Nutrients of Spinach: ಈ ಸೊಪ್ಪಿನಿಂದ ತಯಾರಿಸಿದ ಜ್ಯೂಸ್ ಕುಡಿದರೆ ಗಂಭೀರ ಕಾಯಿಲೆಗಳಿಗೆ ಸಿಗುತ್ತೆ ತಕ್ಷಣ ಮುಕ್ತಿ

Nutrients of Spinach: ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಕೆ, ಮೆಗ್ನೀಸಿಯಮ್, ಮ್ಯಾಂಗನೀಸ್ ಮತ್ತು ಕಬ್ಬಿಣದಂತಹ ಆಂಟಿ-ಆಕ್ಸಿಡೆಂಟ್‌ಗಳು ಇದರಲ್ಲಿ ಸಾಕಷ್ಟು ಕಂಡುಬರುತ್ತವೆ. ಪಾಲಕ್ ಸೊಪ್ಪನ್ನು ತಿನ್ನುವುದರಿಂದ ದೃಷ್ಟಿ ದೋಷ ನಿವಾರಣೆ ಮಾಡುತ್ತದೆ. ಜೊತೆಗೆ ಇದರಲ್ಲಿರುವ ವಿಟಮಿನ್ ಸಿ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

Written by - Bhavishya Shetty | Last Updated : Nov 26, 2022, 03:46 PM IST
    • ಪಾಲಕ್ ಸೊಪ್ಪನ್ನು ತಿನ್ನುವುದರಿಂದ ದೃಷ್ಟಿ ದೋಷ ನಿವಾರಣೆ ಮಾಡುತ್ತದೆ
    • ಪಾಲಕ್ ಸೊಪ್ಪನ್ನು ಬಳಸುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ
    • ಪಾಲಕ್ ರಸವನ್ನು ಕಪ್ಪು ಜೀರಿಗೆ ಪುಡಿ ಮತ್ತು ಉಪ್ಪಿನೊಂದಿಗೆ ಸೇವಿಸಬಹುದು
Nutrients of Spinach: ಈ ಸೊಪ್ಪಿನಿಂದ ತಯಾರಿಸಿದ ಜ್ಯೂಸ್ ಕುಡಿದರೆ ಗಂಭೀರ ಕಾಯಿಲೆಗಳಿಗೆ ಸಿಗುತ್ತೆ ತಕ್ಷಣ ಮುಕ್ತಿ title=
Spinach

Nutrients of Spinach: ಚಳಿಗಾಲದಲ್ಲಿ ಮಾರುಕಟ್ಟೆಗಳಲ್ಲಿ ಸಾಕಷ್ಟು ಹಸಿರು ತರಕಾರಿಗಳು ಸಿಗುತ್ತವೆ. ಇನ್ನು ಈ ಸೀಸನ್ ನಲ್ಲಿ ನೀವು ಸಾಮಾನ್ಯವಾಗಿ ಪಾಲಕ್ ಸೊಪ್ಪನ್ನು ಎಲ್ಲೆಡೆ ಕಾಣಬಹುದು. ಕೆಲವರಿಗೆ ಪಾಲಕ್ ಸೊಪ್ಪು ತಿನ್ನಲು ಇಷ್ಟಪಡುವುದಿಲ್ಲ. ಪಾಲಕ್ ಸೊಪ್ಪು ಅಥವಾ ಪಾಲಕ್ ಸೊಪ್ಪಿನ ರಸವನ್ನು ಚಳಿಗಾಲದ ಸಂದರ್ಭದಲ್ಲಿ ಸೇವಿಸಿದರೆ ಹಲವಾರು ಗಂಭೀರ ಕಾಯಿಲೆಗಳಿಂದ ಪಾರಾಗಬಹುದು.

