Jalpaiguri : ರಸ್ತೆ ಅಪಘಾತದಲ್ಲಿ 13 ಮಂದಿ ಮೃತ, 18 ಜನರಿಗೆ ಗಂಭೀರ ಗಾಯ

ಜಲ್ಪೈಗುರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದ ಪ್ರತ್ಯಕ್ಷದರ್ಶಿಗಳ ಪ್ರಕಾರ, ಟ್ರಕ್ ಚಾಲಕನು ಮುಂದೆ ಚಲಿಸುತ್ತಿದ್ದ ಟ್ರಕ್ ಅನ್ನು ಹಿಂದಿಕ್ಕಲು ಪ್ರಯತ್ನಿಸಿದನು. ಅದೇ ಸಮಯದಲ್ಲಿ ತಪ್ಪಾದ ದಿಕ್ಕಿನಿಂದ ಬರುತ್ತಿದ್ದ ಅತಿ ವೇಗದ ವಾಹನಗಳು ಡಿಕ್ಕಿ ಹೊಡೆದವು. ಏಕಕಾಲದಲ್ಲಿ ಹಲವಾರು ವಾಹನಗಳು ಡಿಕ್ಕಿ ಹೊಡೆದು ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗಿದೆ.

Written by - Zee Kannada News Desk | Last Updated : Jan 20, 2021, 11:05 AM IST
  • ಪಶ್ಚಿಮ ಬಂಗಾಳದಲ್ಲಿ ರಸ್ತೆ ಅಪಘಾತ
  • ಹಲವಾರು ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ಮೃತ
  • ದಟ್ಟವಾದ ಮಂಜಿನಿಂದ ಅಪಘಾತ ಸಂಭವಿಸಿರುವ ಸಾಧ್ಯತೆ
Jalpaiguri : ರಸ್ತೆ ಅಪಘಾತದಲ್ಲಿ 13 ಮಂದಿ ಮೃತ, 18 ಜನರಿಗೆ ಗಂಭೀರ ಗಾಯ title=
West Bengal Accident

ಜಲ್ಪೈಗುರಿ : ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಡಿಮೆ ಗೋಚರತೆಯೇ ಈ ಅಪಘಾತಕ್ಕೆ ಪ್ರಮುಖ ಕಾರಣವೆಂದು ಪರಿಗಣಿಸಲಾಗುತ್ತಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಓವರ್‌ಲೋಡ್ ಆಗಿದ್ದ ಟ್ರಕ್, ಕಾರು ಮತ್ತು ಮ್ಯಾಜಿಕ್ ವ್ಯಾನ್‌ ನಡುವೆ  ಪಲ್ಟಿಯಾಗಿದೆ. ಈ ದುರಂತ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದರು ಮತ್ತು 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತಕ್ಕೆ ಒಳಗಾದವರನ್ನು ಧುಪ್ಗುರಿ ಮತ್ತು ಜಲ್ಪೈಗುರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. 

ಅಪಘಾತದ ಬಗ್ಗೆ ಮಾಹಿತಿ ತಿಳಿದೊಡನೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಕ್ರೇನ್‌ಗಳು ಮತ್ತು ಆಂಬುಲೆನ್ಸ್‌ಗಳಿಗೆ ವ್ಯವಸ್ಥೆ ಮಾಡಲಾಗಿದೆ. ಸಮಯೋಚಿತ ಚಿಕಿತ್ಸೆಯಿಂದಾಗಿ ಗಾಯಗೊಂಡವರಲ್ಲಿ ಕೆಲವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ - Gujarat: ಸೂರತ್‌ನಲ್ಲಿ ಭೀಕರ ಅಪಘಾತ, 15 ಮಂದಿ ಮೃತ

ಅಪಘಾತಕ್ಕೆ ದಟ್ಟವಾದ ಮಂಜು ಕಾರಣ :
ಪಶ್ಚಿಮ ಬಂಗಾಳದ (West Bengal) ಜಲ್ಪೈಗುರಿಯ ಧುಪ್ಗುರಿಯಲ್ಲಿ ಮಂಗಳವಾರ ತಡರಾತ್ರಿ WB61A/2492 ಸಂಖ್ಯೆಯ ಟ್ರಕ್. ರಾಷ್ಟ್ರೀಯ ಹೆದ್ದಾರಿ ಎನ್‌ಎಚ್‌ 31 ಡಿ ಮಾಯನತಾಲಿಗೆ ತೆರಳುತ್ತಿತ್ತು. ಪ್ರತ್ಯಕ್ಷದರ್ಶಿಗಳ ಪ್ರಕಾರ ಟ್ರಕ್ ಚಾಲಕನು ತನ್ನ ಮುಂದೆ ಓಡುತ್ತಿದ್ದ ಟ್ರಕ್ ಅನ್ನು ಹಿಂದಿಕ್ಕಲು ಪ್ರಯತ್ನಿಸಿದನು.  ಅದೇ ಸಮಯದಲ್ಲಿ ತಪ್ಪಾದ ದಿಕ್ಕಿನಿಂದ ಬರುತ್ತಿದ್ದ ಅತಿ ವೇಗದ ವಾಹನಗಳು ಡಿಕ್ಕಿ ಹೊಡೆದವು. ಏಕಕಾಲದಲ್ಲಿ ಹಲವಾರು ವಾಹನಗಳು ಡಿಕ್ಕಿ ಹೊಡೆದು ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಟ್ರಕ್‌ನ (Truck) ಓವರ್‌ಲೋಡ್ ಕೂಡ ಅಪಘಾತಕ್ಕೆ ಕಾರಣವಾಗಬಹುದು.

ಇದನ್ನೂ ಓದಿ - Maharashtra: ಆಸ್ಪತ್ರೆಯಲ್ಲಿ ಭೀಕರ ಬೆಂಕಿ, 10 ಅಮಾಯಕ ಮಕ್ಕಳ ಸಜೀವ ದಹನ

ಟ್ರಕ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ :
ರಾತ್ರಿ 9.30 ಕ್ಕೆ ಅಪಘಾತದ (Accident) ಸುದ್ದಿ ಬಂದ ಕೂಡಲೇ ಎಲ್ಲರನ್ನೂ ಆಸ್ಪತ್ರೆಗೆ ಸೇರಿಸುವತ್ತ ಗಮನ ಹರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ಈ ಭೀಕರ ಅಪಘಾತದಲ್ಲಿ ಇಬ್ಬರು ಪುರುಷರು, ಆರು ಮಹಿಳೆಯರು ಮತ್ತು ಮಕ್ಕಳು ಸಹ ಸಾವನ್ನಪ್ಪಿದ್ದಾರೆ. ಮೃತಪಟ್ಟವರಿಗೆ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಮಾಹಿತಿಯ ಪ್ರಕಾರ, ಟ್ರಕ್ ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News