Vaishno Devi Temple: ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತ, 12 ಭಕ್ತರ ಸಾವು

ಜಮ್ಮು-ಕಾಶ್ಮೀರದಲ್ಲಿರುವ ತ್ರಿಕೂಟ ಬೆಟ್ಟಗಳಲ್ಲಿರುವ ಮಾತಾ ವೈಷ್ಣೋದೇವಿ ಮಂದಿರದಲ್ಲಿ(Mata Vaishno Devi)ಈ ಅವಘಡ ಸಂಭವಿಸಿದೆ.

Written by - Zee Kannada News Desk | Last Updated : Jan 1, 2022, 08:23 AM IST
  • ಮಾತಾ ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತಕ್ಕೆ 12 ಭಕ್ತರು ಬಲಿ, 20ಕ್ಕೂ ಹೆಚ್ಚು ಜನರಿಗೆ ಗಾಯ
  • ಜಮ್ಮು & ಕಾಶ್ಮೀರದ ರಿಯಾಸಿ ಜಿಲ್ಲೆಯ ಕತ್ರಾದಲ್ಲಿರುವ ಮಾತಾ ವೈಷ್ಣೋದೇವಿ ಮಂದಿರ
  • ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ
Vaishno Devi Temple: ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತ, 12 ಭಕ್ತರ ಸಾವು title=
ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತ

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಕತ್ರಾ(Katra in Jammu and Kashmir)ದಲ್ಲಿರುವ ಮಾತಾ ವೈಷ್ಣೋದೇವಿ(Mata Vaishno Devi) ದೇಗುಲದಲ್ಲಿ ಶನಿವಾರ ಮುಂಜಾನೆ ಕಾಲ್ತುಳಿತ ಸಂಭವಿಸಿದ್ದು, 12 ಭಕ್ತರು ಮೃತಪಟ್ಟಿದ್ದಾರೆಂದು ANI ಸುದ್ದಿಸಂಸ್ಥೆ ವರದಿ ಮಾಡಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದು, ಸ್ಥಳೀಯ ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ(Hospital) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಸ ವರ್ಷಾಚಣೆಗೆಂದು ಭಕ್ತರು ಭಾರೀ ಸಂಖ್ಯೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಜಮಾವಣೆಗೊಂಡಿದ್ದರು. ಮಧ್ಯರಾತ್ರಿ ದಾಟುತ್ತಿದ್ದಂತೆ ಜನ ವಿಪರೀತ ಸಂಖ್ಯೆಯಲ್ಲಿ ಮಂದಿರದತ್ತ ನುಗ್ಗಿ ಬಂದಾಗ ಈ ಕಾಲ್ತುಳಿತದ ದುರ್ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಕಾಲ್ತುಳಿತದಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರುವ ಸಂಭವವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಓಮಿಕ್ರಾನ್ ಭೀತಿ: ಹೊಸ ನಿರ್ಬಂಧಗಳನ್ನು ಘೋಷಿಸಿದ ತಮಿಳುನಾಡು

ಜಮ್ಮು-ಕಾಶ್ಮೀರದಲ್ಲಿರುವ ತ್ರಿಕೂಟ ಬೆಟ್ಟಗಳಲ್ಲಿರುವ ಮಾತಾ ವೈಷ್ಣೋದೇವಿ ಮಂದಿರದಲ್ಲಿ(Mata Vaishno Devi)ಈ ಅವಘಡ ಸಂಭವಿಸಿದೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಸಮುದಾಯ ಆರೋಗ್ಯ ಕೇಂದ್ರದ ಬ್ಲಾಕ್ ವೈದ್ಯಕೀಯ ಅಧಿಕಾರಿ ಡಾ.ಗೋಪಾಲ್ ದತ್, ‘ದೆಹಲಿ, ಹರಿಯಾಣ, ಪಂಜಾಬ್ ಮತ್ತು ಜಮ್ಮು & ಕಾಶ್ಮೀರಕ್ಕೆ ಸೇರಿದ ಭಕ್ತರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ ಗಾಯಾಳುಗಳನ್ನು ನರೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಜನರನ್ನು ಸ್ಥಳಾಂತರಿಸಲು ಪೊಲೀಸರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ

ಜಮ್ಮು-ಕಾಶ್ಮೀರ ಸರ್ಕಾರವು ವೈಷ್ಣೋದೇವಿ ದೇವಾಲಯ(Mata Vaishno Devi Temple)ದಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ. ಇದರ ಜೊತೆಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ತಲಾ 2 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಗಾಯಾಳುಗಳಿಗೆ ಜಮ್ಮು-ಕಾಶ್ಮೀರ ಸರ್ಕಾರದಿಂದ 2 ಲಕ್ಷ ರೂ. ಮತ್ತು PMNRFನಿಂದ 50 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ.

ಇದನ್ನೂ ಓದಿಇಂದು ರೈತರಿಗೆ ಪ್ರಧಾನಿ ಮೋದಿಯಿಂದ ಹೊಸ ವರ್ಷದ ಪ್ರಯುಕ್ತ ಗಿಫ್ಟ್ ಘೋಷಣೆ

ಪ್ರಧಾನಿ ಮೋದಿ ಸಂತಾಪ

ಇನ್ನು ಘಟನೆಯ ಬಗ್ಗೆ ಪ್ರಧಾನಿ ಮೋದಿ(Narendra Modi) ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ‘ಜಮ್ಮು-ಕಾಶ್ಮೀರದ ವೈಷ್ಣೋದೇವಿ ದೇಗುಲದಲ್ಲಿ ಕಾಲ್ತುಳಿತದಲ್ಲಿ ಭಕ್ತರ ಸಾವಿನ ಸುದ್ದಿ ಕೇಳಿ ಅತೀವ ದುಃಖವಾಗಿದೆ’ ಎಂದು ಟ್ವೀಟ್ ಮಾಡಿದ್ದು ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಅಂತಾ ಪ್ರಾರ್ಥಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News