ಬಿಜೆಪಿ ವಿರುದ್ಧ ಕಾಂಗ್ರೆಸ್ ಸೇರಿ 11 ವಿಪಕ್ಷಗಳಿಂದ ಮಾಸ್ಟರ್ ಪ್ಲಾನ್! ಏನು ಗೊತ್ತಾ?

ಕಾಂಗ್ರೆಸ್ ಪಕ್ಷವು 10 ವಿರೋಧ ಪಕ್ಷಗಳೊಂದಿಗೆ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಸಿದ್ಧತೆ ನಡೆಸಿದೆ. ಕೇಂದ್ರ ಸರ್ಕಾರ ಇವಿಎಂ, ಹಣಬಲ ಮತ್ತು ಮಾಧ್ಯಮಗಳ ದುರ್ಬಳಕೆ ಮಾಡುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದೆ.

Written by - Puttaraj K Alur | Last Updated : Aug 14, 2022, 06:42 AM IST
  • ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಹೋರಾಡಲು ಮಾಸ್ಟರ್ ಪ್ಲಾನ್
  • ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿರುವ 10 ವಿರೋಧ ಪಕ್ಷಗಳ ನಾಯಕರು
  • ಇವಿಎಂ, ಹಣಬಲ & ತೋಳ್ಬಲ ಹಾಗೂ ತನಿಖಾ ಸಂಸ್ಥೆಗಳ ದುರ್ಬಳಕೆ ವಿರುದ್ಧ ಹೋರಾಟ
ಬಿಜೆಪಿ ವಿರುದ್ಧ ಕಾಂಗ್ರೆಸ್ ಸೇರಿ 11 ವಿಪಕ್ಷಗಳಿಂದ ಮಾಸ್ಟರ್ ಪ್ಲಾನ್! ಏನು ಗೊತ್ತಾ?  title=
ಕೇಂದ್ರದ ವಿರುದ್ಧ ಹೋರಾಡಲು ಮಾಸ್ಟರ್ ಪ್ಲಾನ್!

ನವದೆಹಲಿ: ಬಿಜೆಪಿ ಮತ್ತು ಕೇಂದ್ರ ಸರ್ಕಾರವನ್ನು ಮತ್ತೆ ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಈ ಹಿನ್ನೆಲೆ ಕಾಂಗ್ರೆಸ್ 10 ವಿರೋಧ ಪಕ್ಷಗಳ ಬೆಂಬಲವನ್ನು ಪಡೆಯುತ್ತಿದೆ. ಈ ಹಿಂದೆ ದೇಶದಲ್ಲಿ ನಡೆದ ಪ್ರಮುಖ ಬೆಳವಣಿಗೆಗಳಲ್ಲಿ ಕೇಂದ್ರೀಯ ಸಂಸ್ಥೆ ಜಾರಿ ನಿರ್ದೇಶನಾಲಯದ ಕ್ರಮದ ಬಗ್ಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಅಂದಿನಿಂದ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿವೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಹೋರಾಟ ಮುಂದುವರಿಸುವುದಾಗಿ ಕಾಂಗ್ರೆಸ್ ಮತ್ತು 10 ವಿಪಕ್ಷಗಳ ನಾಯಕರು ಹೇಳಿದ್ದಾರೆ. ವಿದ್ಯುನ್ಮಾನ ಮತಯಂತ್ರಗಳ (EVM), ಹಣಬಲ ಮತ್ತು ಮಾಧ್ಯಮಗಳ ದುರ್ಬಳಕೆ ವಿರುದ್ಧ ಕೇಂದ್ರದ ಹೋರಾಟ ನಡೆಯಲಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್‌ಗೆ ಈ ರಾಜಕೀಯ ಪಕ್ಷಗಳ ಬೆಂಬಲ ಸಿಕ್ಕಿದೆ

ಕಾಂಗ್ರೆಸ್ ಪಕ್ಷಕ್ಕೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಮಾರ್ಕ್ಸ್‌ವಾದಿ, ಬಹುಜನ ಸಮಾಜ ಪಕ್ಷ, ಸಮಾಜವಾದಿ ಪಕ್ಷ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ರಾಷ್ಟ್ರೀಯ ಜನತಾ ದಳ, ತೆಲಂಗಾಣ ರಾಷ್ಟ್ರ ಸಮಿತಿ, ರಾಷ್ಟ್ರೀಯ ಲೋಕದಳ, ವೆಲ್ಫೇರ್ ಪಾರ್ಟಿ ಮತ್ತು ಸ್ವರಾಜ್ ಇಂಡಿಯಾ ನಾಯಕರು ಬೆಂಬಲ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡುವುದಾಗಿ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಉದ್ಘಾಟನೆ

