ಮನೆಗೆ ಬೆಂಕಿ; 16 ತಿಂಗಳ ಮಗು ಸಾವು

ಶಾರ್ಟ್ ಸರ್ಕ್ಯೂಟ್ ಕಾರಣದಿಂದಾಗಿ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು, ಐವರು ಮಕ್ಕಳನ್ನೂ ಒಳಗೊಂಡಂತೆ ಕುಟುಂಬದ 8 ಸದಸ್ಯರು ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದಾರೆ. 

Last Updated : Jan 19, 2019, 04:54 PM IST
ಮನೆಗೆ ಬೆಂಕಿ; 16 ತಿಂಗಳ ಮಗು ಸಾವು title=

ಔರಂಗಾಬಾದ್: ಮಹಾರಾಷ್ಟ್ರದ ಔರಂಗಬಾದ್ ಜಿಲ್ಲೆಯಲ್ಲಿ ಮನೆಯೊಂಡು ಬೆಂಕಿಗೆ ಆಹುತಿಯಾದ ಪರಿಣಾಮ 16 ತಿಂಗಳ ಮಗು ಸಾವನ್ನಪ್ಪಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. 

ಶಾರ್ಟ್ ಸರ್ಕ್ಯೂಟ್ ಕಾರಣದಿಂದಾಗಿ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು, ಐವರು ಮಕ್ಕಳನ್ನೂ ಒಳಗೊಂಡಂತೆ ಕುಟುಂಬದ 8 ಸದಸ್ಯರು ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದಾರೆ. ಔರಂಗಾಬಾದ್ ಜಿಲ್ಲೆಯ ಶೆವ್ದಾ ಗ್ರಾಮದ ಕರಮದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಈ ಘಟನೆಯಲ್ಲಿ ತೀವ್ರ ಸುಟ್ಟ ಗಾಯಗಳಾಗಿದ್ದ 16 ತಿಂಗಳ ಹೆಣ್ಣು ಮಗು ನೂರ್ ಬೇಗ್ ಅನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಕುಟುಂಬದ ಉಳಿದ ಸದಸ್ಯರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 

Trending News