ಒಡಿಶಾ: ರೈಸ್ ಮಿಲ್ ಗೋಡೆ ಕುಸಿದು ನಾಲ್ವರು ಸಾವು

ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಸ್ಥಳಿಯರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

Last Updated : Jun 9, 2019, 11:03 AM IST
ಒಡಿಶಾ: ರೈಸ್ ಮಿಲ್ ಗೋಡೆ ಕುಸಿದು ನಾಲ್ವರು ಸಾವು title=
Pic Courtesy: ANI

ಧೆಂಕನಾಲ್: ರೈಸ್ ಮಿಲ್ ಕಾಂಪೌಂಡ್ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ಬೆಳಿಗ್ಗೆ ಒಡಿಶಾದ ಧೆಂಕನಾಲ್ ಸಮೀಪದ ಅಲಾಸುವಾ ಮಾರುಕಟ್ಟೆಯಲ್ಲಿ ನಡೆದಿದೆ.

ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಸ್ಥಳಿಯರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೆ, ಗೋಡೆ ಕುಸಿದ ಪರಿಣಾಮ ಪಕ್ಕದಲ್ಲೇ ನಿಲ್ಲಿಸಿದ್ದ ಹಲವು ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ಏತನ್ಮಧ್ಯೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಗೋಡೆ ಅವಶೇಷಗಳ ತೆರವು ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.

ಈ ಹಿಂದೆಯೇ ಗೋಡೆಯು ಶಿಥಿಲಾವಸ್ಥೆಯಲ್ಲಿರುವ ಬಗ್ಗೆ ಜಿಲ್ಲಾಡಳಿತಕ್ಕೆ ವಿಷಯ ತಿಳಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ಈ ದುರ್ಘಟನೆ ನಡೆದಿದೆ ಎಂದು ಸ್ಥಳಿಯರು ಆರೋಪಿಸಿದ್ದಾರೆ.

Trending News