ಮಂಕಿಪಾಕ್ಸ್ ರೋಗಲಕ್ಷಣಗಳ ಬಗ್ಗೆ ಇರಲಿ ಎಚ್ಚರ

ಮಂಕಿಪಾಕ್ಸ್ ಲಕ್ಷಣಗಳು: ಕರೋನಾವೈರಸ್ ನಂತರ ಇದೀಗ ಇನ್ನೊಂದು ವೈರಸ್ ಇಡೀ ದೇಶದಲ್ಲಿ ತಲ್ಲಣ ಸೃಷ್ಟಿಸಿದೆ. ಮಂಗನ ಕಾಯಿಲೆ ಅಂದರೆ ಮಂಕಿಪಾಕ್ಸ್ ವೈರಸ್ ಒಂದು ಅಪರೂಪದ ಕಾಯಿಲೆ ಆಗಿದ್ದು, ಪಾಕ್ಸ್ವಿರಿಡೆ  ಆರ್ಥೋಪಾಕ್ಸ್ ವೈರಸ್ ಕುಲಕ್ಕೆ ಸೇರಿದೆ ಎಂದು ಹೇಳಲಾಗುತ್ತಿದೆ. ಇದರ ಲಕ್ಷಣಗಳ ಬಗ್ಗೆ ತಿಳಿಯೋಣ...

Written by - Yashaswini V | Last Updated : Jul 26, 2022, 12:21 PM IST
  • ಮಂಕಿಪಾಕ್ಸ್ ವೈರಸ್ ಸೋಂಕಿನಿಂದ ಉಂಟಾಗುವ ಅಪರೂಪದ ಕಾಯಿಲೆಯಾಗಿದೆ.
  • ಮಾನವರಲ್ಲಿ ಮಂಕಿಪಾಕ್ಸ್‌ನ ಲಕ್ಷಣಗಳು ಚಿಕನ್‌ಪಾಕ್ಸ್‌ನಂತೆಯೇ ಇರುತ್ತವೆ
  • ಇದರ ಸಾಮಾನ್ಯ ಲಕ್ಷಣಗಳ ಬಗ್ಗೆ ತಿಳಿಯಿರಿ...
ಮಂಕಿಪಾಕ್ಸ್ ರೋಗಲಕ್ಷಣಗಳ ಬಗ್ಗೆ ಇರಲಿ ಎಚ್ಚರ  title=
Monkeypox Symptoms

ಮಂಕಿಪಾಕ್ಸ್ ಲಕ್ಷಣಗಳು: ಇಡೀ ವಿಶ್ವದಲ್ಲಿ ಆತಂಕ ಸೃಷ್ಟಿಸಿರುವ ಮಂಕಿಪಾಕ್ಸ್ ಪ್ರಕರಣಗಳು ಭಾರತದಲ್ಲಿಯೂ ವರದಿ ಆಗಿವೆ. ಭಾರತದಲ್ಲಿ ಇದುವರೆಗೂ ನಾಲ್ಕು ಮಂಕಿಪಾಕ್ಸ್ ಪ್ರಕರಣಗಳು ವರದಿ ಆಗಿದೆ. ಇದರಲ್ಲಿ ಮೂರು ಪ್ರಕರಣಗಳು ಕೇರಳದಲ್ಲಿ ವರದಿ ಆಗಿದ್ದರೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಮಂಗನ ಕಾಯಿಲೆ ಅಂದರೆ ಮಂಕಿಪಾಕ್ಸ್ ಕಾಯಿಲೆಗೆ ಯಾವುದೇ ಚಿಕಿತ್ಸೆ ಲಭ್ಯವಿಲ್ಲ ಎಂಬುದು ಜನರ ಆತಂಕಕ್ಕೆ ಕಾರಣವಾಗಿದೆ. 

ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ಮಂಕಿಪಾಕ್ಸ್ ವೈರಸ್ ಸೋಂಕಿನಿಂದ ಉಂಟಾಗುವ ಅಪರೂಪದ ಕಾಯಿಲೆಯಾಗಿದೆ. ಮಂಕಿಪಾಕ್ಸ್ ವೈರಸ್ ಪಾಕ್ಸ್ವಿರಿಡೆ ಕುಟುಂಬದಲ್ಲಿ ಆರ್ಥೋಪಾಕ್ಸ್ ವೈರಸ್ ಕುಲಕ್ಕೆ ಸೇರಿದೆ. ಆರ್ಥೋಪಾಕ್ಸ್ ವೈರಸ್ ಕುಲವು ವೆರಿಯೊಲಾ ವೈರಸ್ (ಸಿಡುಬುಗೆ ಕಾರಣವಾಗುತ್ತದೆ), ವ್ಯಾಕ್ಸಿನಿಯಾ ವೈರಸ್ ( ಮತ್ತು ಕೌಪಾಕ್ಸ್ ವೈರಸ್ ಅನ್ನು ಸಹ ಒಳಗೊಂಡಿದೆ.

