ಮುಂಬೈ: ಭಾನುವಾರ ರಾತ್ರಿ ಮುಂಬೈನ ಧರವಿಯಲ್ಲಿರುವ ಪಿಎಂಜಿಪಿ ಕಾಲೋನಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ.
ಗುತ್ತಿಗೆದಾರರ ಉದಾಸೀನತೆಯಿಂದಾಗಿ ಈ ದುರಂತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ.
ಎಎನ್ಐ ಜೊತೆಗೆ ಮಾತನಾಡಿದ ಪಿಎಂಜಿಪಿ ಕಾಲೋನಿ ನಿವಾಸಿ, "ರಾತ್ರಿ ಸುಮಾರು 10:30ರ ವೇಳೆಗೆ ನಿರ್ಮಾಣ ಹಂತದ ಕಟ್ಟಡದಿಂದ ಪೈಪ್ ಒಂದು ಕೆಳಗೆ ಬಿದ್ದಿತು. ಈ ಸಂದರ್ಭದಲ್ಲಿ ಆಟೋ ಚಾಲಕನೊಬ್ಬ ಮೃತಪಟ್ಟಿದ್ದಾರೆ. ಬೈಕ್ ಚಾಲನೆ ಮಾಡುತ್ತಿದ್ದ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದರು. ನಾವು ಅವರನ್ನು ಆಸ್ಪತ್ರೆಗೆ ಕರೆದೊಯ್ದೆವು" ಎಂದು ತಿಳಿಸಿದ್ದಾರೆ.