶಿನದಲ್ಲಿ ಕಂಡುಬರುತ್ತವೆ, ಇದು ಸೋರಿಯಾಸಿಸ್ ರೋಗಲಕ್ಷಣಗಳನ್ನು ಕಡಿಮೆ ಮಾಡಲು ಬಹಳ ಸಹಾಯಕವಾಗಿದೆ ಎಂದು ಸಾಬೀತುಪಡಿಸುತ್ತದೆ.
2. ಮೊಡವೆಗಳ ಸಮಸ್ಯೆಯನ್ನು ಹೋಗಲಾಡಿಸಲು ಅರಿಶಿನ ನೀರು ನಿಮಗೆ ತುಂಬಾ ಉಪಯುಕ್ತವಾಗಿದೆ. ಅಷ್ಟೇ ಅಲ್ಲ, ಮುಖದ ಮೇಲಿನ ಕಲೆಗಳನ್ನು ನಿವಾರಿಸಲು ಮತ್ತು ಚರ್ಮವನ್ನು ಸ್ವಚ್ಛಗೊಳಿಸಲು ಸಹ ಇದು ಸಹಾಯಕವಾಗಿದೆ.
ಇದನ್ನೂ ಓದಿ- Skin Care: ಚರ್ಮದ ಹಲವು ಸಮಸ್ಯೆಗಳಿಗೆ ಪರಿಹಾರ ನೀಡುತ್ತೆ ಟೊಮ್ಯಾಟೋ
3. ಚರ್ಮದ ಗಾಯಗಳನ್ನು ವಾಸಿಮಾಡುವಲ್ಲಿ ಅರಿಶಿನ ನೀರು ನಿಮಗೆ ಹೆಚ್ಚು ಉಪಯೋಗಕಾರಿಯಾಗಿದೆ. ಅರಿಶಿನ ನೀರಿನಿಂದ ನಿಯಮಿತವಾಗಿ ಸ್ನಾನ ಮಾಡುವುದರಿಂದ ಚರ್ಮದ ಗಾಯಗಳನ್ನು ತ್ವರಿತವಾಗಿ ಗುಣಪಡಿಸಲು ಸಹಾಯ ಮಾಡುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ನಂಬಿಕೆಗಳನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.