ಲಾರಿ-ಬಸ್ ನಡುವೆ ಡಿಕ್ಕಿ; 13 ಮಂದಿಗೆ ಗಂಭೀರ ಗಾಯ

ಘಟನೆಯಲ್ಲಿ ಬಸ್ ಚಾಲಕ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ವಿಶಾಖಪಟ್ಟಣದ ಕಿಂಗ್ ಜಾರ್ಜ್ ಆಸ್ಪತ್ರೆಗೆ ದಾಖಲಿಸಲಾಗಿದೆ.   

Last Updated : Jul 24, 2019, 02:11 PM IST
ಲಾರಿ-ಬಸ್ ನಡುವೆ ಡಿಕ್ಕಿ; 13 ಮಂದಿಗೆ ಗಂಭೀರ ಗಾಯ title=

ವಿಶಾಖಪಟ್ಟಣ: ಆಂಧ್ರಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ 13 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಮುಂಜಾನೆ ಸಂಭವಿಸಿದೆ. 

ವಿಶಾಖಪಟ್ಟಣದ ನೂತನಗುಂಟ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಮುಂಜಾನೆ 4 ಗಂಟೆ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಗೊಂಡವರನ್ನು ಅನಕಪಲ್ಲಿ ಪ್ರದೇಶದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಬಸ್ ಚಾಲಕ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ವಿಶಾಖಪಟ್ಟಣದ ಕಿಂಗ್ ಜಾರ್ಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಶ್ರಿಕಾಕುಳಂ ಜಿಲ್ಲೆಯ ಪಲಸಾದಿಂದ ಕೃಷ್ಣ ಜಿಲ್ಲೆಯ ವಿಜಯವಾಡಕ್ಕೆ ಬಸ್ ಸಾಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಸ್ಸಿನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದೆ. ಘಟನೆ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 

Trending News