ಪ್ಲಾಸ್ಟಿಕ್ ಬಾಟಲಿನಲ್ಲಿ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಹಾನಿಯಾಗುತ್ತೆ ಗೊತ್ತಾ!

Health Tips: ಇತ್ತೀಚಿನ ದಿನಗಳಲ್ಲಿ ಬಹುತೇಕ ಜನರು ಪ್ಲಾಸ್ಟಿಕ್ ಬಾಟಲಿನಲ್ಲಿ ನೀರು ಕುಡಿಯುವ ಅಭ್ಯಾಸ ಹೊಂದಿರುತ್ತಾರೆ. ಆದರೆ, ನಿಮ್ಮ ಈ ಅಭ್ಯಾಸದಿಂದಾಗಿ ಆರೋಗ್ಯಕ್ಕೆ ಎಷ್ಟು ಅಪಾಯಕಾರಿ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? 

Written by - Yashaswini V | Last Updated : Mar 29, 2024, 04:27 PM IST
  • ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರ ಜೀವನದ ಭಾಗವಾಗಿರುವ ಪ್ಲಾಸ್ಟಿಕ್ ಬಾಟಲಿಗಳು ರಾಸಾಯನಿಕಗಳು ಮತ್ತು ಬ್ಯಾಕ್ಟೀರಿಯಾಗಳಿಂದ ತುಂಬಿವೆ
  • ಪ್ಲಾಸ್ಟಿಕ್ ಬಾಟಲಿಗಳಲ್ಲಿ ನೀರನ್ನು ಸಂಗ್ರಹಿಸಿದಾಗ ಅದು ದೇಹಕ್ಕೆ ವಿಷಕಾರಿಯಾದ ಫ್ಲೋರೈಡ್, ಆರ್ಸೆನಿಕ್ ಮತ್ತು ಅಲ್ಯೂಮಿನಿಯಂನಂತಹ ಹಾನಿಕಾರಕ ಪದಾರ್ಥಗಳನ್ನು ಉತ್ಪಾದಿಸುತ್ತದೆ.
  • ಪ್ಲಾಸ್ಟಿಕ್ ಬಾಟಲಿನಿಂದ ನೀರು ಕುಡಿಯುವರಿಂದ ಆರೋಗ್ಯದ ಮೇಲೆ ಏನೆಲ್ಲಾ ಅಡ್ಡಪರಿಣಾಮಗಳು ಉಂಟಾಗಬಹುದು ಎಂದು ತಿಳಿಯೋಣ...
ಪ್ಲಾಸ್ಟಿಕ್ ಬಾಟಲಿನಲ್ಲಿ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಹಾನಿಯಾಗುತ್ತೆ ಗೊತ್ತಾ!  title=

Water In Plastic Bottle: ಪ್ರಸ್ತುತ ಕಾಲಮಾನದಲ್ಲಿ ಹೆಚ್ಚಿನ ಜನರು ಪ್ಲಾಸ್ಟಿಕ್ ಬಾಟಲಿನಲ್ಲಿ ನೀರು ಕುಡಿಯುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಆದರೆ, ಪ್ಲಾಸ್ಟಿಕ್ ಬಾಟಲಿಗಳಿಂದ ನೀರು ಕುಡಿಯುವುದು ದೀರ್ಘಾವಧಿಯಲ್ಲಿ ಆರೋಗ್ಯಕ್ಕೆ ಅತ್ಯಂತ ಅಪಾಯಕಾರಿ ಎಂದು ಸಾಬೀತುಪಡಿಸಬಹುದು ಎಂದು ನಿಮಗೆ ತಿಳಿದಿದೆಯೇ? 

ಹೌದು, ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರ ಜೀವನದ ಭಾಗವಾಗಿರುವ ಪ್ಲಾಸ್ಟಿಕ್ ಬಾಟಲಿಗಳು ರಾಸಾಯನಿಕಗಳು ಮತ್ತು ಬ್ಯಾಕ್ಟೀರಿಯಾಗಳಿಂದ ತುಂಬಿದ್ದು, ಪ್ಲಾಸ್ಟಿಕ್ ಬಾಟಲಿಗಳಲ್ಲಿ ನೀರನ್ನು ಸಂಗ್ರಹಿಸಿದಾಗ ಅದು ದೇಹಕ್ಕೆ ವಿಷಕಾರಿಯಾದ ಫ್ಲೋರೈಡ್, ಆರ್ಸೆನಿಕ್ ಮತ್ತು ಅಲ್ಯೂಮಿನಿಯಂನಂತಹ ಹಾನಿಕಾರಕ ಪದಾರ್ಥಗಳನ್ನು ಉತ್ಪಾದಿಸುತ್ತದೆ. ಹಾಗಾಗಿ ಪ್ಲಾಸ್ಟಿಕ್ ಬಾಟಲಿನಲ್ಲಿ ನೀರು ಕುಡಿಯುವುದರಿಂದ ಇದು ಆರೋಗ್ಯಕ್ಕೆ ಹಾನಿಕಾರಕ ಎಂದು ಸಾಬೀತುಪಡಿಸಬಹುದು.  ಹಾಗಿದ್ದರೆ, ಪ್ಲಾಸ್ಟಿಕ್ ಬಾಟಲಿನಿಂದ ನೀರು ಕುಡಿಯುವರಿಂದ ಆರೋಗ್ಯದ ಮೇಲೆ ಏನೆಲ್ಲಾ ಅಡ್ಡಪರಿಣಾಮಗಳು ಉಂಟಾಗಬಹುದು ಎಂದು ನೋಡುವುದಾದರೆ... 

