ನವದೆಹಲಿ: ಛತ್ತಿಸ್ ಗಢದ ಸುಕ್ಮಾ ಸಮೀಪದ ಗೋಲಾಪಲ್ಲಿ ಮತ್ತು ಕೊಂತ ನಡುವಣ ಅರಣ್ಯ ಪ್ರದೇಶದಲ್ಲಿ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 14 ನಕ್ಸಲರು ಮೃತಪಟ್ಟಿದ್ದಾರೆ. ಅಲ್ಲದೆ 16 ಕ್ಕೂ ಹೆಚ್ಚು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಕ್ಸಲರು ಬೀಡು ಬಿಟ್ಟಿರುವ ಮಾಹಿತಿ ಹಿನ್ನೆಲೆಯಲ್ಲಿ DRG, STF ಮತ್ತು CRPF ತಂಡ ಕಾರ್ಯಾಚರಣೆ ಆರಂಭಿಸಿತ್ತು. ಈ ಸಮಯದಲ್ಲಿ ಭದ್ರತಾ ಪಡೆಗಳು ನಲ್ಕಟಂಗ್ ಗ್ರಾಮದ ಸಮೀಪ ಬಂದಾಗ ಮಾವೋವಾದಿಗಳು ಗುಂಡಿನ ಮಳೆ ಸುರಿಸಿದರು. ಇದಕ್ಕೆ ಪ್ರತಿಕ್ರಿಯೆಯಾಗಿ ಪೊಲೀಸರು ಪ್ರತಿ ದಾಳಿ ನಡೆಸಿದರು. ಈ ದಾಳಿಯಲ್ಲಿ 14 ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ.
ಮೂಲಗಳ ಪ್ರಕಾರ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವಣ ಗುಂಡಿನ ಚಕಮಕಿ ಮುಂದುವರೆದಿದೆ ಎನ್ನಲಾಗಿದೆ.