J&K:ಭದ್ರತಾಪಡೆಗಳು ನಡೆಸಿದ ಎನ್ಕೌಂಟರ್ ನಲ್ಲಿ ಮೂವರು ಉಗ್ರರ ಸಾವು, ಓರ್ವ ಪೇದೆ ಕೂಡ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದಿಂದ ಭಯೋತ್ಪಾದಕರ ನಿರ್ಮೂಲನಾ ಕಾರ್ಯಾಚರಣೆ ಮುಂದುವರೆದಿದೆ.

Last Updated : Aug 30, 2020, 09:41 AM IST
J&K:ಭದ್ರತಾಪಡೆಗಳು ನಡೆಸಿದ ಎನ್ಕೌಂಟರ್ ನಲ್ಲಿ ಮೂವರು ಉಗ್ರರ ಸಾವು, ಓರ್ವ ಪೇದೆ ಕೂಡ ಹುತಾತ್ಮ title=

ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಿಂದ ಭಯೋತ್ಪಾದಕರ ನಿರ್ಮೂಲನಾ ಕಾರ್ಯಾಚರಣೆ ಮುಂದುವರೆದಿದೆ. ಶನಿವಾರ ರಾತ್ರಿ ಸಿಆರ್‌ಪಿಎಫ್ ಮತ್ತು ಪೊಲೀಸರ ಜಂಟಿ ನಾಕಾ ಮೇಲೆ  ಶ್ರೀನಗರದ ಪಂಥಾ ಚೌಕ್‌ ನಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಬಳಿಕ ಭದ್ರತಾ ಪಡೆಯ ಯೋಧರು ಇಡೀ ಪ್ರದೇಶವನ್ನು ಸುತ್ತುವರೆದು ಶೋಧ ಕಾರ್ಯಾಚರಣೆ ನಡೆಸಿದ್ದರು.  ಶೋಧ ಕಾರ್ಯಾಚರಣೆ ವೇಳೆ ಭಯೋತ್ಪಾದಕರು ಮತ್ತೊಮ್ಮೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಭದ್ರತಾ ಪಡೆಯ ಯೋಧರು ಉಗ್ರರಿಗೆ ತಕ್ಕ ಉತ್ತರ ನೀಡಿದ್ದಾರೆ. ಇದುವರೆಗೆ ಒಟ್ಟು ಮೂವರು ಉಗ್ರರನ್ನು ಮಟ್ಟಹಾಕಿದ್ದಾರೆ.

ಈ ವೇಳೆ ಎರಡೂ ಕಡೆಯಿಂದ ನಡೆದ ಭಾರಿ ಗುಂಡಿನ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಎಎಸ್ಐ ಬಾಬು ರಾಮ್ ಹೆಸರಿನ ಪೇದೆ ಹುತಾತ್ಮರಾಗಿದ್ದಾರೆ. ಆದರೆ, ಪ್ರದೇಶದಲ್ಲಿ ಪೊಲೀಸ್ ಕಾರ್ಯಾಚರಣೆ ಇನ್ನು ಮುಂದುವರೆದಿದೆ.

ಇದಕ್ಕೂ ಮೊದಲು ಪ್ರಾಂತ್ಯದ ಶೋಪಿಯನ್ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎನ್ಕೌಂಟರ್ ನಲ್ಲಿ ನಾಲ್ವರು ಉಗ್ರರು ಹತರಾಗಿದ್ದು, ಓರ್ವ ಶರಣಾಗಿದ್ದ.  ಹತ್ಯೆಗೀಡಾಗಿಡ್ಡ ಈ ಉಗ್ರರಲ್ಲಿ ಜಮ್ಮು ಮತ್ತು ಕಾಶ್ಮೀರದ ಗ್ರಾಮ ಮುಖ್ಯಸ್ಥನನ್ನು ಹತ್ಯೆಗೈದ ಇಬ್ಬರು ಉಗ್ರರು ಕೂಡ ಶಾಮೀಲಾಗಿದ್ದರು. ಗುಪ್ತಚರ ಇಲಾಖೆಯಿಂದ ಬಂದ ಮಾಹಿತಿಯ ಮೇರೆಗೆ ಈ ದಾಳಿ ನಡೆಸಲಾಗಿತ್ತು ಎಂದು ಬಳಿಕ ಪೊಲೀಸರು ತಿಳಿಸಿದ್ದರು.

Trending News