High Cholesterol Remedies: ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ನ ಮಟ್ಟವು ಹೆಚ್ಚಾಗುವುದರಿಂದ, ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯ ಎದುರಾಗುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ರಕ್ತದಲ್ಲಿ ಹೆಚ್ಚಾದಾಗ, ಅದು ಅಪಧಮನಿಗಳ ಮೇಲೆ ಹೆಚ್ಚಿನ ಒತ್ತಡವನ್ನು ಉಂಟುಮಾಡುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಹೃದಯಾಘಾತದ ಸಾಧ್ಯತೆಯು ಗಮನಾರ್ಹವಾಗಿ ಹೆಚ್ಚಾಗುತ್ತದೆ. ಆದ್ದರಿಂದ, ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವುದು ತುಂಬಾ ಮುಖ್ಯ. ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು, ನೀವು ಅಡುಗೆಮನೆಯಲ್ಲಿ ಇರಿಸಲಾಗಿರುವ ಮಸಾಲೆಗಳನ್ನು ಬಳಸಬಹುದು. ಹಸಿ ಶುಂಠಿಯು ನಿಮ್ಮ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಪರಿಣಾಮಕಾರಿಯಾಗಿದೆ. ಇದರಲ್ಲಿ ಜಿಂಜರಾಲ್ ಮತ್ತು ಶೋಗಾಲ್ ಎಂಬ ಉತ್ಕರ್ಷಣ ನಿರೋಧಕ ಅಂಶಗಳಿವೆ, ಇದರ ಸಹಾಯದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು. ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಹಸಿ ಶುಂಠಿಯನ್ನು ಹೇಗೆ ಹೇಗೆ ಬಳಸಬೇಕು ತಿಳಿದುಕೊಳ್ಳೋಣ ಬನ್ನಿ,
ಹಸಿ ಶುಂಠಿ ಮತ್ತು ನಿಂಬೆ ಚಹಾ
ಹಸಿ ಶುಂಠಿ ಮತ್ತು ನಿಂಬೆಯಿಂದ ತಯಾರಿಸಿದ ಚಹಾವನ್ನು ಕುಡಿಯುವುದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಕ್ರಮೇಣ ನಿಮ್ಮ ದೇಹದ ಕೊಬ್ಬನ್ನು ಕಡಿಮೆ ಮಾಡುತ್ತದೆ. ಇದನ್ನು ತಯಾರಿಸಲು, 1 ಕಪ್ ನೀರನ್ನು ತೆಗೆದುಕೊಂಡು ಅದಕ್ಕೆ ಶುಂಠಿ ಮತ್ತು ನಿಂಬೆ ರಸವನ್ನು ಬೆರೆಸಿ ಕುದಿಸಿ. ನಂತರ ಜೇನುತುಪ್ಪವನ್ನು ಸೇರಿಸಿ ಸೇವಿಸಿ. ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಹಸಿ ಶುಂಠಿಯನ್ನು ಖಾಲಿ ಹೊಟ್ಟೆಯಲ್ಲಿ ಅಗಿಯಿರಿ
ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ನೀವು ಹಸಿ ಶುಂಠಿಯನ್ನು ಖಾಲಿ ಹೊಟ್ಟೆ ಅಗಿಯಬಹುದು. ಇದರಿಂದ ನಿಮಗೆ ಸಾಕಷ್ಟು ಪ್ರಯೋಜನ ಸಿಗಲಿದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.
ಬೆಳ್ಳುಳ್ಳಿ ಮತ್ತು ಹಸಿ ಶುಂಠಿ ಕಷಾಯ
ಬೆಳ್ಳುಳ್ಳಿ ಮತ್ತು ಶುಂಠಿಯನ್ನು ಸ್ಮ್ಯಾಶ್ ಮಾಡಿ, ಅದನ್ನು 1 ಕಪ್ ನೀರಿಗೆ ಸೇರಿಸಿ ಮತ್ತು ಚೆನ್ನಾಗಿ ಕುದಿಸಿ. ಇದರ ನಂತರ ಈ ನೀರನ್ನು ಬಿಸಿಯಾಗಿ ಕುಡಿಯಿರಿ. ಇದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಸಾಕಷ್ಟು ಕಡಿಮೆ ಮಾಡಬಹುದು. ಇದಲ್ಲದೆ, ರಕ್ತನಾಳಗಳನ್ನು ತೆರೆಯಲು ಇದು ಪರಿಣಾಮಕಾರಿಯಾಗಿದೆ.
ಇದನ್ನೂ ಓದಿ-White Hair Remedies: ನಿಮ್ಮ ಆಹಾರದಲ್ಲಿನ ಈ ನಾಲ್ಕು ಪದಾರ್ಥಗಳು ಬಿಳಿ ಕೂದಲು ಸಮಸ್ಯೆಗೆ ಸೂಪರ್ ಫುಡ್ ಇದ್ದಂತೆ!
ಶುಂಠಿ ಪುಡಿಯನ್ನು ಆಹಾರದಲ್ಲಿ ಬಳಸಿ
ನೀವು ಶುಂಠಿಯನ್ನು ನೇರವಾಗಿ ಬಳಸಲು ಇಷ್ಟಪಡದಿದ್ದರೆ, ನಿಮ್ಮ ಆಹಾರದಲ್ಲಿ ಲಘುವಾಗಿ ಬೆರೆಸುವ ಮೂಲಕ ನೀವು ಶುಂಠಿ ಪುಡಿಯನ್ನು ಸೇವಿಸಬಹುದು. ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಹೆಚ್ಚಿನ ಪ್ರಮಾಣದಲ್ಲಿ ಸಹಾಯ ಮಾಡುತ್ತದೆ.
ಇದನ್ನೂ ಓದಿ-Relationship Tips: ಓರ್ವ ಪತಿ ತನ್ನ ಪತ್ನಿಯಿಂದ ಈ ಐದು ಸಂಗತಿಗಳನ್ನು ಬಯಸುತ್ತಾನೆ, ವೈಫ್ ಏನು ಮಾಡಬೇಕು?
(Disclaimer- ಆತ್ಮೀಯ ಓದುಗರೇ, ನಮ್ಮ ಸುದ್ದಿಯನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಸುದ್ದಿಯನ್ನು ನಿಮ್ಮಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಾತ್ರ ಬರೆಯಲಾಗಿದೆ. ಇದನ್ನು ಬರೆಯುವಲ್ಲಿ ನಾವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ಪಡೆದುಕೊಂಡಿದ್ದೇವೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ನೀವು ಎಲ್ಲಾದರು ಓದಿದ್ದರೆ, ಅದನ್ನು ಅನುಸರಿಸುವ ಮುನ್ನ ವೈದ್ಯರನ್ನು ಅಥವಾ ವಿಷಯ ತಜ್ನರನ್ನು ಸಂಪರ್ಕಿಸಿ.)
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