ಶಾಲಾ ವಿದ್ಯಾರ್ಥಿಗಳ ಮೇಲೆ ಹರಿದ ಕಾರು; 9 ಸಾವು

ಬಿಹಾರದ ಮುಜಾಫರ್ಪುರ್'ನ ಅಹ್ಯಪುರ್ ನಲ್ಲಿ ಮಧ್ಯಾಹ್ನ 1.30ರ ಸಮಯದಲ್ಲಿ ಈ ಘಟನೆ ನಡೆದಿದೆ. 

Last Updated : Feb 24, 2018, 04:51 PM IST
ಶಾಲಾ ವಿದ್ಯಾರ್ಥಿಗಳ ಮೇಲೆ ಹರಿದ ಕಾರು; 9 ಸಾವು title=

ಮುಜಾಫರ್ಪುರ್: ಶಾಲೆ ಮುಗಿಸಿಕೊಂಡು ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಮೇಲೆ ಅತಿ ವೇಗವಾಗಿ ಬಂದ SUV ಕಾರೊಂದು ಹರಿದ ಪರಿಣಾಮ ಸ್ಥಳದಲ್ಲೇ ಒಂಬತ್ತು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಧಾರುಣ ಘಟನೆ ರಾಷ್ಟ್ರೀಯ ಹೆದಾರಿ 77ರಲ್ಲಿ ನಡೆದಿದೆ. 

ಬಿಹಾರದ ಮುಜಾಫರ್ಪುರ್'ನ ಅಹ್ಯಪುರ್ ನಲ್ಲಿ ಮಧ್ಯಾಹ್ನ 1.30ರ ಸಮಯದಲ್ಲಿ ಈ ಘಟನೆ ನಡೆದಿದೆ. ರಕ್ತಸಿಕ್ತವಾದ ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, 24ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. 

ಗಾಯಗೊಂಡ ವಿದ್ಯಾರ್ಥಿಗಳನ್ನು ಶ್ರೀ ಕೃಷ್ಣ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಹಾಗೆಯೇ ಮುಜಾಫರ್ಪುರ್ ದಿಂದ 80 ಕಿ.ಮೀ. ದೂರವಿರುವ ಪಾಟ್ನಾದ ಆಸ್ಪತ್ರೆಗಳಿಗೂ ಹೆಚ್ಚುವರಿ ಸೇವೆಗಾಗಿ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಸಿದ್ಧವಾಗಿರುವಂತೆ ತಿಳಿಸಲಾಗಿದೆ ಎಂದು ಮುಜಾಫರ್ಪುರ್ ಪೂರ್ವ ವಿಭಾಗದ ಉಪ ಪೋಲಿಸ್ ಅಧೀಕ್ಷಕ ಗೌರವ್ ಪಾಂಡೆ ತಿಳಿಸಿದ್ದಾರೆ. 

ಏತನ್ಮಧ್ಯೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 4 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ. 

ಕೃಷ್ಣ ಆಸ್ಪತ್ರೆಯಲ್ಲಿ ಗಾಯಗಳ ನೋವನ್ನು ತಡೆಯಲಾಗದೆ ವಿದ್ಯಾರ್ಥಿಗಳು ಅಳುತ್ತಿರುವ ದೃಶ್ಯ ಒಂದೆಡೆಯಾದರೆ, ಮತ್ತೊಂದೆಡೆ ತಮ್ಮ ಮಕ್ಕಳ ಪರಿಸ್ಥಿತಿ ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Trending News