ಮಂಡಿ: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಇಂದು ಪ್ರಯಾಣಿಸುತ್ತಿದ್ದ ಪಿಕ್ ಅಪ್ ವಾಹನವೊಂದು ರಸ್ತೆ ಪಕ್ಕದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ಏಳು ಮಂದಿ ಮೃತಪಟ್ಟಿದ್ದಾರೆ.
ದೇಶದ ಈ ಭಾಗದಲ್ಲಿ ತಾರಕಕ್ಕೇರಿದ ಕರೋನಾ, ಮತ್ತೆ ಜಾರಿಯಾಗಲಿದೆಯೇ ಲಾಕ್‌ಡೌನ್?
ಇಂದು ಮುಂಜಾನೆ 2.30ರ ಸುಮಾರಿಗೆ ಮ೦ಡಿ ಸಮೀಪದ ಪುಲ್ಘರಾತ್ ಎಂಬಲ್ಲಿ ಈ ಘಟನೆ ನಡೆದಿದ್ದು, ಆರು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ವಲಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
'Work From Home'ಹಿನ್ನೆಲೆ ಕೇವಲ 3 ತಿಂಗಳಲ್ಲಿ 34 ಲಕ್ಷ PC ಮಾರಾಟ
ಈ ಘಟನೆಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ(PM Narendra Modi), 'ಹಿಮಾಚಲ ಪ್ರದೇಶದ ಮ೦ಡಿಯಲ್ಲಿ ರಸ್ತೆ ಅಪಘಾತ ಸುದ್ದಿ ಕೇಳಿ ತೀವ್ರ ನೋವಾಯಿತು. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಸರ್ಕಾರ ನಿರತವಾಗಿದೆ. ಮೃತರ ಕುಟುಂಬಗಳಿಗೆ ನಾನು ನನ್ನ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರಿಗೆ ಶೀಘ್ರದಲ್ಲೇ ಗುಣಮುಖರಾಗಲಿ ಎಂದು ಹಾರೈಸುತ್ತೇನೆ' ಎಂದು ಟ್ವೀಟ್ ಮಾಡಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೂಡ ಈ ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕೋವಿಂದ್, 'ಹಿಮಾಚಲ ಪ್ರದೇಶದ ಮ೦ಡಿಯಲ್ಲಿ ನಡೆದ ರಸ್ತೆ ಅಪಘಾತದ ಬಗ್ಗೆ ತಿಳಿದು ನನಗೆ ತೀವ್ರ ದುಃಖವಾಗಿದೆ. ಸ್ಥಳೀಯ ಆಡಳಿತದಿಂದ ಸಂತ್ರಸ್ತರ ನೆರವಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳಿಗೆ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ' ಎಂದು ಹೇಳಿದರು.
GSTಗೆ ಅನುಗುಣವಾಗಿ Flat ದರ ಇಳಿಕೆ ಮಾಡದೆ ಇರುವ ಬಿಲ್ಡರ್ ಗಳ ಮೇಲೆ ಕ್ರಮ ಆರಂಭಿಸಿದ NAA