ಇವಿಎಂಗಳ ವಿರುದ್ಧ ಅಸಮಾಧಾನ

ಈ ಪಕ್ಷಗಳ ಸಮಾವೇಶದಲ್ಲಿ 3 ನಿರ್ಣಯಗಳನ್ನು ಅಂಗೀಕರಿಸಲಾಯಿತು. ಮೊದಲ ಪ್ರಸ್ತಾಪವು ಇವಿಎಂಗಳು ಮತ್ತು ‘ವಿವಿಪ್ಯಾಟ್’ (Voter Verifiable Paper Audit Trail) ಬಗ್ಗೆ ಆಗಿತ್ತು. ಇವಿಎಂಗಳಿಗೆ ಸಂಬಂಧಿಸಿದಂತೆ ಅವುಗಳನ್ನು ಟ್ಯಾಂಪರಿಂಗ್ ಮಾಡಲು ಸಾಧ್ಯವಿಲ್ಲವೆಂದು ನಿರ್ಣಯಿಸಲು ಸಾಧ್ಯವಿಲ್ಲವೆಂದು ಈ ಪಕ್ಷಗಳು ಹೇಳಿಕೊಂಡಿವೆ. ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಇವಿಎಂಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ಆರೋಪಿಸಲಾಗಿದೆ.

ಹಣಬಲ ಮತ್ತು ತೋಳ್ಬಲದ ಆರೋಪ

2ನೇ ನಿರ್ಣಯದಲ್ಲಿ ಹಣಬಲ ಮತ್ತು ತೋಳ್ಬಲವನ್ನು ಚುನಾವಣೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಬಳಸಲಾಗುತ್ತಿದ್ದು, ಇದರಿಂದ ಚುನಾವಣೆಯ ಪಾವಿತ್ರ್ಯತೆ ನಾಶವಾಗುತ್ತಿದೆ ಎಂದು ಹೇಳಲಾಗಿದೆ. ರಾಜಕೀಯ ದೇಣಿಗೆಗಾಗಿ ಎಲೆಕ್ಟೋರಲ್ ಬಾಂಡ್ ವ್ಯವಸ್ಥೆ ರದ್ದುಪಡಿಸಬೇಕೆಂಬ ಆಗ್ರಹ ಇದೇ ವೇಳೆ ಕೇಳಿಬಂದಿದೆ.

ಇದನ್ನೂ ಓದಿ: Mukhtar Abbas Naqvi : 'ಪ್ರತಿಪಕ್ಷಗಳಲ್ಲಿ ಪ್ರಧಾನಿ ಹುದ್ದೆಗೆ ಎರಡು ಡಜನ್ ಅಭ್ಯರ್ಥಿಗಳಿದ್ದಾರೆ'

ತನಿಖಾ ಸಂಸ್ಥೆಗಳ ದುರ್ಬಳಕೆ ಆರೋಪ

ಮಾಧ್ಯಮ ಮತ್ತು ಸಂವಹನ ತಂತ್ರಜ್ಞಾನದ ಮೂಲಕ ಧ್ರುವೀಕರಣವನ್ನು ಮಾಡಲಾಗುತ್ತಿದೆ ಎಂದು ವಿರೋಧ ಪಕ್ಷಗಳು 3ನೇ ನಿರ್ಣಯದಲ್ಲಿ ಹೇಳಿಕೊಂಡಿವೆ. ಆನ್‌ಲೈನ್ ನಕಲಿ ಸುದ್ದಿಗಳನ್ನು ತಡೆಯುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ ಎಂದು ಆರೋಪಿಸಲಾಗಿದೆ. ಕೇಂದ್ರ ಸರಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಈ ಪಕ್ಷಗಳು ಆರೋಪಿಸಿವೆ. ಹೀಗಾಗಿ ಈ ಎಲ್ಲಾ ವಿಷಯಗಳ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಜೊತೆಗೆ ಸೇರಿ ಹೋರಾಟ ನಡೆಸುವುದಾಗಿ ಈ ಎಲ್ಲಾ ವಿಪಕ್ಷಗಳ ನಾಯಕರು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News