Papaya Seeds Benefits: ಆಯುರ್ವೇದದ ಪ್ರಕಾರ, ಪರಂಗಿ ಹಣ್ಣು ಮಾತ್ರವಲ್ಲ, ಪರಂಗಿಹಣ್ಣಿನ ಬೀಜಗಳು ಕೂಡ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಪರಂಗಿ ಉಷ್ಣವಲಯದ ಹಣ್ಣಾಗಿದ್ದು ಆರೋಗ್ಯಕ್ಕೆ ತುಂಬಾ ಲಾಭದಾಯಕವಾಗಿದೆ. ಸಾಮಾನ್ಯವಾಗಿ ನಾವು ಸಿಪ್ಪೆ ತೆಗೆದು ಪರಂಗಿ ಹಣ್ಣನ್ನು ಮಾತ್ರ ಸವಿಯುತ್ತೇವೆ. ಅದರೊಳಗಿರುವ ಬೀಜಗಳನ್ನು ಕಸ ಎಂದು ಬಿಸಾಡುತ್ತೇವೆ. ಆದರೆ, ರಸಭರಿತವಾದ ಪರಂಗಿ ಹಣ್ಣಿನ ಬೀಜಗಳು ಕೂಡ ಹಲವು ಅದ್ಭುತ ಪ್ರಯೋಜನಗಳನ್ನು ನೀಡುತ್ತದೆ.
ಈ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಲು ತುಂಬಾ ಪ್ರಯೋಜನಕಾರಿ ಪರಂಗಿ ಬೀಜಗಳು:
ಕೊಲೆಸ್ಟ್ರಾಲ್ ಮಟ್ಟವನ್ನು ಕಂಟ್ರೋಲ್:
ಪರಂಗಿ ಹಣ್ಣಿನ ಬೀಜಗಳಲ್ಲಿ ಪಪೈನ್ ಎಂದು ಕರೆಯಲ್ಪಡುವ ಕಿಣ್ವವನ್ನು ಹೊಂದಿರುತ್ತವೆ. ಇದು ಆಹಾರದ ಪ್ರೋಟೀನ್ಗಳು ಮತ್ತು ಕೊಬ್ಬಿನ ಜೀರ್ಣಕ್ರಿಯೆಯಲ್ಲಿ ಸಹಾಯ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಈ ಕಿಣ್ವಕ ಪರಿಣಾಮವು ಒಟ್ಟಾರೆ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.
ಎಲ್‌ಡಿಎಲ್ ಕೊಲೆಸ್ಟ್ರಾಲ್ ನಿಯಂತ್ರಣ:
ಫೈಬರ್‌ನಲ್ಲಿ ಸಮೃದ್ಧವಾಗಿರುವ ಪರಂಗಿ ಹಣ್ಣಿನ ಬೀಜಗಳನ್ನು ಆಹಾರದ ಭಾಗವಾಗಿಸುವುದರಿಂದ ಕರುಳಿನಲ್ಲಿ ಕೊಲೆಸ್ಟ್ರಾಲ್ ಹೀರಿಕೊಳ್ಳುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುತ್ತದೆ, ಇದರ ಪರಿಣಾಮವಾಗಿ ಎಲ್‌ಡಿಎಲ್ ಕೊಲೆಸ್ಟ್ರಾಲ್ ಮಟ್ಟವು ಕಡಿಮೆಯಾಗುತ್ತದೆ.
ಇದನ್ನೂ ಓದಿ- ನಿತ್ಯ ಅಂಜೂರ ಸೇವಿಸುವುದರಿಂದ ಆರೋಗ್ಯಕ್ಕಿದೆ 10 ಅದ್ಭುತ ಪ್ರಯೋಜನಗಳು
ಯಕೃತ್ತಿನ ನಿರ್ವಿಶೀಕರಣ:
ಪರಂಗಿ ಬೀಜಗಳು ಯಕೃತ್ತಿನ ಆರೋಗ್ಯವನ್ನು ಬೆಂಬಲಿಸುವ ಸಾಮರ್ಥ್ಯಕ್ಕೆ ಹೆಸರುವಾಸಿಯಾಗಿದೆ. ಪರಂಗಿ ಬೀಜಗಳಲ್ಲಿರುವ ಕೆಲವು ಸಂಯುಕ್ತಗಳು ಯಕೃತ್ತನ್ನು ನಿರ್ವಿಶೀಕರಣಗೊಳಿಸುವಲ್ಲಿ ಪರಿಣಾಮಕಾರಿ ಎಂದು ಹೇಳಲಾಗುತ್ತದೆ.
ಹೃದಯದ ಆರೋಗ್ಯ:
ಪರಂಗಿ ಹಣ್ಣಿನ ಬೀಜಗಳು ಫೈಬರ್‌ನಲ್ಲಿ ಸಮೃದ್ಧವಾಗಿದ್ದು ಇದರ ಬಳಕೆಯಿಂದ ಸಮಗ್ರ ಹೃದಯರಕ್ತನಾಳದ ಕ್ಷೇಮವನ್ನು ಉತ್ತೇಜಿಸುತ್ತದೆ.
ಪವರ್‌ಹೌಸ್:
ಪರಂಗಿ ಹಣ್ಣಿನ ಬೀಜಗಳಲ್ಲಿ ಆಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿದೆ. ಇದರಲ್ಲಿ ಫಿನಾಲಿಕ್ ಮತ್ತು ಫ್ಲೇವನಾಯ್ಡ್ ಎಂಬ ಸಂಯುಕ್ತಗಳು ಕೂಡ ಸೇರಿವೆ. ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುವ ಮೂಲಕ, ಈ ಬೀಜಗಳು ಉರಿಯೂತವನ್ನು ತಗ್ಗಿಸಲು ಸಹಕಾರಿಯಾಗಿದೆ.
ಇದನ್ನೂ ಓದಿ- ಅಧಿಕ ಬಿಪಿ ಇರುವವರು ಹೃದಯಾಘಾತದ ಈ 5 ಲಕ್ಷಣಗಳು ಕಾಣಿಸಿಕೊಂಡರೆ ಮೊದಲು ಆಸ್ಪತ್ರೆ ತಲುಪಿ..!
ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು:
ಪರಂಗಿ ಬೀಜಗಳು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳನ್ನು ಹೊಂದಿದ್ದು, ಇದು ದೇಹದಲ್ಲಿನ ವಿವಿಧ ಬ್ಯಾಕ್ಟೀರಿಯಾದ ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
ಜೀರ್ಣಾಂಗ ವ್ಯವಸ್ಥೆ:
ಪರಂಗಿ ಹಣ್ಣಿನ ಬೀಜಗಳಲ್ಲಿ ಪಪೈನ್ ಎಂಬ ಕಿಣ್ವವಿದೆ, ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದು ಆಹಾರದಲ್ಲಿರುವ ಪ್ರೋಟೀನ್‌ಗಳನ್ನು ಒಡೆಯಲು ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದರಿಂದಾಗಿ ಹೊಟ್ಟೆ ಉಬ್ಬುವುದು, ಮಲಬದ್ಧತೆ ಮತ್ತು ಅಜೀರ್ಣದಂತಹ ರೋಗಲಕ್ಷಣಗಳನ್ನು ಕಡಿಮೆ ಮಾಡುತ್ತದೆ.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಕೆಲವು ಸಂಶೋಧನೆ ಹಾಗೂ ಸಾಮಾನ್ಯ ಮಾಹಿತಿಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.