ಪ್ಲಾಸ್ಟಿಕ್ ಬಾಟಲಿನಲ್ಲಿ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಹಾನಿಯಾಗುತ್ತೆ : 
ಕ್ಯಾನ್ಸರ್ ಅಪಾಯ:

ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದಾಗಿ ದೇಹವು ಅದರಲ್ಲಿರುವ ರಾಸಾಯನಿಕಗಳೊಂದಿಗೆ ನೇರ ಸಂಪರ್ಕಕ್ಕೆ ಬರುತ್ತದೆ. ಇದರಿಂದಾಗಿ ದೇಹವು ಅನೇಕ ರೋಗಗಳ ಉಗ್ರಾಣವಾಗಬಹುದು. ಪ್ಲಾಸ್ಟಿಕ್‌ನಲ್ಲಿರುವ ಸೀಸ, ಕ್ಯಾಡ್ಮಿಯಮ್ ಮತ್ತು ಪಾದರಸದಂತಹ ರಾಸಾಯನಿಕಗಳು ದೇಹದಲ್ಲಿ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸಬಹುದು. 

ಇದನ್ನೂ ಓದಿ- ನಿಮಗೆ ಹಸಿವೇ ಆಗುತ್ತಿಲ್ಲವೇ? ಹಸಿವಿನ ಕೊರತೆ ನೀಗಿಸಲು ಸಿಂಪಲ್ ಮನೆಮದ್ದುಗಳಿವು!

ಪ್ರತಿರಕ್ಷಣಾ ವ್ಯವಸ್ಥೆ ಮೇಲೆ ಪರಿಣಾಮ: 
ಪ್ಲಾಸ್ಟಿಕ್ ಬಾಟಲಿಗಳಲ್ಲಿ ನೀರು ಕುಡಿಯುವುದರಿಂದ ಪ್ಲಾಸ್ಟಿಕ್ ಬಾಟಲಿಗಳಿಂದ ಬಿಡುಗಡೆಯಾಗುವ ರಾಸಾಯನಿಕಗಳು ನಮ್ಮ ದೇಹವನ್ನು ಪ್ರವೇಶಿಸುತ್ತವೆ.  ಇದು ನಮ್ಮ ಪ್ರತಿರಕ್ಷಣಾ ವ್ಯವಸ್ಥೆಯ ಮೇಲೆ ನಕಾರಾತ್ಮಕ ಪರಿಣಾಮವನ್ನು ಉಂಟು ಮಾಡುತ್ತದೆ. 

ಪಿತ್ತಜನಕಾಂಗದ ಕ್ಯಾನ್ಸರ್: 
ಪ್ಲಾಸ್ಟಿಕ್ ಬಾಟಲಿನಲ್ಲಿ ಥಾಲೇಟ್‌ಗಳು ಎಂಬ ರಾಸಾಯನಿಕಗಳ ಉಪಸ್ಥಿತಿಯಿಂದಾಗಿ ಇದರಲ್ಲಿ ನೀರು ಕುಡಿಯುವುದರಿಂದ ಇದು ಪಿತ್ತಜನಕಾಂಗದ ಕ್ಯಾನ್ಸರ್ ಅಪಾಯವನ್ನು ಕೂಡ ಹೆಚ್ಚಿಸುತ್ತದೆ. 

ಇದನ್ನೂ ಓದಿ- Apple Juice Benefits: ನಿತ್ಯ ಆಪಲ್ ಜ್ಯೂಸ್ ಕುಡಿಯುವುದರಿಂದ ತೂಕ ಇಳಿಕೆ ಸೇರಿದಂತೆ ಸಿಗುತ್ತೆ ಈ ಎಲ್ಲಾ ಲಾಭ

ಅಂಡಾಶಯಡ ಕ್ಯಾನ್ಸರ್: 
ಪ್ಲಾಸ್ಟಿಕ್ ಬಾಟಲಿನಲ್ಲಿ ನೀರು ಕುಡಿಯುವುದರಿಂದ ಪ್ಲಾಸ್ಟಿಕ್‌ನಲ್ಲಿರುವ ರಾಸಾಯನಿಕಗಳಿಂದಾಗಿ ಮಹಿಳೆಯರಲ್ಲಿ ಅಂಡಾಶಯಕ್ಕೆ ಸಂಬಂಧಿಸಿದ ಕಾಯಿಲೆಗಳ ಅಪಾಯ ಹೆಚ್ಚಾಗಬಹುದು. 

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News