ಅಹಮದಾಬಾದ್‌ನಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ; ಕನಿಷ್ಠ 10 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮನೆಯ ಸುತ್ತ ಕಿರಿದಾದ ಬೀದಿಗಳಿರುವ ಕಾರಣ ಪರಿಹಾರ ಮತ್ತು ರಕ್ಷಣಾ ಕಾರ್ಯಗಳು ಕಷ್ಟಕರವಾಗುತ್ತಿವೆ ಎಂದು ಹೇಳಲಾಗಿದೆ.

Last Updated : Sep 5, 2019, 03:53 PM IST
ಅಹಮದಾಬಾದ್‌ನಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ; ಕನಿಷ್ಠ 10 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ title=
Image Credits: ANI

ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನಲ್ಲಿ ಗುರುವಾರ ಮೂರು ಅಂತಸ್ತಿನ ಕಟ್ಟಡ ಕುಸಿದಿದೆ. ಅಹಮದಾಬಾದ್‌ನ ಅಮ್ರೈವಾಡಿ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದ್ದು, ಕಟ್ಟಡದ ಭಗ್ನಾವಶೇಷಗಳ ಅಡಿಯಲ್ಲಿ ಸುಮಾರು 10 ಜನರು ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ. 

ಅವಶೇಷಗಳಡಿ ಸಿಲುಕಿರುವವರನ್ನು ಹೊರತೆಗೆಯಲು ಅಗ್ನಿಶಾಮಕ ದಳದ ತಂಡವು ಸ್ಥಳೀಯ ಜನರೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಈವರೆಗೆ ಐದು ಜನರನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ. ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಕಟ್ಟಡ ತುಂಬಾ ಹಳೆಯದಾಗಿದ್ದರಿಂದ ಈ ಅನಾಹುತ ಸಂಭವಿಸಿರಬಹುದು ಎನ್ನಲಾಗಿದೆ.  ಮನೆಯ ಸುತ್ತ ಕಿರಿದಾದ ಬೀದಿಗಳಿರುವ ಕಾರಣ ಪರಿಹಾರ ಮತ್ತು ರಕ್ಷಣಾ ಕಾರ್ಯಗಳು ಕಷ್ಟಕರವಾಗುತ್ತಿವೆ ಎಂದು ಹೇಳಲಾಗುತ್ತಿದೆ. 
 

Trending News