ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ರಸ್ತೆ ಅಪಘಾತ, 5 ಸಾವು

ಅಪಘಾತದಲ್ಲಿ 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು,ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.  

Last Updated : Jun 28, 2019, 10:18 AM IST
ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ರಸ್ತೆ ಅಪಘಾತ, 5 ಸಾವು title=

ಆಗ್ರಾ: ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್-ವೇನಲ್ಲಿ ಶುಕ್ರವಾರ ಬೆಳಿಗ್ಗೆ ಭೀಕರ ಅಪಘಾತ  ಸಂಭವಿಸಿರುವ ಘಟನೆ ಎಕ್ಸ್‌ಪ್ರೆಸ್‌ವೇನ ಫತೇಹಾಬಾದ್ ಕಟ್‌ನಲ್ಲಿ ನಡೆದಿದೆ.

ಮಾಹಿತಿಯ ಪ್ರಕಾರ, ಬಿಹಾರದಿಂದ ಬಸ್ ಜೈಪುರಕ್ಕೆ ಹೋಗುತ್ತಿದ್ದ ಬಸ್ ಮರಳಿನ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ. 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಪೊಲೀಸರು ಸ್ಥಳಕ್ಕೆ ತಲುಪಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಬುಧವಾರ ಕೂಡ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಪ್ರಯಾಣಿಕರಿಂದ ತುಂಬಿದ ಬಸ್ ಈ ಘಟನೆಯಲ್ಲಿ ಅಪಘಾತಕ್ಕೀಡಾಗಿದ್ದು,  ಸುಮಾರು 35 ಪ್ರಯಾಣಿಕರು ಗಾಯಗೊಂಡಿದ್ದರು. ಅವರಲ್ಲಿ 9 ಮಂದಿ ಸ್ಥಿತಿ ಚಿಂತಾಜನಕವಾಗಿತ್ತು. ಈ ಘಟನೆ ಕನ್ನೌಜ್‌ನ ತಿರ್ವಾ ಪೊಲೀಸ್ ಠಾಣೆಯಲ್ಲಿ ನಡೆದಿದ್ದು,  ದೆಹಲಿಯಿಂದ ಲಕ್ನೋಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿತ್ತು.

Trending News