ತೆಲಂಗಾಣ: ಶಾಲೆಯಲ್ಲಿ ಊಟ ಮಾಡಿದ ಬಳಿಕ ಸುಮಾರು 10 ಮಕ್ಕಳು ಅಸ್ವಸ್ಥರಾಗಿರುವ ಘಟನೆ ತೆಲಂಗಾಣದ ಭದ್ರಾದ್ರಿ ಕೊಥಗುಡೆಮ್ ಎಂಬಲ್ಲಿ ನಡೆದಿದೆ ಎಂದು ಸುದ್ದಿಸಂಸ್ಥೆ ಎಎನ್ಐ ವರದಿ ಮಾಡಿದೆ.
ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದ 8-10 ನೇ ತರಗತಿಯ ಸುಮಾರು 10 ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಊಟ ಸೇವಿಸಿದ ಬಳಿಕ ವಾಂತಿ ಮತ್ತು ಬೇದಿ ಆಗಿದೆ. ತಕ್ಷಣ ಅವರನ್ನು ಪಲೊಂಚದಕಮ್ಯೂನಿಟಿ ಹೆಲ್ತ್ ಸೆಂಟರ್ ಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಸ್ವಸ್ಥಗೊಂಡ ಎಲ್ಲಾ ಮಕ್ಕಳಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಗೆ ಕಾರಣ ಏನು ಎಂಬುದು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಶಾಲಾ ಆಡಳಿತ ವರ್ಗದವರನ್ನು ಈ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.