ಇದನ್ನೂ ಓದಿ: Kidney Problems: ರಾತ್ರಿ ಹೊತ್ತು ಈ ಲಕ್ಷಣಗಳು ಕಂಡುಬಂದರೆ ಎಚ್ಚರ! ಕಿಡ್ನಿ ವೈಫಲ್ಯದ ಸಂಕೇತವಾಗಿಬಹುದು

ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಕೆ, ಮೆಗ್ನೀಸಿಯಮ್, ಮ್ಯಾಂಗನೀಸ್ ಮತ್ತು ಕಬ್ಬಿಣದಂತಹ ಆಂಟಿ-ಆಕ್ಸಿಡೆಂಟ್‌ಗಳು ಇದರಲ್ಲಿ ಸಾಕಷ್ಟು ಕಂಡುಬರುತ್ತವೆ. ಪಾಲಕ್ ಸೊಪ್ಪನ್ನು ತಿನ್ನುವುದರಿಂದ ದೃಷ್ಟಿ ದೋಷ ನಿವಾರಣೆ ಮಾಡುತ್ತದೆ. ಜೊತೆಗೆ ಇದರಲ್ಲಿರುವ ವಿಟಮಿನ್ ಸಿ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಪಾಲಕ್ ಇತರ ಪ್ರಯೋಜನಗಳು:

ಚಳಿಗಾಲದಲ್ಲಿ ಪಾಲಕ್ ಸೊಪ್ಪನ್ನು ಬಳಸುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಇದರೊಂದಿಗೆ, ಕ್ಯಾಲ್ಸಿಯಂ, ಸೋಡಿಯಂ, ಕ್ಲೋರಿನ್, ರಂಜಕ, ಪ್ರೋಟೀನ್ ಮತ್ತು ಕಬ್ಬಿಣವು ಇದರಲ್ಲಿ ಸಾಕಷ್ಟು ಇರುತ್ತದೆ. ಪಾಲಕ್ ರಸವು ಅನೇಕ ಗಂಭೀರ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಇದರಲ್ಲಿ ನಾರಿನಂಶವೂ ಹೆಚ್ಚಾಗಿದ್ದು, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ದೂರ ಮಾಡುತ್ತದೆ. ಮಲಬದ್ಧತೆ, ಅಜೀರ್ಣ ಮತ್ತು ಹೊಟ್ಟೆ ನೋವಿನಿಂದಲೂ ಪರಿಹಾರ ನೀಡುತ್ತದೆ.

2. ಇದರಲ್ಲಿರುವ ಕಬ್ಬಿಣಾಂಶವು ದೇಹದಲ್ಲಿ ರಕ್ತವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಪಾಲಕ್ ರಸವು ರಕ್ತಹೀನತೆಯ ಅಪಾಯವನ್ನು ಕಡಿಮೆ ಮಾಡುತ್ತದೆ. ರಕ್ತದೊತ್ತಡದ ಸಮಸ್ಯೆಯನ್ನು ಎದುರಿಸುತ್ತಿರುವವರು ಪಾಲಕ್ ಸೊಪ್ಪಿನ ರಸವನ್ನು ಕುಡಿಯಬೇಕು. ಇದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಇದರಲ್ಲಿರುವ ಕ್ಯಾಲ್ಸಿಯಂ ಮೂಳೆಗಳನ್ನು ಬಲಪಡಿಸುತ್ತದೆ.

3. ಪಾಲಕ್ ರಸವು ಚಯಾಪಚಯವನ್ನು ಹೆಚ್ಚಿಸುತ್ತದೆ. ಈ ಕಾರಣದಿಂದಾಗಿ, ದೇಹದಲ್ಲಿ ಕೊಬ್ಬು ಸಂಗ್ರಹವಾಗುವುದಿಲ್ಲ ಮತ್ತು ತೂಕವು ವೇಗವಾಗಿ ಕಡಿಮೆಯಾಗಲು ಪ್ರಾರಂಭಿಸುತ್ತದೆ. ನೀವು ಪಾಲಕ್ ರಸವನ್ನು ಕಪ್ಪು ಜೀರಿಗೆ ಪುಡಿ ಮತ್ತು ಉಪ್ಪಿನೊಂದಿಗೆ ಸೇವಿಸಬಹುದು.

ಇದನ್ನೂ ಓದಿ: Winter Health Tips : ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಈ ಆರೋಗ್ಯಕರ ಹಣ್ಣುಗಳನ್ನು!

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News