BJP Candidate Jagdish Shettar Campaign: ಬುಧವಾರದಿಂದ ಬೆಳಗಾವಿಗೆ ತೆರಳಿ ಪ್ರಚಾರ ಪ್ರಾರಂಭಿಸುತ್ತೇನೆ ಎಂದು ಭಾರತೀಯ ಜನತಾ ಪಕ್ಷದ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿದರು.
ಹುಬ್ಬಳ್ಳಿ ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್, ಈಗಾಗಲೇ ಬೆಳಗಾವಿ ನಾಯಕರ ಜೊತೆಗೆ ಮಾತನಾಡಲಾಗಿದ್ದು ಅಧಿಕೃತವಾಗಿ ಬುಧವಾರದಿಂದ (ಮಾರ್ಚ್ 27) ಬೆಳಗಾವಿಗೆ ತೆರಳಿ ಪ್ರಚಾರ ಪ್ರಾರಂಭಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ಮಾಡಬೇಕು ಅನ್ನೋದು ಎಲ್ಲರ ಇಚ್ಛೇ ಆಗಿದೆ. ಬೆಳಗಾವಿಯ ಎಲ್ಲಾ ನಾಯಕರ ಜೊತೆ ಮಾತಾಡಿದ್ದೇನೆ. ಎಲ್ಲರೂ ಒಟ್ಟಾಗಿ ಚುನಾವಣೆ ಮಾಡೋಣ ಅಂದಿದ್ದಾರೆ. ಹೋಳಿ ಹಬ್ಬದ ಕಾರಣ ಈಗ ಹೋಗಲ್ಲ. ಬುಧವಾರದಿಂದ ಬೆಳಗಾವಿಗೆ ತೆರಳಿ ಪ್ರಚಾರ ಪ್ರಾರಂಭಿಸುತ್ತೇನೆ ಎಂದವರು ತಿಳಿಸಿದರು.
ಇದನ್ನೂ ಓದಿ- Lok Sabha Election 2024: "ಬಿಜೆಪಿಯವರು ದೇಶದಲ್ಲಿ ಧರ್ಮ, ದೇವರ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದಾರೆ"
ನಾನು (ಜಗದೀಶ್ ಶೆಟ್ಟರ್) ಬೆಳಗಾವಿ ಭಾಗದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ಅಭ್ಯರ್ಥಿ ಯುವಕ ಅನ್ನೋ ಕಾರಣಕ್ಕೆ ನೆಗ್ಲೆಕ್ಟ್ ಮಾಡಲ್ಲ. ಈ ಚುನಾವಣೆಯಲ್ಲಿ ಜಾತಿ ಫ್ಯಾಕ್ಟರ್ ಕೆಲಸ ಮಾಡಲ್ಲ. ಎಲ್ಲಾ ವರ್ಗಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಾನು ಗೆದ್ದು ಬರುತ್ತೇನೆ. ಈ ಚುನಾವಣೆಯನ್ನು ನಾನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದೇನೆ ಎಂದರು.
ಈ ವೇಳೆ ಹುಬ್ಬಳ್ಳಿ ನನ್ನ ಜನ್ಮಭೂಮಿ, ಬೆಳಗಾವಿ ನನ್ನ ಕರ್ಮಭೂಮಿ ಬೆಳಗಾವಿಯನ್ನು ಕರ್ಮಭೂಮಿಯಾಗಿ ತೆಗೆದುಕೊಳ್ಳುತ್ತೇನೆ ಎಂದು ಉಲ್ಲೇಖಿಸಿದ ಜಗದೀಶ್ ಶೆಟ್ಟರ್, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸುತ್ತೇನೆ. ಸಂಸದೆ
ಮಂಗಳಾ ಅಂಗಡಿ ಸೇರಿದಂತೆ ಕುಟುಂಬಸ್ಥರು ತುಂಬಾ ಸಂತೋಷ ವ್ಯಕ್ತಪಡಿಸಿದ್ದಾರೆ. ಮಂಗಳಾ ಅಂಗಡಿಯವರ ಕುಟುಂಬ ನನ್ನ ಪರ ಪ್ರಚಾರ ಮಾಡುತ್ತಾರೆ. ಇನ್ನು ರಮೇಶ್ ಜಾರಕಿಹೋಳಿಯವರು ನಿರಂತರ ಸಂಪರ್ಕದಲ್ಲಿದ್ದು ನಮಗೆ ಬೆಂಬಲ ಕೊಡುತ್ತಾರೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ- Lok Sabha Election 2024: 629.94 ಲೀ. ಮದ್ಯ, ರೂ.26 ಲಕ್ಷ ನಗದು, ಗಾಂಜಾ ವಶ
ಬಿಜೆಪಿಗೆ ಜನಾರ್ಧನ ರೆಡ್ಡಿ ಸೇರ್ಪಡೆಗೆ ಸಂಬಂಧಿಸಿದಂತೆ ಮಾಧ್ಯಮ ಮಿತ್ರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್, ಜನಾರ್ಧನ ರೆಡ್ಡಿ ಈ ಹಿಂದೆ ಬಿಜೆಪಿ ಸಂಘಟನೆಗೆ ಸಾಕಷ್ಟು ಕೆಲಸ ಮಾಡಿದ್ದಾರೆ. ಜೆಪಿಗೆ ಅಸ್ತಿತ್ವವೇ ಇಲ್ಲದಾಗ ಸಂಘಟನೆ ಮಾಡಿದ್ದಾರೆ. ಜನಾರ್ಧನ ರೆಡ್ಡಿಯವರ ಹಾಗೆ ಸಾಕಷ್ಟು ಜನರು ಬಿಜೆಪಿಗೆ ಬರ್ತಾರೆ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.