ಇದನ್ನೂ ಓದಿ- ವೇಗವಾಗಿ ಹರಡುತ್ತಿದೆ ಮಂಕಿಪಾಕ್ಸ್‌: ಭಾರತ ಎಚ್ಚರಿಕೆ ವಹಿಸಲು WHO ಸೂಚನೆ

ಸೆಂಟರ್ ಫಾರ್ ಡಿಸೀಸ್ ಅಂಡ್ ಕಂಟ್ರೋಲ್ ಪ್ರಿವೆನ್ಷನ್ (ಸಿಡಿಸಿ) ಪ್ರಕಾರ, ಮಾನವರಲ್ಲಿ ಮಂಕಿಪಾಕ್ಸ್‌ನ ಲಕ್ಷಣಗಳು ಚಿಕನ್‌ಪಾಕ್ಸ್‌ನಂತೆಯೇ ಇರುತ್ತವೆ, ಆದರೆ ಸೌಮ್ಯವಾಗಿರುತ್ತವೆ ಮತ್ತು ಜ್ವರ, ತಲೆನೋವು, ಸ್ನಾಯು ನೋವು ಮತ್ತು ಆಯಾಸದಿಂದ ಸೋಂಕಿನ ನಂತರ 7-14 ದಿನಗಳ ನಂತರ ಪ್ರಾರಂಭವಾಗುತ್ತದೆ. ಇದರ ಸಾಮಾನ್ಯ ಲಕ್ಷಣಗಳೆಂದರೆ ಜ್ವರ, ಶೀತ, ತಲೆನೋವು, ಸ್ನಾಯು ನೋವು, ಆಯಾಸ ಮತ್ತು ದುಗ್ಧರಸ ಗ್ರಂಥಿಗಳು ಊದಿಕೊಳ್ಳುವುದು.

ಇದನ್ನೂ ಓದಿ- Meningococcal: ಕೊರೊನಾ - ಮಂಕಿಪಾಕ್ಸ್ ನಡುವೆ ಮತ್ತೊಂದು ಮಾರಣಾಂತಿಕ ವೈರಸ್ ಪತ್ತೆ

ಮಂಕಿಪಾಕ್ಸ್ ಕಾಯಿಲೆಯನ್ನು ತಪ್ಪಿಸುವುದು ಹೇಗೆ?
* ಮಂಕಿಪಾಕ್ಸ್‌ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯಿಂದ ಅಂತರ ಕಾಯ್ದುಕೊಳ್ಳುವುದು.
* ಮಂಕಿಪಾಕ್ಸ್‌ನ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯ ಟವೆಲ್‌ಗಳು ಅಥವಾ ಬಟ್ಟೆಗಳಂತಹ ವೈಯಕ್ತಿಕ ವಸ್ತುಗಳನ್ನು ಮುಟ್ಟಬೇಡಿ.
* ಆಗಾಗ್ಗೆ ನಿಮ್ಮ ಕೈಗಳನ್ನು ಸೋಪ್ ಮತ್ತು ನೀರಿನಿಂದ ತೊಳೆಯಿರಿ ಅಥವಾ ಆಲ್ಕೋಹಾಲ್ ಆಧಾರಿತ ಹ್ಯಾಂಡ್ ಸ್ಯಾನಿಟೈಸರ್ ಬಳಸಿ.
* ಮಂಗನ ಕಾಯಿಲೆಯ ಲಕ್ಷಣಗಳು ಕಂಡುಬಂದರೆ, ಮನೆಯಲ್ಲಿಯೇ ಇರಿ.
* ಈ ಸಂದರ್ಭದಲ್ಲಿ ನಿಮ್ಮ ಸಾಕುಪ್ರಾಣಿಗಳಿಂದಲೂ ಅಂತರ ಕಾಯ್ದುಕೊಳ್ಳಿ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News