ಸಂಸತ್ ಸಮಿತಿ ಮುಂದೆ ಹಾಜರಾಗಲು ನಿರಾಕರಿಸಿದ ಟ್ವಿಟ್ಟರ್ ಸಿಇಓ-ಮೂಲಗಳು

ಟ್ವಿಟ್ಟರ್ ಸಿಇಓ ಹಾಗೂ ಇತರ ಕಂಪನಿಯ ಉನ್ನತ ಅಧಿಕಾರಿಗಳು ಮಾಹಿತಿ ತಂತ್ರಜ್ಞಾನಕ್ಕೆ ಸಂಬಂಧಿಸಿದ ಸಂಸತ್ ಸಮಿತಿ ಮುಂದೆ ಹಾಜರಾಗಲು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Last Updated : Feb 9, 2019, 04:53 PM IST
ಸಂಸತ್ ಸಮಿತಿ ಮುಂದೆ ಹಾಜರಾಗಲು ನಿರಾಕರಿಸಿದ ಟ್ವಿಟ್ಟರ್ ಸಿಇಓ-ಮೂಲಗಳು title=
Photo courtesy: Reuters

ನವದೆಹಲಿ: ಟ್ವಿಟ್ಟರ್ ಸಿಇಓ ಜಾಕ್ ಡೋರ್ಸೆ ಹಾಗೂ ಇತರ ಕಂಪನಿಯ ಉನ್ನತ ಅಧಿಕಾರಿಗಳು ಮಾಹಿತಿ ತಂತ್ರಜ್ಞಾನಕ್ಕೆ ಸಂಬಂಧಿಸಿದ ಸಂಸತ್ ಸಮಿತಿ ಮುಂದೆ ಹಾಜರಾಗಲು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿಗೆ ಸೋಶಿಯಲ್ ಮಿಡಿಯಾ ವೇದಿಕೆಗಳಲ್ಲಿ ನಾಗರಿಕರ ಹಕ್ಕು ರಕ್ಷಣೆ ವಿಚಾರವಾಗಿ ಸಂಸದ ಅನುರಾಗ್ ಠಾಕೂರ್ ನೇತೃತ್ವದ ಸಂಸದೀಯ ಸಮಿತಿ ಟ್ವಿಟ್ಟರ್ ಗೆ ಸಮನ್ಸ್ ಜಾರಿ ಮಾಡಿತ್ತು. ಫೆಬ್ರುವರಿ 1ರಂದು ಬರೆದ ಈ ಅಧಿಕೃತ ಪತ್ರದ ಅನ್ವಯ ಫೆ.7ರಂದು ಮೀಟಿಂಗ್ ನಿಗಧಿಪಡಿಸಲಾಗಿತ್ತು, ಅದು ಸಾಧ್ಯವಾಗದೆ ಟ್ವಿಟ್ಟರ್ ಸಿಇಓ ಜಾಕ್ ಡೋರ್ಸೆ ಮತ್ತು ಇತರ ಅಧಿಕಾರಿಗಳಿಗೆ ಹಾಜರಾಗಲು ಫೆ.11ಕ್ಕೆ ಸಭೆಯನ್ನು ನಿಗಧಿಪಡಿಸಲಾಗಿದೆ.ಆದರೆ ಈಗ 10 ದಿನಗಳ ಕಾಲಾವಕಾಶವನ್ನು ನೀಡಿದರೂ ಸಹಿತ ಸಮಿತಿ ಮುಂದೆ ಹಾಜರಾಗಲು ಟ್ವಿಟ್ಟರ್ ನಿರಾಕರಿಸಿದೆ ಎಂದು ಮೂಲಗಳು ತಿಳಿಸಿವೆ.

ಸಾಮಾಜಿಕ ಮಾಧ್ಯಮಗಳಲ್ಲಿ ಜನರ ಖಾಸಗಿ ಡಾಟಾ ಹಾಗೂ ಚುನಾವಣಾ ಮಧ್ಯಸ್ಥಿಕೆ ವಿಚಾರವಾಗಿ ಸಾರ್ವಜನಿಕವಾಗಿ ಕಳವಳ ಹೆಚ್ಚಿದ ಕಾರಣ ಸಂಸತ್ ಈ ವಿಚಾರವಾಗಿ ಸೋಶಿಯಲ್ ಮೀಡಿಯಾದ ಪ್ರಮುಖ ಕಂಪನಿಗಳ ಜೊತೆ ಸಭೆ ನಡೆಸಿ ಮುಂದಿನ ತೀರ್ಮಾನಕ್ಕೆ ಬರಲು ಸಂಸತ್ ನಿರ್ಧರಿಸಿದೆ ಎನ್ನಲಾಗಿದೆ.

Trending News