ಉತ್ತರಪ್ರದೇಶ: ಹೋಟೆಲ್ ಅಗ್ನಿ ದುರಂತದಲ್ಲಿ ನಾಲ್ವರು ಸಾವು

ಲಖನೌನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ.

Last Updated : Jun 19, 2018, 01:48 PM IST
ಉತ್ತರಪ್ರದೇಶ: ಹೋಟೆಲ್ ಅಗ್ನಿ ದುರಂತದಲ್ಲಿ ನಾಲ್ವರು ಸಾವು title=
Pic: ANI

ಲಖನೌ: ಉತ್ತರಪ್ರದೇಶದ ಲಖನೌನ ಚಾರ್ಬಾಗ್ ನಗರದಲ್ಲಿರುವ ಪ್ರಸಿದ್ಧ ಅಂತರರಾಷ್ಟ್ರೀಯ ಹೋಟೆಲ್‌ ವಿರಾಟ್'ನಲ್ಲಿ ಮಂಗಳವಾರ ಮುಂಜಾನೆ ಬೆಂಕಿ ಅವಘಡ ಸಂಭವಿಸಿದ್ದು, ನಾಲ್ವರು ಸಾವಿಗೀಡಾಗಿದ್ದಾರೆ.

"ಹೋಟೆಲ್'ನಿಂದ 50ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿ ಅವಘಡಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ" ಎಂದು ಲಖನೌ ಐಜಿ ಎಸ್.ಪಾಂಡೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆರಂಭದಲ್ಲಿ ಹೋಟೆಲ್ನ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಕೊಂಡಿದ್ದು, ನಂತರ ಎಲ್ಲಾ ಮಹಡಿಗಳಿಗೂ ವಿಸ್ತರಿಸಿದೆ. ಅಷ್ಟೇ ಅಲ್ಲದೆ, ಬೆಂಕಿಯ ಜ್ವಾಲೆ ಹೆಚ್ಚಾಗಿದ್ದರಿಂದ ಅಕ್ಕ ಪಕ್ಕದ ಕಟ್ಟಡಗಳಿಗೂ ಬೆಂಕಿ ತಗುಲಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಈ ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದ್ದು, ತಪ್ಪು ಯಾರೇ ಮಾಡಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಐಜಿ ಎಸ್‌.ಪಾಂಡೆ ತಿಳಿಸಿದ್ದಾರೆ.

Trending News