ಕಾರು, ಆಟೋಗೆ ಗುದ್ದಿ ಫ್ಲೈ ಓವರ್‌ನಿಂದ ಕೆಳಗೆ ಬಿದ್ದ ಟ್ರಕ್; ನಾಲ್ವರಿಗೆ ಗಾಯ

ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಮೂಲಗಳ ಪ್ರಕಾರ ಟ್ರಕ್ ಚಾಲಕ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ. 

Last Updated : Oct 18, 2019, 08:51 AM IST
ಕಾರು, ಆಟೋಗೆ ಗುದ್ದಿ ಫ್ಲೈ ಓವರ್‌ನಿಂದ ಕೆಳಗೆ ಬಿದ್ದ ಟ್ರಕ್; ನಾಲ್ವರಿಗೆ ಗಾಯ title=

ಮುಂಬೈ: ಅತೀ ವೇಗವಾಗಿ ಚಲಿಸುತ್ತಿದ್ದ ಟ್ರಕ್ ಒಂದು ಕಾರು ಮತ್ತು ಆಟೋ ರಿಕ್ಷಾಗೆ ಗುದ್ದಿದ ಬಳಿಕ ಫ್ಲೈ ಓವರ್ ನಿಂದ ಕೆಳಕ್ಕೆ ಬಿದ್ದ ಘಟನೆ ಗುರುವಾರ ರಾತ್ರಿ ಮುಂಬೈನ ಪಶ್ಚಿಮ ಎಕ್ಸ್ ಪ್ರೆಸ್ ವೇ ಹೈವೇ ಬಳಿಯ ವಿಲೇ ಪಾರ್ಲೇ ಪ್ರದೇಶದಲ್ಲಿ ನಡೆದಿದೆ.

ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಮೂಲಗಳ ಪ್ರಕಾರ ಟ್ರಕ್ ಚಾಲಕ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ. 

ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕ್ರೇನ್ ಮೂಲಕ ನಜ್ಜುಗುಜ್ಜಾದ ಟ್ರಕ್ ಅನ್ನು ರಸ್ತೆಯಿಂದ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.  ಅಪಘಾತದಿಂದಾಗಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Trending News