ಪ್ರಪಾತಕ್ಕೆ ಉರುಳಿ ಬಿದ್ದ ಕಾರು; ಮೂವರು ಸಾವು, 6 ಮಂದಿಗೆ ಗಾಯ

ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಆರು ಮಂದು ಗಂಭೀರವಾಗಿ ಗಾಯಗೊಂಡಿದ್ದಾರೆ. 

Last Updated : Sep 24, 2019, 03:20 PM IST
ಪ್ರಪಾತಕ್ಕೆ ಉರುಳಿ ಬಿದ್ದ ಕಾರು; ಮೂವರು ಸಾವು, 6 ಮಂದಿಗೆ ಗಾಯ title=
Pic Courtesy: ANI

ಘನ್ಸಾಲಿ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಉತ್ತರಾಖಂಡದ ಘನ್ಸಾಲಿ ಜಿಲ್ಲೆಯ ಸಮೀಪ ಮಂಗಳವಾರ ನಡೆದಿದೆ. 

ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಆರು ಮಂದು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು ಅತಿ ವೇಗವಾಗಿ ಚಲಿಸುತ್ತಿದ್ದುದೇ ಈ ಅಪಘಾತಕ್ಕೆ ಕಾರಣ ಎಂದು ಎಸ್‌ಡಿಆರ್‌ಎಫ್ ಸಿಬ್ಬಂದಿ ತಿಳಿಸಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. 

Trending News